ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಲೋಕಾಯುಕ್ತ ಪದಚ್ಯುತಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್

|
Google Oneindia Kannada News

ಬೆಂಗಳೂರು, ನವೆಂಬರ್ 23 : ಉಪ ಲೋಕಾಯುಕ್ತ ಸುಭಾಷ್‌ ಬಿ ಅಡಿ ಅವರ ಪದಚ್ಯುತಿ ಬಗ್ಗೆ ಕಾಂಗ್ರೆಸ್ ಶಾಸಕರು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪದಚ್ಯುತಿ ನಿರ್ಣಯಕ್ಕೆ ಬೆಂಬಲ ನೀಡುವುದಿಲ್ಲ ಎಂದು ಜೆಡಿಎಸ್ ಈಗಾಗಲೇ ಸ್ಪಷ್ಟಪಡಿಸಿದೆ.

ಸೋಮವಾರ ಮಧ್ಯಾಹ್ನ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿ ಮಾಡಿದ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ ಮತ್ತು ಇತರ ಕಾಂಗ್ರೆಸ್ ಶಾಸಕರು ಪದಚ್ಯುತಿ ನಿರ್ಣಯ ಮಂಡನೆ ಮಾಡಲು ಅವಕಾಶ ನೀಡುವಂತೆ ಮನವಿ ಸಲ್ಲಿಸಿದರು. [ಲೋಕಾಯುಕ್ತ ಪದಚ್ಯುತಿಗೆ ಒಂದಾದ ಬಿಜೆಪಿ, ಜೆಡಿಎಸ್]

kagodu thimmappa

ಕಾಂಗ್ರೆಸ್‌ನ 78 ಶಾಸಕರು ಉಪ ಲೋಕಾಯುಕ್ತ ಸುಭಾಷ್‌ ಬಿ ಅಡಿ ಅವರ ಪದಚ್ಯುತಿ ಕುರಿತ ನಿರ್ಣಯಕ್ಕೆ ಸಹಿ ಹಾಕಿದ್ದಾರೆ. 5 ದಿನಗಳ ಅಧಿವೇಶನ ಬಾಕಿ ಇದ್ದು, ನಿರ್ಣಯವನ್ನು ಸದನದಲ್ಲಿ ಮಂಡನೆ ಮಾಡಲು ಎಂದು ಸ್ಪೀಕರ್ ಅವಕಾಶ ನೀಡಲಿದ್ದಾರೆ? ಎಂಬುದು ಕುತೂಹಲ ಮೂಡಿಸಿದೆ. [ಲೋಕಾಯುಕ್ತ ಪದಚ್ಯುತಿ ಹೇಗೆ?]

ಮುಂದಿನ ಕ್ರಮವೇನು? : ಶಾಸಕರು ಸಹಿ ಮಾಡಿ ನೀಡಿರುವ ಪ್ರಸ್ತಾವನೆಯನ್ನು ಪರಿಶೀಲನೆ ನಡೆಸುವ ಸ್ಪೀಕರ್ ಈ ಬಗ್ಗೆ ಸದನದಲ್ಲಿ ಚರ್ಚೆ ಮಾಡಲು ಅವಕಾಶ ನೀಡುತ್ತಾರೆ. ಎರಡೂ ಸದನದಲ್ಲಿ ನಿರ್ಣಯಕ್ಕೆ ಒಪ್ಪಿಗೆ ಸಿಕ್ಕರೆ. ಮುಂದಿನ ಕ್ರಮಕ್ಕಾಗಿ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಸಲ್ಲಿಕೆ ಮಾಡಲಾಗುತ್ತದೆ. [ಉಪ ಲೋಕಾಯುಕ್ತ ಪದಚ್ಯುತಿ]

ಯಾವ ಆರೋಪಗಳಿವೆ? : ಹಿಂದೆ ಉಪ ಲೋಕಾಯುಕ್ತರಾಗಿದ್ದ ಎಸ್‌.ಬಿ.ಮಜಗೆ ಅವರು ಸುಭಾಷ್‌ ಅಡಿ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಈ ಆರೋಪಗಳ ಆಧಾರದ ಮೇಲೆ ಅವರನ್ನು ಪದಚ್ಯುತಿಗೊಳಿಸುವ ನಿರ್ಣಯವನ್ನು ಮಂಡನೆ ಮಾಡಲು ಕಾಂಗ್ರೆಸ್ ಮನವಿ ಸಲ್ಲಿಸಿದೆ.

ಉಪ ಲೋಕಾಯುಕ್ತ ಪದಚ್ಯುತಿ ನಿರ್ಣಯಕ್ಕೆ ಜೆಡಿಎಸ್ ಬೆಂಬಲ ಸೂಚಿಸುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಈ ನಿರ್ಣಯಕ್ಕೆ ಬೆಂಬಲ ನೀಡುತ್ತದೆಯೇ? ಕಾದು ನೋಡಬೇಕು.

English summary
78 Congress MLAs signed petition submitted to Karnataka Assembly speaker Kogodu Timmappa for removal of Upalokayukta Justice Subhash B Adi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X