ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ : ಎಸ್‌ಪಿಪಿ ಜನಾರ್ದನ ರಾಜೀನಾಮೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 21 : ಕರ್ನಾಟಕ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸುತ್ತಿರುವ ಎಸ್‌ಐಟಿ ಪರವಾಗಿ ವಾದ ಮಾಡುತ್ತಿದ್ದ ಎಸ್‌ಪಿಪಿ ಕೆ.ಜನಾರ್ದನ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೆರವಾಗಿರುವ ಲೋಕಾಯುಕ್ತರ ಹುದ್ದೆಗೆ ನ್ಯಾ.ವಿಕ್ರಂಜಿತ್ ಸೇನ್ ಹೆಸರು ಕೇಳಿಬರುತ್ತಿದೆ.

ಎಸ್‌ಐಪಿ ಪರವಾಗಿ ವಾದ ಮಾಡಲು ಕರ್ನಾಟಕ ಸರ್ಕಾರ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಕೆ.ಜನಾರ್ದನ್ ಅವರನ್ನು ನೇಮಿಸಿತ್ತು. ಆದರೆ, ಸೋಮವಾರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಸ್‌ಐಟಿಯ ಕಾರ್ಯವೈಖರಿಗೆ ಬೇಸತ್ತು ಅವರು ರಾಜೀನಾಮೆ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. [ಅಶ್ವಿನ್ ರಾವ್ ವಿರುದ್ಧ ಮತ್ತೊಂದು ಚಾರ್ಜ್ ಶೀಟ್]

lokayukta

ಕರ್ನಾಟಕ ಲೋಕಾಯುಕ್ತದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ 8ಕ್ಕೂ ಹೆಚ್ಚು ಆರೋಪಿಗಳನ್ನು ಎಸ್‌ಐಟಿ ಬಂಧಿಸಿದೆ. ಯಾವ ಆರೋಪಿಗಳಿಗೂ ಇದುವರೆಗೂ ಜಾಮೀನು ಸಿಕ್ಕಿಲ್ಲ. ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಪುತ್ರನ ಬಂಧನವಾದ ಹಿನ್ನಲೆಯಲ್ಲಿ ಲೋಕಾಯುಕ್ತ ನ್ಯಾ.ವೈ.ಭಾಸ್ಕರರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.[ಲೋಕಾಯುಕ್ತ ಹುದ್ದೆಗೆ ಎಸ್.ಆರ್.ನಾಯಕ್ ಹೆಸರು?]

ವೈಯಕ್ತಿಕ ಕಾರಣದಿಂದ ರಾಜೀನಾಮೆ : ಜನಾರ್ದನ ಅವರ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, 'ವೈಯಕ್ತಿಕ ಕಾರಣಗಳಿಂದಾಗಿ ಅವರು ರಾಜೀನಾಮೆ ನೀಡಿದ್ದಾರೆ. ಶೀಘ್ರದಲ್ಲೇ ಹೊಸಬರನ್ನು ನೇಮಿಸಲಾಗುತ್ತದೆ' ಎಂದು ಹೇಳಿದರು. [ಡಿಐಜಿಯಾಗಿ ಬಡ್ತಿ ಪಡೆದ ಎಸ್ಪಿ ಸೋನಿಯಾ ನಾರಂಗ್]

ವಿಕ್ರಂಜಿತ್ ಸೇನ್ ನೂತನ ಲೋಕಾಯುಕ್ತ? : ನ್ಯಾಯಮೂರ್ತಿ ವೈ.ಭಾಸ್ಕರರಾವ್ ರಾಜೀನಾಮೆಯಿಂದ ತೆರವಾಗಿರುವ ಲೋಕಾಯುಕ್ತ ಹುದ್ದೆಗೆ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಸ್.ಆರ್.ನಾಯಕ್ ಮತ್ತು ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳಾಗಿರುವ ವಿಕ್ರಂಜಿತ್ ಸೇನ್ ಅವರ ಹೆಸರು ಕೇಳಿಬರುತ್ತಿದೆ.

ವಿಕ್ರಂಜಿತ್ ಸೇನ್ ಅವರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ, ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿರುವ ಅವರು ಡಿಸೆಂಬರ್ 30ರಂದು ನಿವೃತ್ತರಾಗಲಿದ್ದಾರೆ. ಆನಂತರ ಸರ್ಕಾರ ಅವರ ಬಳಿ ಮಾತುಕತೆ ನಡೆಸುವ ಸಾಧ್ಯತೆ ಇದೆ.

English summary
K Janardhan submitted his resignation for the post of Special Public Prosecutor. The Karnataka government appointed Janardhan as SPP in all cases to be taken up by SIT.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X