{ "@context": "https://schema.org", "@type": "NewsArticle", "mainEntityOfPage":{ "@type":"WebPage", "@id":"http://kannada.oneindia.com/news/karnataka/criminal-case-against-the-illegal-school-in-karnataka-088673.html" }, "headline": "ಅನಧಿಕೃತ ಶಾಲೆಗಳ ವಿರುದ್ಧ ಕ್ರಿಮಿನಲ್ ಕೇಸ್", "url":"http://kannada.oneindia.com/news/karnataka/criminal-case-against-the-illegal-school-in-karnataka-088673.html", "image": { "@type": "ImageObject", "url": "http://kannada.oneindia.com/img/1200x60x675/2014/10/30-kimmaneratnakar.jpg", "width": "1200", "height":"675" }, "thumbnailUrl":"http://kannada.oneindia.com/img/128x50/2014/10/30-kimmaneratnakar.jpg", "datePublished": "2014-10-30 09:51:53", "dateModified": "2014-10-30T09:51:53+05:30", "author": { "@type": "Person", "url": "https://kannada.oneindia.com/authors/gururajks.html", "name": "Gururaj" }, "publisher": { "@type": "Organization", "name": "Oneindia Kannada", "url":"https://kannada.oneindia.com", "sameAs" : [ "https://www.facebook.com/oneindiakannada","https://twitter.com/oneindiakannada"], "logo": { "@type": "ImageObject", "url": "https://kannada.oneindia.com/images/amp-oneindia-logo.png", "width": "189", "height": "60" } }, "articleSection":"Karnataka", "description": "Karnataka Primary and secondary education minister Kimmane Ratnakar said, department will be filed a criminal case against the illegal school in state.", "keywords": "Kimmane Rathnakar, School, Karnataka, Education, Students, Criminal case against the illegal school, ಅನಧಿಕೃತ ಶಾಲೆಗಳ ವಿರುದ್ಧ ಕ್ರಿಮಿನಲ್ ಕೇಸ್, ಕಿಮ್ಮನೆ ರತ್ನಾಕರ್, ಶಾಲೆ, ಕರ್ನಾಟಕ, ಶಿಕ್ಷಣ, ವಿದ್ಯಾರ್ಥಿಗಳು", "articleBody":"ಬೆಂಗಳೂರು, ಅ.30 : ರಾಜ್ಯದಲ್ಲಿರುವ ಅನಧಿಕೃತ ಶಾಲೆಗಳ ವಿರುದ್ಧ ಶಿಕ್ಷಣ ಇಲಾಖೆ ಹೋರಾಟ ಆರಂಭಿಸಿದೆ. ಒಂದು ತಿಂಗಳಿನಲ್ಲಿ ಇಂತಹ ಶಾಲೆಗಳ ಪಟ್ಟಿ ತಯಾರಿಸಿ, ಅವುಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಚಿವ ಕಿಮ್ಮನೆ ರತ್ನಾಕರ್ ಸೂಚನೆ ನೀಡಿದ್ದಾರೆ.ಬುಧವಾರ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಶಾಲೆಯ ನೋಂದಣಿ ವಿವರ, ಅಲ್ಲಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮಾಹಿತಿ, ಶಾಲೆಯ ಒಳ ಹಾಗೂ ಹೊರಗಿನ ವಾತಾವರಣ ಮುಂತಾದ ಮಾಹಿತಿಗಳನ್ನು ಸಂಗ್ರಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.ಬೆಂಗಳೂರಿನ ಜಾಲಹಳ್ಳಿ ಸಮೀಪದ ಆರ್ಕಿಡ್ಸ್ ಶಾಲೆ ಮಾದರಿಯಲ್ಲೇ ರಾಜ್ಯಾದ್ಯಂತ ಅನುಮತಿ ಪಡೆಯದೆಯೇ ಶಾಲೆಗಳನ್ನು ನಡೆಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಸಂಬಂಧ ರಾಜ್ಯದ ಎಲ್ಲ 204 ಬಿಇಒಗಳು ಕೂಡಲೇ ಪಟ್ಟಿ ಸಿದ್ಧಪಡಿಸಿ ಅನಧಿಕೃತ ಶಾಲೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು. ಆರ್ಕಿಡ್ಸ್ ಶಾಲೆ ಆರಂಭ, ಪೋಷಕರ ಪ್ರತಿಭಟನೆಕೆಲವು ಶಾಲೆಗಳು ಕನ್ನಡ ಮಾಧ್ಯಮಕ್ಕೆ ಅನುಮತಿ ಪಡೆದು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸಚಿವರು ಸೂಚಿಸಿದರು.ರಾಜ್ಯದಲ್ಲಿ ಯಾವ ಶಾಲೆಗಳು ಅಧಿಕೃತ ಎಂಬುದರ ಬಗ್ಗೆ ಪೋಷಕರು www.schooleducation.kar.nic.in ವೆಬ್& zwnj ಸೈಟ್& zwnj ನಲ್ಲಿ ಮಾಹಿತಿ ಪಡೆಯಬಹುದು ಎಂದು ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು." }
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನಧಿಕೃತ ಶಾಲೆಗಳ ವಿರುದ್ಧ ಕ್ರಿಮಿನಲ್ ಕೇಸ್

|
Google Oneindia Kannada News

ಬೆಂಗಳೂರು, ಅ.30 : ರಾಜ್ಯದಲ್ಲಿರುವ ಅನಧಿಕೃತ ಶಾಲೆಗಳ ವಿರುದ್ಧ ಶಿಕ್ಷಣ ಇಲಾಖೆ ಹೋರಾಟ ಆರಂಭಿಸಿದೆ. ಒಂದು ತಿಂಗಳಿನಲ್ಲಿ ಇಂತಹ ಶಾಲೆಗಳ ಪಟ್ಟಿ ತಯಾರಿಸಿ, ಅವುಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಚಿವ ಕಿಮ್ಮನೆ ರತ್ನಾಕರ್ ಸೂಚನೆ ನೀಡಿದ್ದಾರೆ.

ಬುಧವಾರ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಶಾಲೆಯ ನೋಂದಣಿ ವಿವರ, ಅಲ್ಲಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮಾಹಿತಿ, ಶಾಲೆಯ ಒಳ ಹಾಗೂ ಹೊರಗಿನ ವಾತಾವರಣ ಮುಂತಾದ ಮಾಹಿತಿಗಳನ್ನು ಸಂಗ್ರಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Kimmane Rathnakar

ಬೆಂಗಳೂರಿನ ಜಾಲಹಳ್ಳಿ ಸಮೀಪದ ಆರ್ಕಿಡ್ಸ್ ಶಾಲೆ ಮಾದರಿಯಲ್ಲೇ ರಾಜ್ಯಾದ್ಯಂತ ಅನುಮತಿ ಪಡೆಯದೆಯೇ ಶಾಲೆಗಳನ್ನು ನಡೆಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಸಂಬಂಧ ರಾಜ್ಯದ ಎಲ್ಲ 204 ಬಿಇಒಗಳು ಕೂಡಲೇ ಪಟ್ಟಿ ಸಿದ್ಧಪಡಿಸಿ ಅನಧಿಕೃತ ಶಾಲೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು. [ಆರ್ಕಿಡ್ಸ್ ಶಾಲೆ ಆರಂಭ, ಪೋಷಕರ ಪ್ರತಿಭಟನೆ]

ಕೆಲವು ಶಾಲೆಗಳು ಕನ್ನಡ ಮಾಧ್ಯಮಕ್ಕೆ ಅನುಮತಿ ಪಡೆದು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಸಚಿವರು ಸೂಚಿಸಿದರು.

ರಾಜ್ಯದಲ್ಲಿ ಯಾವ ಶಾಲೆಗಳು ಅಧಿಕೃತ ಎಂಬುದರ ಬಗ್ಗೆ ಪೋಷಕರು www.schooleducation.kar.nic.in ವೆಬ್‌ಸೈಟ್‌ನಲ್ಲಿ ಮಾಹಿತಿ ಪಡೆಯಬಹುದು ಎಂದು ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

English summary
Karnataka Primary and secondary education minister Kimmane Ratnakar said, department will be filed a criminal case against the illegal school in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X