ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆ ರವಿ ಪ್ರಕರಣ : ಸಿಬಿಐ ತನಿಖೆ ಬಗ್ಗೆ ಕಾಂಗ್ರೆಸ್‌ನಲ್ಲಿ ಎರಡು ಬಣ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಮಾ. 19 : ಐಎಎಸ್ ಅಧಿಕಾರಿ ಡಿಕೆ ರವಿ ಅಸಹಜ ಸಾವಿನ ಪ್ರರಕಣವನ್ನು ಸಿಬಿಐ ತನಿಖೆಗೆ ವಹಿಸಬೇಕೆ, ಬೇಡವೇ? ಎಂಬ ಬಗ್ಗೆ ಸರ್ಕಾರ ಇಂದು ತೀರ್ಮಾನ ಕೈಗೊಳ್ಳಲಿದೆ. ಇದಕ್ಕಾಗಿ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಕಾಂಗ್ರೆಸ್‌ನಲ್ಲಿ ಎರಡು ಬಣಗಳು ಸೃಷ್ಟಿಯಾಗಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಕರೆದಿದ್ದರು. ಆದರೆ ವಿಧಾನಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಿರುವುದರಿಂದ ಬೇಗ ಸಭೆ ಆರಂಭವಾಗಿದೆ. ಇದರಲ್ಲಿ ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. [ಡಿಕೆ ರವಿ ಪ್ರಕರಣ ಇಂದಿನ ಪ್ರಮುಖ ಬೆಳವಣಿಗೆಗಳು]

CM Siddaramaiah

ಸಿಬಿಐ ತನಿಖೆಗೆ ವಹಿಸುವ ಬಗ್ಗೆ ಸಚಿವರಲ್ಲಿ ಎರಡು ಬಣಗಳು ಸೃಷ್ಟಿಯಾಗಿವೆ. ಒಂದು ಕಡೆ ಗೃಹ ಸಚಿವ ಕೆಜೆ ಜಾರ್ಜ್‌ ಸಿಬಿಐ ತನಿಖೆ ಬೇಡ ಎಂದು ಪಟ್ಟು ಹಿಡಿದ್ದಾರೆ. ಆದರೆ, ರಾಜ್ಯಾದ್ಯಂತ ಬರುತ್ತಿರುವ ಒತ್ತಡದ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ವಹಿಸುವುದು ಉತ್ತಮ ಎಂದು ಹಲವು ಸಚಿವರು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ. [ಈ ಸಾವು ನ್ಯಾಯವೇ ಮತ ಹಾಕಿ]

ಸಿಬಿಐ ಪರ ಪೂಜಾರಿ ಬ್ಯಾಟಿಂಗ್ : ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಸೇರಿದಂತೆ ಕೆಲವು ನಾಯಕರು ಸಿಬಿಐ ತನಿಖೆಗೆ ವಹಿಸುವುದು ಉತ್ತಮ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಪೂಜಾರಿ ಅವರು ಪತ್ರಿಕಾಗೋಷ್ಠಿ ನಡೆಸಿ ಬಹಿರಂಗವಾದ ಹೇಳಿಕೆ ನೀಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ತನಿಖೆ ಬಗ್ಗೆ ವಿವರವಾದ ಚರ್ಚೆ ನಡೆದು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಪ್ರತಿಪಕ್ಷಗಳ ಹೋರಾಟ : ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಲಿದೆ ಎಂಬ ನಂಬಿಕೆಯಲ್ಲಿವೆ. ಈಗಾಗಲೇ ಸಿಬಿಐ ತನಿಖೆಗೆ ಒತ್ತಾಯಿಸಿ ಎರಡು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿವೆ. ಗುರುವಾರ ಕಲಾಪ ಆರಂಭವಾಗುತ್ತಿದ್ದಂತೆ ಸದನದ ಬಾವಿಗಿಳಿದು ಈ ಬಗ್ಗೆ ಧರಣಿ ನಡೆಸಿವೆ. ಆದ್ದರಿಂದ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಸರ್ಕಾರ ಸಿಬಿಐಗೆ ವಹಿಸದಿದ್ದರೆ ಪ್ರತಿಪಕ್ಷಗಳು ತಮ್ಮ ಹೋರಾಟವನ್ನು ಮುಂದುವರೆಸಲಿವೆ. [ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ]

ಕುಟುಂಬದ ಒತ್ತಡ : ವಿಧಾನಸೌಧದ ಮುಂಭಾಗದಲ್ಲಿ ಬುಧವಾರ ಸಂಜೆ ಪ್ರತಿಭಟನೆ ನಡೆಸಿದ ಡಿಕೆ ರವಿ ಕುಟುಂಬದವರು ಸಿಬಿಐ ತನಿಖೆಗೆ ವಹಿಸದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ತನಿಖೆ ಬಗ್ಗೆ ಎರಡು ದಿನದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

English summary
Karnataka government is divided on handing over the probe to the CBI in the DK Ravi death case. Chief Minister and his supporters feel that a CBI probe must, But Home Minister K.J.George have not been in favor of a probe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X