ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಟಿ ಕಚೇರಿಗೆ ವಿಚಾರಣೆಗೆ ಬಂದ ಡಿ.ಕೆ.ಶಿವಕುಮಾರ್

ಐಟಿ ಅಧಿಕಾರಿಗಳ ವಿಚಾರಣಗೆ ಆಗಮಿಸಿದ ಡಿ.ಕೆ.ಶಿವಕುಮಾರ್ನಾಲ್ಕು ದಿನಗಳ ಕಾಲ ಡಿಕೆಶಿ ಮನೆ ಮೇಲೆ ಐಟಿ ದಾಳಿ ನಡೆದಿತ್ತು

|
Google Oneindia Kannada News

ಬೆಂಗಳೂರು, ಆ.06 : ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆದಾಯ ತೆರಿಗೆ ಇಲಾಖೆ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಬರುವಂತೆ ಐಟಿ ಅಧಿಕಾರಿಗಳು ಸಚಿವರಿಗೆ ಸಮನ್ಸ್ ಜಾರಿ ಮಾಡಿತ್ತು.

ಡಿಕೆ ಶಿವಕುಮಾರ್ ಮೇಲೆ ಐಟಿ ದಾಳಿ: ಮುಂದಿರುವ ದಾರಿಯೇನು?ಡಿಕೆ ಶಿವಕುಮಾರ್ ಮೇಲೆ ಐಟಿ ದಾಳಿ: ಮುಂದಿರುವ ದಾರಿಯೇನು?

ಸೋಮವಾರ ಕ್ವಿನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಗೆ ಸಚಿವ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಜೊತೆ ಆಗಮಿಸಿದರು. ಇಂದು ಮಧ್ಯಾಹ್ನದ ತನಕ ಅಧಿಕಾರಿಗಳು ಸಚಿವರ ವಿಚಾರಣೆ ನಡೆಸುವ ಸಾಧ್ಯತೆ ಇದೆ.

dk shivakumar

ಐಟಿ ಕಚೇರಿ ಮುಂದೆ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್, 'ವಿಚಾರಣೆಗೆ ಬರುವಂತೆ ಸೂಚಿಸಿದ್ದರಿಂದ ಆಗಮಿಸಿದ್ದೇನೆ. ಅಧಿಕಾರಿಗಳು ನಡೆಸುವ ವಿಚಾರಣೆಗೆ ಸಹಕಾರ ನೀಡುತ್ತೇನೆ' ಎಂದು ಹೇಳಿದರು.

ಮನಿ ಲಾಂಡ್ರಿಂಗ್: ಡಿಕೆ ಶಿವಕುಮಾರ್ ವಿರುದ್ಧ ಸಿಬಿಐಗೆ ದೂರುಮನಿ ಲಾಂಡ್ರಿಂಗ್: ಡಿಕೆ ಶಿವಕುಮಾರ್ ವಿರುದ್ಧ ಸಿಬಿಐಗೆ ದೂರು

'ಗುಜರಾತ್ ಕಾಂಗ್ರೆಸ್ ಶಾಸಕರ ಜೊತೆ ಅಹಮದಾಬಾದ್ ಗೆ ಹೋಗಬೇಕಿದೆ. ಆದರೆ, ಇಲ್ಲಿನ ಪ್ರಕ್ರಿಯೆಗಳಿಂದಾಗಿ ತೆರಳಿಲ್ಲ. ಈ ಪ್ರಕ್ರಿಯೆ ಪೂರ್ಣಗೊಂಡರೆ ತೆರಳುತ್ತೇನೆ' ಎಂದರು.

ಆಗಸ್ಟ್ 2ರಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಸದಾಶಿವ ನಗರದಲ್ಲಿರುವ ನಿವಾಸ ಸೇರಿದಂತೆ ಐವತ್ತಕ್ಕೂ ಹೆಚ್ಚು ಕಡೆ ಐಟಿ ದಾಳಿ ನಡೆದಿತ್ತು. ಮೈಸೂರಿನಲ್ಲಿರುವ ಡಿ.ಕೆ.ಶಿವಕುಮಾರ್ ಮಾನವ ಮನೆಯ ಮೇಲೆಯೂ ದಾಳಿ ನಡೆಸಲಾಗಿತ್ತು. ಶನಿವಾರ ಬೆಳಗ್ಗೆ ದಾಳಿ ಮುಕ್ತಾಯಗೊಂಡಿದ್ದು, ಅಧಿಕಾರಿಗಳು ದಾಖಲೆ ಪತ್ರಗಳನ್ನು ತೆಗೆದುಕೊಂಡು ಹೋಗಿದ್ದರು.

ಐಟಿ ದಾಳಿ: ಡಿಕೆಶಿಗೆ ಸರಿಯಾಗಿ 'ಕೈ' ಕೊಡ್ತಾ ಕಾಂಗ್ರೆಸ್ ಹೈಕಮಾಂಡ್?ಐಟಿ ದಾಳಿ: ಡಿಕೆಶಿಗೆ ಸರಿಯಾಗಿ 'ಕೈ' ಕೊಡ್ತಾ ಕಾಂಗ್ರೆಸ್ ಹೈಕಮಾಂಡ್?

ಡಿ.ಕೆ.ಶಿವಕುಮಾರ್ ಅವರ ವಿದೇಶ ಪ್ರವಾಸಕ್ಕೆ ನಿರ್ಬಂಧ ವಿಧಿಸಿರುವ ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಸಮನ್ಸ್ ಹಿನ್ನಲೆಯಲ್ಲಿ ಇಂದು ಸಚಿವರು ವಿಚಾರಣೆಗೆ ಹಾಜರಾಗಿದ್ದಾರೆ.

English summary
Energy Minister minister DK Shivakumar on Monday, August 07, 2017 appeared for IT enquiry. DK Shivamumar who is being raided by IT officials on August 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X