ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಭವನಕ್ಕೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿ!

|
Google Oneindia Kannada News

ಬೆಂಗಳೂರು, ಆ.5 : ಇಂಧನ ಸಚಿವ ಡಿ.ಕೆ.ಶಿವಕುಮಾರ್ ರಾಜಭವನಕ್ಕೆ ಭೇಟಿ ನೀಡಿದ್ದು, ಗುಜರಾತ್ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿದ್ದಾರೆ. ನಾಲ್ಕು ದಿನ ಐಟಿ ಅಧಿಕಾರಿಗಳು ಅವರ ವಿಚಾರಣೆ ನಡೆಸಿದ್ದು ಶನಿವಾರ ಅವರು ಮನೆಯಿಂದ ಹೊರ ಬಂದಿದ್ದಾರೆ.

ಪಂಚನಾಮೆ ಬಂದ ನಂತರ ದಾಳಿಯ ವಿವರ ನೀಡುವೆ: ಡಿಕೆಶಿ ಮಾತುಪಂಚನಾಮೆ ಬಂದ ನಂತರ ದಾಳಿಯ ವಿವರ ನೀಡುವೆ: ಡಿಕೆಶಿ ಮಾತು

ಈಗಲ್ಟನ್ ಗಾಲ್ಫ್ ರೆಸಾರ್ಟ್ ನಲ್ಲಿರುವ ಗುಜರಾತ್ ಕಾಂಗ್ರೆಸ್ ಶಾಸಕರು ಶನಿವಾರ ರಾಜಭವನ ಮತ್ತು ವಿಧಾನಸೌಧಕ್ಕೆ ಭೇಟಿ ನೀಡಿದರು. ಬೆಳಗ್ಗೆ ಮನೆಯಿಂದ ಹೊರಟ ಡಿ.ಕೆ.ಶಿವಕುಮಾರ್ ವಿಜಯನಗಕ್ಕೆ ಭೇಟಿ ನೀಡಿದ ಬಳಿಕ ರಾಜಭವನಕ್ಕೆ ತೆರಳಿದರು.

DK Shivakumar meets Gujarat MLAs at Karnataka Raj Bhavan

ರಾಜಭವನದಲ್ಲಿ ಗುಜರಾತ್ ಶಾಸಕರನ್ನು ಭೇಟಿ ಮಾಡಿದ ಡಿ.ಕೆ.ಶಿವಕುಮಾರ್, ಹೊರಗೆ ಬಂದ ತಕ್ಷಣ ಶಾಸಕರ ಜೊತೆ ಫೋಟೋಗೆ ಫೋಸ್ ಕೊಟ್ಟರು. ನೊಣವಿನಕೆರೆ ಅಜ್ಜಯ್ಯನನ್ನು ಭೇಟಿ ಮಾಡಿದ ಬಳಿಕ ಶಿವಕುಮಾರ್ ನಿರಾಳರಾಗಿದ್ದು, ನಗುನಗುತ್ತಾ ಮಾಧ್ಯಮಗಳ ಮುಂದೆ ಕಾಣಿಸಿಕೊಂಡರು.

ಬಳಿಕ ಶಾಸಕರ ಜೊತೆ ವಿಧಾನಸೌಧಕ್ಕೆ ತೆರಳಿದರು. ಅಲ್ಲಿ ಗಾಂಧಿ ಪ್ರತಿಮೆ ಬಳಿಕ ಡಿ.ಕೆ.ಶಿವಕುಮಾರ್ ಅವರನ್ನು ಮಾತನಾಡಿಸಲು ಮಾಧ್ಯಮದವರು ಯತ್ನಿಸಿದರು. ಆಗ 'ದಯವಿಟ್ಟು ನನ್ನನ್ನು ಬಿಟ್ಟುಬಿಡಿ. ನಾನು ಯಾರ ಜೊತೆಯೂ ಮಾತಾಡಲ್ಲ' ಎಂದು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

English summary
After the three days of Income Tax department raid, Minister DK Shivakumar met Gujarat Congress MLAs in Karnataka Raj Bhavan on August 5, 2017 and poses with them. ITax department raided the residence of power minister DK Shivakumar on August 2, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X