ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರಗಳು : ಸಿದ್ದರಾಮಯ್ಯ ಭೇಟಿಯಾದ ಕಲ್ಲಪ್ಪ ಹಂಡಿಭಾಗ್ ಕುಟುಂಬ

|
Google Oneindia Kannada News

ಬೆಂಗಳೂರು, ಜುಲೈ 25 : ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರ ಕುಟುಂಬ ಸದಸ್ಯರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಹಂಡಿಭಾಗ್ ಅವರ ಆತ್ಮಹತ್ಯೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ, ಕಲ್ಲಪ್ಪ ಅವರ ಪತ್ನಿ ವಿದ್ಯಾ, ತಂದೆ ಮತ್ತು ತಾಯಿ, ಸಹೋದರ ಮುಂತಾದವರು ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಅವರನ್ನು ಭೇಟಿ ಮಾಡಿದರು. [ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ]

ಕಲ್ಲಪ್ಪ ಹಂಡಿಭಾಗ್ ಅಮಾಯಕನಾಗಿದ್ದು ಯಾವುದೇ ತಪ್ಪು ಮಾಡಿರಲಿಲ್ಲ, ಅವನ ಆತ್ಮಹತ್ಯೆಗೆ ಕಾರಣರಾದವರನ್ನು ಶಿಕ್ಷೆಗೊಳಪಡಿಸಬೇಕು ಎಂದು ಮನವಿ ಸಲ್ಲಿಸಿದರು. 'ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಆತ್ಮಹತ್ಯೆಗೆ ಯಾರೇ ಕಾರಣರಾಗಿದ್ದರೂ ಅವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ' ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.[ಕಲ್ಲಪ್ಪ ಸಾವಿಗೆ ಕಿರುಕುಳ ಕಾರಣವಲ್ಲ: ಎಸ್ಪಿ ಸಂತೋಷ್]

ಉದ್ಯಮಿಯನ್ನು ಅಪಹರಣ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರು, ಜುಲೈ 5ರಂದು ಬೆಳಗಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.....[ಕಲ್ಲಪ್ಪ ಪ್ರಕರಣದಲ್ಲಿ ಕಿಡ್ನಾಪ್ ಆಗಿದ್ದ ತೇಜಸ್ ಹೇಳಿದ್ದೇನು?]

ಸರ್ಕಾರಿ ಉದ್ಯೋಗದ ಭರವಸೆ

ಸರ್ಕಾರಿ ಉದ್ಯೋಗದ ಭರವಸೆ

'ಈಗಾಗಲೇ ಸದನದಲ್ಲಿ ಘೋಷಣೆ ಮಾಡಿದಂತೆ ಮಾನವೀಯತೆಯ ದೃಷ್ಟಿಯಿಂದ ಕಲ್ಲಪ್ಪ ಹಂಡಿಭಾಗ್ ಅವರ ಪತ್ನಿಗೆ ತತ್ಸಮಾನ ಉದ್ಯೋಗವನ್ನು ನೀಡಲಾಗುವುದು' ಎಂದು ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಸಹೋದರನಿಗೆ ಉದ್ಯೋಗದ ಭರವಸೆ

ಸಹೋದರನಿಗೆ ಉದ್ಯೋಗದ ಭರವಸೆ

ಆತ್ಮಹತ್ಯೆ ಮಾಡಿಕೊಂಡ ಕಲ್ಲಪ್ಪ ಅವರ ಸಹೋದರನಿಗೆ ಸಹಕಾರ ಸಂಘವೊಂದರಲ್ಲಿ ಉದ್ಯೋಗ ಕೊಡಿಸುವುದಾಗಿ ಯಶವಂತಪುರ ಕ್ಷೇತ್ರದ ಶಾಸಕರಾದ ಎಸ್.ಟಿ.ಸೋಮಶೇಖರ್ ಭರವಸೆ ನೀಡಿದರು.

'ಆತ್ಮಹತ್ಯೆಗೆ ಕಾರಣವಾದವರನ್ನು ಶಿಕ್ಷಿಸಿ'

'ಆತ್ಮಹತ್ಯೆಗೆ ಕಾರಣವಾದವರನ್ನು ಶಿಕ್ಷಿಸಿ'

ತಮ್ಮ ಪುತ್ರ ಕಲ್ಲಪ್ಪ ಹಂಡಿಭಾಗ್ ಅಮಾಯಕನಾಗಿದ್ದು ಯಾವುದೇ ತಪ್ಪು ಮಾಡಿರಲಿಲ್ಲ, ಅವನ ಆತ್ಮಹತ್ಯೆಗೆ ಕಾರಣರಾದವರನ್ನು ಶಿಕ್ಷೆಗೊಳಪಡಿಸಬೇಕು ಕಲ್ಲಪ್ಪ ಪೋಷಕರು ಮನವಿ ಮಾಡಿದರು.

'ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ'

'ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ'

'ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆಗೆ ಕಾರಣರಾದವರು ಯಾರೇ ಇರಲಿ, ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಕರಣದ ತನಿಖೆಯನ್ನು ಸರ್ಕಾರ ಈಗಾಗಲೇ ಸಿಐಡಿಗೆ ವಹಿಸಿದೆ' ಎಂದು ಸಿದ್ದರಾಮಯ್ಯ ಅವರು ಕಲ್ಲಪ್ಪ ಕುಟುಂಬಕ್ಕೆ ಭರವಸೆ ನೀಡಿದರು.

ಅವರ ದುಃಖದಲ್ಲಿ ಭಾಗಿಯಾಗುತ್ತೇನೆ

ಅವರ ದುಃಖದಲ್ಲಿ ಭಾಗಿಯಾಗುತ್ತೇನೆ

ಕಲ್ಲಪ್ಪ ಹಂಡಿಭಾಗ್ ಅವರ ತಂದೆ, ತಾಯಿ, ಪತ್ನಿ, ಮಗು, ಸಹೋದರ ಹಾಗೂ ಸಹೋದರಿಯನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಅವರು, ಅವರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಮತ್ತು ಸರ್ಕಾರ ಅವರ ಕುಟುಂಬದ ಬೆಂಬಲಕ್ಕೆ ಇದೆ ಎಂಬ ಭರವಸೆ ನೀಡಿಕಳಿಸಿದರು.

English summary
DYSP Kallappa Handibag family met Karnataka Chief Minister Siddaramaiah on Monday, July 25, 2016. Chikkamagaluru deputy superintendent of police (DySP) Kallappa Handibag committed suicide on July 5.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X