ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣಪತಿ ಆತ್ಮಹತ್ಯೆ: ಜುಲೈ 14ರಂದು ಕೊಡಗು ಬಂದ್

By Madhusoodhan
|
Google Oneindia Kannada News

ಮಡಿಕೇರಿ, ಜುಲೈ, 13: ಡಿವೈಎಸ್ಪಿ ಎಂ.ಕೆ.ಗಣಪತಿ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಜುಲೈ 14 ಗುರುವಾರ ಕೊಡಗು ಜಿಲ್ಲಾ ಬಂದ್ ಕರೆ ನೀಡಿವೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಈ ಸಂಬಂಧ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚನೆ ನೀಡಿದ್ದಾರೆ.[ನ್ಯಾಯಾಂಗ ತನಿಖೆ ಮೇಲೆ ನಂಬಿಕೆ ಇಲ್ಲ: ಗಣಪತಿ ಪತ್ನಿ ಪಾವನಾ]

madikeri

ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಗಳು. ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಮಾಡುವುದು, ಸಾರಿಗೆ-ಸಂಪರ್ಕದಲ್ಲಿ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ನೋಡಿಕೊಳ್ಳುವುದು. [ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?]

ಹಾಗೆಯೇ ಜು.14 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಸೋಮವಾರಪೇಟೆ ಹಾಗೂ ವಿರಾಜಪೇಟೆಯ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ಥವಾಗದಂತೆ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಲೋಕೋಪಯೋಗಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಾಗೃತರಾಗಿರಬೇಕು. ಕೆಎಸ್ ಆರ್ ಟಿಸಿ. ಬಸ್ ಸಂಚಾರ ಕಲ್ಪಿಸುವುದು, ಜಿಲ್ಲಾ ಆಸ್ಪತ್ರೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಶ್ರುಶ್ರೂಷಕರು ಕಡ್ಡಾಯವಾಗಿ ಹಾಜರಿದ್ದು, ಆರೋಗ್ಯ ಸೇವೆ ಒದಗಿಸುವಂತೆ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಸರ್ಜನ್ ಅವರಿಗೆ ತಿಳಿಸಿದರು.['ಗಣಪತಿ ಅವರಿಗೆ ಅವರ ವಿರುದ್ಧದ ಕೇಸ್ ಗಳು ಕಾಡುತ್ತಿತ್ತು']

ಅಂಗಡಿ ಮುಂಗಟ್ಟುಗಳು ಸಂಬಂಧಿಸಿದಂತೆ ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿದರೆ ಜಿಲ್ಲಾಡಳಿತದ ಆಕ್ಷೇಪವಿಲ್ಲ. ಆದರೆ ಸಾರ್ವಜನಿಕರ ಆಸ್ತಿಪಾಸ್ತಿ ರಕ್ಷಣೆ ಮುಖ್ಯವಾಗಿದೆ. ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಪರಿಸ್ಥಿತಿ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಸೂಚಿಸಿದರು.[ಎಂ.ಕೆ.ಗಣಪತಿ ಅವರ ಮೇಲಿದ್ದ ಆರೋಪಗಳು]

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಮಾಡಿಕೊಂಡಿದೆ. ರಾಜ್ಯ ಹೆದ್ದಾರಿಗಳಲ್ಲಿ ಸುಗಮ ಸಾರಿಗೆ ಸಂಪರ್ಕ, ದ್ವಿತೀಯ ಪಿ.ಯು. ಪೂರಕ ಪರೀಕ್ಷೆ ಮತ್ತಿತರ ಸಂಬಂಧ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಬಂದ್ ಹಿನ್ನೆಲೆ ಸಾರಿಗೆ ಪ್ರಾಧಿಕಾರದಿಂದ 20 ವಾಹನಗಳನ್ನು ಪೊಲೀಸ್ ಇಲಾಖೆಗೆ ಒದಗಿಸುವಂತೆ ಅವರು ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಟಿ.ಸ್ವಾಮಿ ಅವರು ಜುಲೈ, 14 ರಂದು ಪದವಿ ಪೂರ್ವ ಪೂರಕ ಪರೀಕ್ಷೆ ನಿಗಧಿಯಂತೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 128 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಕೆ ಎಸ್ ಆರ್ ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಗೀತಾ ಅವರು ಬಂದ್ ಪರಿಸ್ಥಿತಿ ನೋಡಿಕೊಂಡು ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.

ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂಗಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಜಿ.ಆರ್.ಬಸವರಾಜು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಜೆ.ಜಿ.ಜಾದವ್ ಅವರು ಹಲವು ಮಾಹಿತಿ ನೀಡಿದರು. ಜಿ.ಪಂ.ಸಿಇಓ ಚಾರುಲತಾ ಸೋಮಲ್, ತಹಸೀಲ್ದಾರ್ ಕುಂಜಮ್ಮ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತಿತರರು ಇದ್ದರು.

English summary
Various organisations, including Kogadu District Auto Drivers and Owners Union and Kogadu Private Bus Owners' Association, have extended their support to the Kogadu bandh call given by Hindu Jagran Vedike and other pro-Hindu organisations on Thursday, July 14. The Kodagu Disitric administration will take all precautionary steps.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X