ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ, ಶುಕ್ರವಾರದ 10 ಬೆಳವಣಿಗೆಗಳು

|
Google Oneindia Kannada News

ಬೆಂಗಳೂರು, ಜುಲೈ 08 : ಹಿರಿಯ ಪೊಲೀಸ್ ಅಧಿಕಾರಿಗಳು, ಮಾಜಿ ಗೃಹ ಸಚಿವರ ಹೆಸರನ್ನು ಪ್ರಸ್ತಾಪಿಸಿ, ಭ್ರಷ್ಟ ಅಧಿಕಾರಿಗಳು, ರಾಜಕಾರಣಿಗಳ ಮೇಲೆ ಇಡೀ ರಾಜ್ಯ ಸಿಡಿದೇಳುವಂತೆ ಮಾಡಿ, ಆತ್ಮಹತ್ಯೆಗೆ ಶರಣಾಗಿರುವ ಮಂಗಳೂರು ಡಿವೈಎಸ್ಪಿ ಎಂ.ಕೆ. ಗಣಪತಿ ಅವರು ಶುಕ್ರವಾರ ಸಂಜೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿನ ಗಣಪತಿ ಅವರ ತಂದೆಯ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಿತು. ಡಿವೈಎಸ್‌ಪಿ ಗಣಪತಿ ಅವರ ಹಿರಿಯ ಪುತ್ರ ನೇಹಲ್ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಸರ್ಕಾರ ವತಿಯಿಂದ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. [ಪೊಲೀಸ್ ಇಲಾಖೆಯ ವಿವಾದಗಳು ಒಂದಾ ಎರಡಾ ಮೂರಾ?]

'ನನಗೆ ಮುಂದೆ ಏನಾದರೂ ಆದರೆ ಅದಕ್ಕೆ ಲೋಕಾಯುಕ್ತ ಐಜಿಪಿ ಪ್ರಣಬ್‌ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರೇ ಕಾರಣ' ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿರುವ ಎಂ.ಕೆ.ಗಣಪತಿ ಅವರು ಹಲವು ಪ್ರಶ್ನೆಗಳನ್ನು ಉಳಿಸಿ ಹೋಗಿದ್ದಾರೆ. [ಸರ್ಕಾರಿ ಅಧಿಕಾರಿಗಳ ಆತ್ಮಹತ್ಯೆಗೆ ಕಾರಣ ಯಾರು?]

ಗಣಪತಿ ಅವರ ಸಾವಿಗೆ ಹಿರಿಯ ಅಧಿಕಾರಿಗಳು, ಸಚಿವ ಕೆ.ಜೆ.ಜಾರ್ಜ್ ಕಾರಣ ಎಂಬ ಆರೋಪ ಕೇಳಿಬಂದಿರುವುದರಿಂದ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿದೆ. ಸಿಐಡಿ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರ ನೇತೃತ್ವದ ತಂಡ ತನಿಖೆಯನ್ನು ಆರಂಭಿಸಿದೆ. ಶುಕ್ರವಾರ ನಡೆದ ಬೆಳವಣಿಗೆಗಳ ಚಿತ್ರಣ ಇಲ್ಲಿದೆ..... [ಸಚಿವ ಜಾರ್ಜ್ ಬಂಧಿಸಲು ಆಗ್ರಹಿಸಿ ಬೀದಿಗಿಳಿದ ಬಿಜೆಪಿ]

ಓಂ ಪ್ರಕಾಶ್, ಸಿದ್ದರಾಮಯ್ಯ ಭೇಟಿ

ಓಂ ಪ್ರಕಾಶ್, ಸಿದ್ದರಾಮಯ್ಯ ಭೇಟಿ

ಶುಕ್ರವಾರ ಬೆಳಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. ನಂತರ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದರು.

ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

ಗಣಪತಿ ಆತ್ಮಹತ್ಯೆ ಪ್ರಕರಣದ ಮಾಹಿತಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಂದ ಪಡೆದುಕೊಂಡ ಸಿದ್ದರಾಮಯ್ಯ ಅವರು, ಓಂ ಪ್ರಕಾಶ್ ಅವರನ್ನು ತರಾಟೆಗೆ ತೆಗೆದುಕೊಂಡರು. 'ಗಣಪತಿ ಅವರು ನಿಮ್ಮ ಅನುಮತಿ ಇಲ್ಲದೆ ಖಾಸಗಿ ವಾಹಿನಿಗೆ ಸಂದರ್ಶನ ನೀಡಿದ್ದು ಹೇಗೆ?, ಅವರ ಮನಸ್ಥಿತಿಯನ್ನು ತಿಳಿದುಕೊಳ್ಳಲು ನಿಮ್ಮಿಂದ ಆಗಲಿಲ್ಲವೆ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಸಿಐಡಿ ತನಿಖೆಗೆ ಆದೇಶ

ಸಿಐಡಿ ತನಿಖೆಗೆ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಮಾತನಾಡಿ 'ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ದುರಾದೃಷ್ಟಕರ. ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸಲಾಗುತ್ತದೆ. ಸಿಬಿಐ ತನಿಖೆಯ ಅಗತ್ಯವಿಲ್ಲ. ತನಿಖೆಯ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಹೇಳಿದರು.

ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ

ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ

'ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಪ್ರತಿಪಕ್ಷಗಳು ನನ್ನನ್ನು ವಿನಾಕಾರಣ ಟಾರ್ಗೆಟ್ ಮಾಡುತ್ತಿವೆ. ಅಧಿಕಾರಿಗೆ ಮಾನಸಿಕ ಕಿರುಕುಳ ನೀಡುವ ಪ್ರಶ್ನೆಯೇ ಇಲ್ಲ. ಒಮ್ಮೆ ಮಾತ್ರ ಗಣಪತಿ ಅವರು ನನ್ನನ್ನು ಭೇಟಿ ಮಾಡಿದ್ದರು. ಪ್ರತಿಪಕ್ಷಗಳು ಒತ್ತಾಯಿಸಿದ ತಕ್ಷಣ ರಾಜೀನಾಮೆ ಕೊಡಲು ಆಗುವುದಿಲ್ಲ' ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ ಕೊಟ್ಟರು.

ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಬೆಂಗಳೂರು, ಮಡಿಕೇರಿ, ರಾಮನಗರ, ಹಾಸನ, ಚಿಕ್ಕಮಗಳೂರು, ಮಡಿಕೇರಿ ಮುಂತಾದ ಕಡೆ ಪ್ರತಿಭಟನೆ ನಡೆಸಿತು. ' ಈ ಪ್ರಕರಣ ಗೃಹ ಖಾತೆ ಮತ್ತು ಸಿಎಂ ಅವರ ಆಡಳಿತ ವೈಫಲ್ಯವನ್ನು ತೋರಿಸುತ್ತಿದೆ, ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಜಾರ್ಜ್ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈ ಬಿಡಬೇಕು' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.

ಗಣಪತಿ ಅವರ ಕೊನೆಯ ಮಾತುಗಳು

ಡಿವೈಎಸ್‌ಪಿ ಗಣಪತಿ ಅವರ ಕೊನೆಯ ಮಾತುಗಳು

ಕೆಂಪಯ್ಯ, ಪರಮೇಶ್ವರ ಭೇಟಿ

ಕೆಂಪಯ್ಯ, ಪರಮೇಶ್ವರ ಭೇಟಿ

ಗೃಹ ಸಚಿವ ಜಿ.ಪರಮೇಶ್ವರ ಅವರ ಸಲಹೆಗಾರರಾದ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರು ವಿಧಾನಸೌಧದಲ್ಲಿ ಸಚಿವರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ಪ್ರಾಥಮಿಕ ವರದಿ ನೀಡಿದರು. ಮಾಧ್ಯಮಗಳ ಜೊತೆ ಮಾತನಾಡಿದ ಪರಮೇಶ್ವರ ಅವರು, 'ಇಲಾಖೆಯ ಅಧಿಕಾರಿಗಳು ಆತ್ಮಹತ್ಯೆ ದಾರಿ ತುಳಿಯಬಾರದು. ನಿಮ್ಮ ಜೊತೆ ನಾನಿದ್ದೇನೆ. ಏನೇ ಇದ್ದರೂ ನನಗೆ ತಿಳಿಸಿ, ಅದಕ್ಕೆ ಸ್ಪಂದಿಸುತ್ತೇನೆ' ಎಂದು ಮನವಿ ಮಾಡಿದರು.

ಕೊಡಗಿನಲ್ಲಿ ಅಂತ್ಯ ಸಂಸ್ಕಾರ

ಕೊಡಗಿನಲ್ಲಿ ಅಂತ್ಯ ಸಂಸ್ಕಾರ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿನ ಗಣಪತಿ ಅವರ ತಂದೆಯ ತೋಟದಲ್ಲಿ ಅಂತ್ಯ ಸಂಸ್ಕಾರ ನಡೆಯಿತು. ಡಿವೈಎಸ್‌ಪಿ ಗಣಪತಿ ಅವರ ಹಿರಿಯ ಪುತ್ರ ನೇಹಲ್ ಅವರು ಚಿತೆಗೆ ಅಗ್ನಿ ಸ್ಪರ್ಶಮಾಡಿದರು. ಸರ್ಕಾರದ ಪರವಾಗಿ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು.

ಎಂ.ಕೆ.ಗಣಪತಿ ಆತ್ಮಹತ್ಯೆ, ಶುಕ್ರವಾರದ ಬೆಳವಣಿಗೆಗಳು

ಎಂ.ಕೆ.ಗಣಪತಿ ಆತ್ಮಹತ್ಯೆ, ಶುಕ್ರವಾರದ ಬೆಳವಣಿಗೆಗಳು

ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಐಜಿಪಿ ಪ್ರಣವ್ ಮೋಹಂತಿ ಅವರ ವಿರುದ್ಧ ದೂರು ಸ್ವೀಕರಿಸಲು ವಿಧಾನಸೌಧ ಪೊಲೀಸ್ ಠಾಣೆ ಪೊಲೀಸರು ನಿರಾಕರಿಸಿದ್ದಾರೆ. ಮಾನವಹಕ್ಕು ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಮಿತಿ ಅಧ್ಯಕ್ಷ ಗಿರೀಶ್ ಗೌಡ ಅವರು ದೂರು ಸಲ್ಲಿಸಲು ಹೋಗಿದ್ದರು. ಆದರೆ, ಪೊಲೀಸರು ದೂರು ಸ್ವೀಕರಿಸಿಲ್ಲ. ಇದರಿಂದಾಗಿ ಭ್ರಷ್ಟಾಚಾರ ನಿರ್ಮೂಲನ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಿಬಿಐ ತನಿಖೆಗೆ ಒತ್ತಾಯ

ಸಿಬಿಐ ತನಿಖೆಗೆ ಒತ್ತಾಯ

'ಡಿವೈಎಸ್‌ಪಿ ಎಂ.ಕೆ ಗಣಪತಿ ಅವರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು' ಎಂದು ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸಂಜೀವ.ಕೆ ಮಠಂದೂರ್ ಒತ್ತಾಯಿಸಿದರು. 'ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಅಧಿಕಾರಿಗಳನ್ನು ಮತ್ತು ಸಚಿವರನ್ನು ಕೂಡಲೇ ಬಂಧಿಸಬೇಕು. ಇಲಾಖೆಯ ಕಾರ್ಯವೈಖರಿಗಳಲ್ಲಿ ಸಚಿವರುಗಳ ಹಸ್ತಕ್ಷೇಪ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ' ಎಂದು ಅವರು ಹೇಳಿದರು.

English summary
Mangaluru Deputy Superintendent of Police (DySP) M.K. Ganapathi committed suicide in Madikeri on July 7, 2016. Last rites held in Kodagu on July 8. Here are the top developments of the day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X