ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದ್ಯುತ್ ಉಳಿಸುವ ಪಂಪ್ ಸೆಟ್‍ ಅಳವಡಿಸಿಕೊಳ್ಳುವುದು ಕಡ್ಡಾಯ - ಡಿಕೆಶಿ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಹೆಚ್ಚಿನ ಕಾರ್ಯಕ್ಷಮತೆವುಳ್ಳ 4 ಅಥವಾ 5 ಸ್ಟಾರ್ ರೇಟೆಡ್ ಪಂಪ್‍ಸೆಟ್‍ಗಳನ್ನು ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

By Sachhidananda Acharya
|
Google Oneindia Kannada News

ಬೆಂಗಳೂರು, ಮೇ 26: ರೈತರು ಇನ್ನು ಮುಂದೆ ಕಡ್ಡಾಯವಾಗಿ ವಿದ್ಯುತ್ ಉಳಿತಾಯ ಪಂಪ್ ಸೆಟ್‍ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಇಂಧನ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಹೆಚ್ಚಿನ ಕಾರ್ಯಕ್ಷಮತೆವುಳ್ಳ 4 ಅಥವಾ 5 ಸ್ಟಾರ್ ರೇಟೆಡ್ ಪಂಪ್‍ಸೆಟ್‍ಗಳನ್ನು ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.[ಕೇರಳ ಸಂಪೂರ್ಣ ವಿದ್ಯುದ್ದೀಕರಣಗೊಂಡ ದೇಶದ ಮೊದಲ ರಾಜ್ಯ]

DK Shivakumar

ಈಗಾಗಲೇ ಇದಕ್ಕೆ ಕೇಂದ್ರ ವಿದ್ಯುತ್‍ಚ್ಫಕ್ತಿ ನಿಯಂತ್ರಣ ಆಯೋಗ 4 ಅಥವಾ 5 ಸ್ಟಾರ್ ರೇಟೆಡ್ ಪಂಪ್‍ಸೆಟ್‍ಗಳನ್ನು ಅಳವಡಿಸುವ ಯೋಜನೆಗೆ ಅನುಮತಿ ನೀಡಿದೆ. ರಾಜ್ಯದಲ್ಲಿ ಪ್ರಾಯೋಗಿಕವಾಗಿ ದೊಡ್ಡಬಳ್ಳಾಪುರ, ಬ್ಯಾಡಗಿ, ನಿಪ್ಪಾಣಿ, ಹಾಗೂ ಮಳವಳ್ಳಿಯಲ್ಲಿ ಹೆಚ್ಚಿನ ಕಾರ್ಯಕ್ಷಮತೆವುಳ್ಳ ಪಂಪ್‍ಸೆಟ್‍ಗಳನ್ನು ಅಳವಡಿಸಿರುವುದರಿಂದ ಶೇ 33 ರಿಂದ 39.1 ರಷ್ಟು ಉಳಿತಾಯವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ ಈ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದರು.

ರಾಜ್ಯದ ಎಲ್ಲಾ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ನೂತನ ಕಾರ್ಯಕ್ಷಮತೆಯುಳ್ಳ ಪಂಪ್‍ಸೆಟ್‍ಗಳನ್ನು ಬಳಸುವಂತೆ ನಗರಾಭಿವೃದ್ಧಿ ಇಲಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.[ಅಧ್ಯಕ್ಷ ಸ್ಥಾನಕ್ಕೆ ನಾನು ಲಾಬಿ ನಡೆಸಿಲ್ಲ: ಡಿಕೆ ಶಿವಕುಮಾರ್]

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಗ್ರಾಮಗಳನ್ನು ಮಾದರಿ ವಿದ್ಯುತ್ ಗ್ರಾಮವನ್ನಾಗಿ ಪರಿವರ್ತಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿ ಫಲಾನುಭವಿಗಳಿಗೆ ನೀಡುತ್ತಿದ್ದ 18 ಯೂನಿಟ್ ವಿದ್ಯುತ್ ಬದಲು 40 ಯೂನಿಟ್‍ಗೆ ಹೆಚ್ಚಿಸಲು ತೀರ್ಮಾನಿಸಲಾಗಿದ್ದು ಇದರಿಂದ ವಾರ್ಷಿಕವಾಗಿ ರಾಜ್ಯ ಸರ್ಕಾರ 388 ಕೋಟಿ ರೂ. ಹೆಚ್ಚುವರಿ ಪಾವತಿಸಲಿದೆ ಎಂದರು. ಸದ್ಯ ರಾಜ್ಯ ಸರ್ಕಾರ ವಾರ್ಷಿಕವಾಗಿ ಇಂಧನ ಇಲಾಖೆಗೆ ರೈತರ ಪಂಪ್‍ಸೆಟ್‍ಗಳಿಗೆ ಬಳಸುವ ವಿದ್ಯುತ್ತಿನ ಮೊತ್ತ 9,000 ಕೋಟಿ ರೂ. ಹಣವನ್ನು ಪಾವತಿ ಮಾಡುತ್ತಿದೆ.

ರಾಜ್ಯದಲ್ಲಿ ವಿವಿಧ ವೊಲ್ಟೇಜ್ ವರ್ಗದ 40 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಈ ವರ್ಷ ನವೀಕರಿಸಬಹುದಾದ ಇಂಧನ ಮೂಲಗಳಿಂದ ವಿದ್ಯುತ್ ಪಡೆಯುವ 7236 ಮೆ. ವ್ಯಾಟ್ ಸಾಮರ್ಥ್ಯದ ವಿದ್ಯುತ್ ಘಟಕಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು ಎಂದು ಇಂಧನ ಸಚಿವರು ತಿಳಿಸಿದರು.

ರಾಜ್ಯ ಸರ್ಕಾರ ವಾರ್ಷಿಕವಾಗಿ ಇಂಧನ ಇಲಾಖೆಗೆ ರೈತರ ಪಂಪ್‍ಸೆಟ್‍ಗಳಿಗೆ ಬಳಸುವ ವಿದ್ಯುತ್ತಿನ ಮೊತ್ತ 9,000 ಕೋಟಿ ರೂ. ಹಣವನ್ನು ಪಾವತಿ ಮಾಡುತ್ತಿದೆ.

English summary
State governments decided to make a rule that farmers has to adopt power saving pump sets by simply replacing old inefficient pump-sets with new ones that consume less energy for watering fields.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X