ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ 5ರಂದು ಕರ್ನಾಟಕ ಬಂದ್

|
Google Oneindia Kannada News

ಬೆಂಗಳೂರು, ಆ.31 : ರೈತರ ಆತ್ಮಹತ್ಯೆ ತಡೆಗಟ್ಟಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ರೈತರ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಸೆ.5ರಂದು ರೈತ ಮತ್ತು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸಂಚಾಲಕ ಹಾಗೂ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್‌ ಶಾಂತಕುಮಾರ್ ಅವರು ಬಂದ್‌ಗೆ ಕರೆ ನೀಡಿದ್ದಾರೆ. ರೈತರ ಹಿತಾಸಕ್ತಿ ಕಾಪಾಡಲು ವಿವಿಧ ಸಂಘಟನೆಗಳು ಮತ್ತು ಜನರು ಬಂದ್‌ಗೆ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. [ಸೆ.2ರಂದು ಬಸ್ ಮುಷ್ಕರ]

farmer

ಸೆಪ್ಟೆಂಬರ್ 5ರ ಶನಿವಾರದ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು, ಮೈಸೂರು ಹಾಗೂ ಕಲಬುರಗಿ ಸೇರಿದಂತೆ ಇತರ ಜಿಲ್ಲೆಗಳಲ್ಲಿ ರೈತ ಹಾಗೂ ವಿವಿಧ ಸಂಘಟನೆಗಳ ಸಭೆ ನಡೆಸಿ, ಬಂದ್‌ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ. ಉಳಿದ ಜಿಲ್ಲೆಗಳಲ್ಲಿಯೂ ಎರಡು ದಿನದಲ್ಲಿ ಸಭೆ ನಡೆಸಲಾಗುತ್ತದೆ ಎಂದು ಕುರುಬೂರ್ ಶಾಂತಕುಮಾರ್ ಹೇಳಿದ್ದಾರೆ. [ಸೆ.26ರಂದು ಕರ್ನಾಟಕ ಬಂದ್]

ಸರ್ಕಾರದ ವಿಳಂಬ ಧೋರಣೆ : ಕರ್ನಾಟಕದಲ್ಲಿ ಭೀಕರ ಬರಗಾಲ ಎದುರಾಗಿದ್ದು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಆತ್ಮಹತ್ಯೆ ತಡೆಗಟ್ಟಲು ಸರ್ಕಾರ ವಿಫಲವಾಗಿದೆ. ಕೇಂದ್ರ ಸರ್ಕಾರ ಸಹ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. [ರೈತ ಆತ್ಮಹತ್ಯೆ, ಮಂಡ್ಯಕ್ಕೆ ರಾಹುಲ್ ಭೇಟಿ]

ಬೇಡಿಕೆಗಳು : ರೈತರ ಎಲ್ಲ ಬ್ಯಾಂಕುಗಳ ಬೆಳೆ ಸಾಲವನ್ನು ಮನ್ನಾ ಮಾಡಬೇಕು. ಕಬ್ಬಿನ ಬಾಕಿ ಹಣ ಪಾವತಿಸುವಂತೆ ಹಾಗೂ ಕಳಸಾ ಬಂಡೂರಿ ನೀರಾವರಿ ಯೋಜನೆಯ ತಾಂತ್ರಿಕ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿ ಈ ಬಂದ್ ಹಮ್ಮಿಕೊಳ್ಳಲಾಗಿದೆ.

ಸೆ.26ರಂದು ಕರ್ನಾಟಕ ಬಂದ್ : ಕಳಸಾ-ಬಂಡೂರಿ ಯೋಜನೆಯನ್ನು ಶೀಘ್ರ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸೆ.26ರಂದು ಕರ್ನಾಟಕ ಬಂದ್‌ಗೆ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ವಾಟಾಳ್ ಜೊತೆ ಮಾತುಕತೆ : 'ಕಳಸಾ ಬಂಡೂರಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ವಾಟಾಳ್ ನಾಗರಾಜ್ ಅವರು ಸೆ.26ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಅವರೊಂದು ದಿನ, ನಾವೊಂದು ದಿನ ಬಂದ್‌ ಮಾಡೋದು ಸರಿಯಲ್ಲ. ಆದ್ದರಿಂದ, ಇಬ್ಬರೂ ಸೇರಿ ಒಂದೇ ದಿನ ಬಂದ್ ಮಾಡುವ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸುತ್ತೇನೆ' ಎಂದು ಕುರುಬೂರ್ ಶಾಂತಕುಮಾರ್ ಹೇಳಿದ್ದಾರೆ.

English summary
Karnataka state sugarcane growers association and Rajya Raitha Sangha and Hasiru sene have given a bandh call on September 5, Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X