ಗೌರಿ ಲಂಕೇಶ್ ಹತ್ಯೆ, ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ
ಬೆಂಗಳೂರು, ಸೆಪ್ಟೆಂಬರ್ 06 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ತನಿಖೆಗೆ ಕರ್ನಾಟಕ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಕೇಂದ್ರ ಗೃಹ ಸಚಿವಾಲಯ ಸರ್ಕಾರದಿಂದ ವರದಿ ಕೇಳಿದ್ದು, ಸಿಬಿಐ ತನಿಖೆ ನಡೆಯಲಿದೆಯೇ? ಕಾದು ನೋಡಬೇಕು.
ಮಂಗಳವಾರ ರಾತ್ರಿ ಬೆಂಗಳೂರಿನ ನಿವಾಸದಲ್ಲಿ ಗೌರಿ ಲಂಕೇಶ್ ಅವರನ್ನು ಗುಂಡು ಹಾರಿಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಗೌರಿ ಲಂಕೇಶ್ ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ರಾಜ್ಯ, ದೇಶದ ವಿವಿಧ ನಾಯಕರು ಹತ್ಯೆಯನ್ನು ಖಂಡಿಸಿದ್ದಾರೆ.

ಕರ್ನಾಟಕ ಸರ್ಕಾರ ಬುಧವಾರ ಹತ್ಯೆಯ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿದೆ. ಐಜಿ ದರ್ಜೆಯ ಅಧಿಕಾರಿ ತನಿಖೆಯ ಉಸ್ತುವಾರಿಯನ್ನು ನೋಡಿಕೊಳ್ಳಲಿದ್ದಾರೆ. 'ತನಿಖೆಯನ್ನು ಸಿಐಡಿಗೆ ವಹಿಸುವುದಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗೌರಿ ಲಂಕೇಶ್ ಹತ್ಯೆಯ ಬಗ್ಗೆ ವರದಿ ಕೇಳಿದ್ದಾರೆ. ಹತ್ಯೆ ಪ್ರಕರಣದ ವರದಿ ನೀಡುವಂತೆ ಗೃಹ ಸಚಿವಾಲಯ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
Home Minister Rajnath Singh instructs Home Secretary to seek report on murder of journalist #GauriLankesh from Karnataka Govt.
— ANI (@ANI) September 6, 2017
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮತ್ತು ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್ ಹತ್ಯೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಎಸ್ಐಟಿ ವರದಿ ಬಂದ ಬಳಿಕ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇವೆ' ಎಂದು ಸ್ಪಷ್ಟಪಡಿಸಿದರು.
Officials are collecting evidence; will have to wait for sometime: Karnataka Home Minister Ramalinga Reddy on murder of #GauriLankesh pic.twitter.com/jQZr1IxluP
— ANI (@ANI) September 6, 2017
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications