ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

5 ಸಾವಿರ ಡಿ ಗ್ರೂಪ್ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಡುಗೆಯವರು, ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರ ಹಾಗೂ ಜವಾನರು ಸೇರಿದಂತೆ 6613 ಹುದ್ದೆಗಳು ಖಾಲಿ ಇವೆ. ಇದರಲ್ಲೇ 5,000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

By Sachhidananda Acharya
|
Google Oneindia Kannada News

ಬೆಂಗಳೂರು, ಮೇ 18: ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವರ್ಗ, ಸಮಾಜ ಕಲ್ಯಾಣ ಇಲಾಖೆಗಳ ವೃಂದ ನೇಮಕಾತಿ ಹಾಗೂ ಡಿ ಗ್ರೂಪ್ ನೌಕರರ ನೇರ ನೇಮಕಾತಿಗೆ ಸರ್ಕಾರ ಮುಂದಾಗಿದೆ.

ಈ ಇಲಾಖೆಗಳಲ್ಲಿ ಅನೇಕರು ಗುತ್ತಿಗೆ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಬಹಳಷ್ಟು ಹುದ್ದೆಗಳು ಖಾಲಿ ಉಳಿದಿವೆ. ಹೀಗಾಗಿ ಕಾರ್ಯ ಚಟುವಟಿಕೆ ಅನುಷ್ಠಾನಕ್ಕೆ ಅಡಚಣೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವೃಂದ ನೇಮಕಾತಿ ಮತ್ತು ಡಿ ಗ್ರೂಪ್ ನೇಮಕಾತಿಗೆ ಅನುಮೋದನೆ ನೀಡಲಾಗಿದೆ.

 Government gave Green signal to appoint 5,000 D Group posts

ಅಡುಗೆಯವರು, ಅಡುಗೆ ಸಹಾಯಕರು ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಐದು ಸಾವಿರ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ. ಮುಖ್ಯಮಂತ್ರಿಗಳು ನೇರ ನೇಮಕ ಮೂಲಕ ಖಾಲಿ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಖಾಲಿ ಇರುವ ಹುದ್ದೆಗಳು:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಡುಗೆಯವರು (3291), ಅಡುಗೆ ಸಹಾಯಕರು (2577 ), ರಾತ್ರಿ ಕಾವಲುಗಾರರು (716 ) ಹಾಗೂ ಜವಾನರು (29 ) ಸೇರಿದಂತೆ 6613 ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ

ಈ ಪೈಕಿ 5 ಸಾವಿರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೂಪ್ ಡಿ ಹುದ್ದೆಗೆ ಎಸ್ಎಸ್ಎಲ್ ಸಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.

ಸಚಿವರಾದ ಎಚ್ ಆಂಜನೇಯ, ಎಚ್.ಸಿ ಮಹದೇವಪ್ಪ, ಟಿಬಿ ಜಯಚಂದ್ರ ಸೇರಿದಂತೆ ಸಮಾಜ ಕಲ್ಯಾಣ, ಹಣಕಾಸು ಮತ್ತು ಸಿಬ್ಬಂದಿ, ಆಡಳಿತ ಸುಧಾರಣೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.

English summary
Chief minister Siddaramaiah gave green signal to appoint 5 thousand D Group posts which are vacant from long time in a high level meeting held today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X