ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಲೋಕಾಯುಕ್ತರ ರಾಜೀನಾಮೆ ರಾಜ್ಯಪಾಲರಿಗೆ ಬಿಟ್ಟ ವಿಚಾರ'

|
Google Oneindia Kannada News

ಬೆಂಗಳೂರು, ಜುಲೈ 06 : ಕರ್ನಾಟಕದ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಅವರನ್ನು ಪದಚ್ಯುತಿಗೊಳಿಸಲು ಆಮ್ ಆದ್ಮಿ ಪಕ್ಷ, ಜೆಡಿಎಸ್ ಮತ್ತು ಬಿಜೆಪಿ ಪಟ್ಟು ಹಿಡಿದಿವೆ. ರಾಜೀನಾಮೆ ಪಡೆಯುವುದು ರಾಜ್ಯಪಾಲರಿಗೆ ಬಿಟ್ಟ ವಿಷಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಬೆಳಗ್ಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಪಾಲ್ಗೊಳ್ಳಲು ಹೊರಡುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಲೋಕಾಯುಕ್ತರ ರಾಜೀನಾಮೆ ವಿಚಾರದಲ್ಲಿ ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ' ಎಂದರು.

siddaramaiah

'ರಾಜ್ಯಪಾಲರ ಪದಚ್ಯುತಿಗೆ ಒತ್ತಾಯಿಸಿ ವಿಧಾನಪರಿಷತ್ ಸದಸ್ಯರು ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಶಾಸಕರ ಸಹಿಯುಳ್ಳ ಮನವಿ ಪತ್ರ ನೀಡಿದ್ದಾರೆ. ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಪತ್ರವನ್ನು ನೀಡಲಾಗಿದೆ. [ಲೋಕಾಯುಕ್ತರ ಪದಚ್ಯುತಿ ಕಾನೂನು ಪ್ರಕ್ರಿಯೆಗಳೇನು?]

ಆದರೆ, ಇದು ನಮಗೆ ಸಂಬಂಧಿಸಿದ ವಿಷಯವಲ್ಲ. ರಾಜ್ಯಪಾಲರು ಕಾನೂನಿನಯ ಅನ್ವಯ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಆ ನಿರ್ಧಾರಕ್ಕೆ ತಾವು ಬದ್ಧರಾಗಿರುತ್ತೇವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. [ಲೋಕಾಯುಕ್ತರ ಪದಚ್ಯುತಿಗೆ ಶಾಸಕರ ಸಹಿ ಸಂಗ್ರಹ]

ಕಾನೂನು ಏನು ಹೇಳುತ್ತದೆ? : ಲೋಕಾಯುಕ್ತರನ್ನು ಪದಚ್ಯುತಿಗೊಳಿಸುವ ನಿರ್ಣವನ್ನು ಮಂಡಿಸಬೇಕಾದರೆ 50 ಶಾಸಕರು ಅಥವ 33 ವಿಧಾನಪರಿಷತ್ ಸದಸ್ಯರ ಸಹಿ ಇರುವ ಪತ್ರ ಬೇಕು. ಸದ್ಯ, 33 ಸದಸ್ಯರ ಸಹಿ ಇರುವ ಪತ್ರ ಡಿ.ಎಚ್.ಶಂಕರಮೂರ್ತಿ ಅವರ ಕೈಸೇರಿದೆ. ಸುಮಾರು 60 ಶಾಸಕರ ಸಹಿ ಇರುವ ಪತ್ರವನ್ನು ಕಾಗೋಡು ತಿಮ್ಮಪ್ಪ ಅವರಿಗೆ ನೀಡಲಾಗಿದೆ.

English summary
Karnataka Chief Minister Siddaramaiah on Monday said, Governor to take decision on resignation of Lokayukta Justice Y.Bhaskar Rao.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X