ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಕ್ಕೆ ಭೇಟಿ ನೀಡುವ ರಾಹುಲ್ ಗಾಂಧಿ ಕಾರ್ಯಕ್ರಮ ಏನೇನು?

By Vanitha
|
Google Oneindia Kannada News

ಹಾವೇರಿ, ಅಕ್ಟೋಬರ್, 07 : ರಾಜಧಾನಿ ಬೆಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿ ಒಂದು ದಿನ ಕಳೆದಿಲ್ಲ. ಅಷ್ಟರಲ್ಲೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಅಕ್ಟೋಬರ್ 10ರ ಶನಿವಾರದಂದು ಹಾವೇರಿ ಮತ್ತು ಮಂಡ್ಯ ಜಿಲ್ಲೆಗೆ ತೆರಳಲಿದ್ದಾರೆ.

ಹಾವೇರಿ ಜಿಲ್ಲೆಗೆ ಬರುವ ರಾಹುಲ್ ಗಾಂಧಿ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರೈತರ ಸಮಸ್ಯೆಯ ಕಡೆಗೆ ಹೆಚ್ಚು ಗಮನ ಕೇಂದ್ರಿಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಅವರ ಕಾರ್ಯಕ್ರಮಗಳು ಪಟ್ಟಿ ಹೀಗಿದೆ.[ಪುಣೆಯಲ್ಲಿ ರಾಹುಲ್ ಗಾಂಧಿ ಜತೆ ಕಾಣಿಸಿಕೊಂಡ ರಮ್ಯಾ!]

Haveri programme list of Rahul Gandhi will visit on Saturday

* ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೈದೂರು ತಾಂಡದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಅಶೋಕ ಮಡಿವಾಳರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ.

* ತಾಂಡದಿಂದ ಆರು ಕಿ.ಮೀ ದೂರದವರೆಗೆ ಪಾದಯಾತ್ರೆ ಕೈಗೊಂಡು, ವಿದ್ಯಾರ್ಥಿಗಳು, ರೈತರ ಸಮಸ್ಯೆಗಳ ಬಗ್ಗೆ ಸಂವಾದ ನಡೆಸಿ ರೈತರ ಆತ್ಮಹತ್ಯೆಯ ಮುಖ್ಯ ಕಾರಣಗಳೇನು ಎಂಬುದನ್ನು ಕೊಂಡುಕೊಳ್ಳಲಿದ್ದಾರೆ.

* ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ಗುಡಗೂರ ಗ್ರಾಮದಲ್ಲಿ ಬೃಹತ್ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

* ಶಾಸಕ ಕೆ.ಬಿ ಕೋಳಿವಾಡ ಅವರ ಮನೆಯಲ್ಲಿ ಸುಮಾರು ಇನ್ನೂರು ಜನರೊಂದಿಗೆ ಸಹಭೋಜನ ಮಾಡಲಿದ್ದಾರೆ.

* ಲಂಬಾಣಿ ತಾಂಡದ ಜನರ ಕುಂದು ಕೊರತೆಗಳನ್ನು ವಿಚಾರಿಸಲಿದ್ದಾರೆ.

English summary
Congress vice president Rahul Gandhi will visit Haveri district, Karnataka on October 10th and meet some of the family members of farmers who committed suicide recently.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X