ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ, ಡಿಕೆಶಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

|
Google Oneindia Kannada News

ಬೆಂಗಳೂರು, ಡಿಸೆಂಬರ್ 18 : ಕರ್ನಾಟಕ ಹೈಕೋರ್ಟ್ ಶುಕ್ರವಾರ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶುಭ ಸುದ್ದಿ ನೀಡಿದೆ. ಉಭಯ ನಾಯಕರ ವಿರುದ್ಧ ದಾಖಲಾಗಿದ್ದ ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣವನ್ನು ರದ್ದುಗೊಳಿಸಿದೆ.

ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಾಲಯದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಯಡಿಯೂರಪ್ಪ ಮತ್ತು ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ಗೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. [ಡಿಕೆಶಿ, ಯಡಿಯೂರಪ್ಪ ಕೇಸು : ತೀರ್ಪು ಬಾಕಿ]

yeddyurappa

ಡಿಸೆಂಬರ್ 2ರಂದು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರ ಏಕಸದಸ್ಯ ಪೀಠ, ತೀರ್ಪನ್ನು ಕಾಯ್ದಿರಿಸಿತ್ತು. ಶುಕ್ರವಾರ ತೀರ್ಪು ಪ್ರಕಟಗೊಂಡಿದ್ದು, ಲೋಕಾಯುಕ್ತದಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. [ಯಡಿಯೂರಪ್ಪ ಅವರ ವಿರುದ್ಧದ 13 FIR ರದ್ದಾಗಲಿದೆಯೇ?]

ಮೇಲ್ಮನವಿ ಸಲ್ಲಿಸುತ್ತೇನೆ : 'ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದ ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇನೆ' ಎಂದು ದೂರುದಾರ ಟಿ.ಜೆ.ಅಹ್ರಾಹಂ ಹೇಳಿದ್ದಾರೆ. 'ಹೈಕೋರ್ಟ್ ನೀಡಿರುವ ತೀರ್ಪು ಅಂತಿಮವಲ್ಲ. ಸುಪ್ರೀಂಕೋರ್ಟ್‌ನಲ್ಲಿ ಸ್ವತಃ ನಾನೇ ವಾದ ಮಂಡಿಸುತ್ತೇನೆ' ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಏನಿದು ಪ್ರಕರಣ? : ಡಿ.ಕೆ.ಶಿವಕುಮಾರ್ ಅವರು ನಗರಾಭಿವೃದ್ಧಿ ಸಚಿವರಾಗಿದ್ದಾಗ ಬೆಂಗಳೂರು ಪೂರ್ವ ತಾಲೂಕಿನ ಬೆನ್ನಿಗಾನಹಳ್ಳಿಯ ಸರ್ವೆ ನಂ 50/2ರಲ್ಲಿ 4 ಎಕರೆ 20 ಗುಂಟೆ ಖರೀದಿ ಮಾಡಿದ್ದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಶಿವಕುಮಾರ್ ಅವರ ಮನವಿ ಮೇರೆಗೆ ಅದನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್‌ ಮಾಡಿಸಲಾಗಿದೆ ಎಂಬುದು ಆರೋಪ.[ಯಡಿಯೂರಪ್ಪಗೆ ರಿಲೀಫ್ ನೀಡಿದ 5 ಪ್ರಕರಣಗಳು]

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಮತ್ತು ಕಬ್ಬಾಳೇಗೌಡ ಅವರು ಈ ಕುರಿತು ಲೋಕಾಯುಕ್ತ ನ್ಯಾಯಾಲಯಕ್ಕೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು 2012ರಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು. ಯಡಿಯೂರಪ್ಪ ಅವರನ್ನು ಆರೋಪ ಪಟ್ಟಿಯಿಂದ ಕೈ ಬಿಡಲಾಗಿತ್ತು.

ಆದರೆ, ಲೋಕಾಯುಕ್ತ ನ್ಯಾಯಾಲಯ ಯಡಿಯೂರಪ್ಪ ಅವರ ಹೆಸರನ್ನು ಸೇರಿಸಿಕೊಂಡು ಪ್ರಕರಣದ ವಿಚಾರಣೆ ನಡೆಸುತ್ತಿತ್ತು. ಈ ಪ್ರಕರಣ ರದ್ದುಕೋರಿ ಯಡಿಯೂರಪ್ಪ ಮತ್ತು ಡಿ.ಕೆ.ಶಿವಕುಮಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 2012ರ ಜುಲೈ 31ರಿಂದ ಹೈಕೋರ್ಟ್‌ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿತ್ತು.

English summary
Karnataka High Court has quashed a complaint lodged against D.K.Shivakumar and Former chief minister B.S.Yeddyurappa in Benniganahalli denotification case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X