ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಾಗಿ ಸಹಾಯವಾಣಿ ಆರಂಭ

|
Google Oneindia Kannada News

ಬೆಂಗಳೂರು, ಫೆಬ್ರವರಿ 27 : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಹಾಯವಾಣಿಯನ್ನು ಆರಂಭಿಸಲಿದೆ. ಮಾರ್ಚ್ 30ರಿಂದ 2016ನೇ ಸಾಲಿನ ಪರೀಕ್ಷೆಗಳು ಆರಂಭವಾಗಲಿವೆ.

ಈ ಸಹಾಯವಾಣಿ ಮಾರ್ಚ್ 3ರಿಂದ 28ರ ತನಕ ಪ್ರತಿ ದಿನ ಬೆಳಗ್ಗೆ 9 ರಿಂದ ಸಂಜೆ 7 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ. ದಿನಾಂಕ ಮಾರ್ಚ್ 30 ರಿಂದ ಏಪ್ರಿಲ್ 13ರ ತನಕ ಸಹಾಯವಾಣಿ ಬೆಳಗ್ಗೆ 9 ರಿಂದ ಮಧ್ಯಾಹ್ನ 2.30ರವರೆಗೆ ಮಾತ್ರ ಕಾರ್ಯನಿರ್ವಹಣೆ ಮಾಡಲಿವೆ. [SSLC ಪರೀಕ್ಷಾ ವೇಳಾಪಟ್ಟಿ]

sslc

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ವಿದ್ಯಾರ್ಥಿಗಳ ಬುದ್ಧಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮವನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಅವರ ಮೇಲೆ ಒತ್ತಡವನ್ನು ಪೋಷಕರು, ಸಮಾಜ, ಶಿಕ್ಷಕರು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ. [ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ]

ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನವಹಿಸಲು ಸಾಧ್ಯವಾಗುವುದಿಲ್ಲ. ಇಂತಹ ಸಮಸ್ಯೆಯನ್ನು ಬಗೆಹರಿಸಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಫೂರ್ತಿ ನೀಡಬೇಕಾದ ಅವಶ್ಯಕತೆ ಇದೆ. ಈ ರೀತಿಯ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಲು ಸಹಾಯವಾಣಿಯನ್ನು ಆರಂಭಿಸಲಾಗುತ್ತಿದೆ. [ಅಧ್ಯಾಪಕರ ಜವಾಬ್ದಾರಿ ನೆನಪಿಸಿದ ಕಿಮ್ಮನೆ]

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರತಿವರ್ಷ ವರ್ಷವೂ ಸಹಾಯವಾಣಿ ಮತ್ತು ಕೌನ್ಸಿಲಿಂಗ್ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತದೆ. ಸಹಾಯವಾಣಿ ಸಂಖ್ಯೆಗಳು : 080-23310075, 080-23310076. [SSLC ಟಾಪರ್ ವಿಶ್ವಜೀತ್ ಹೆಗಡೆ ಕಣ್ಣಲ್ಲಿ ಐಐಟಿ ಕನಸು]

English summary
Karnataka Secondary Education Examination Board has provided a helpline number for the Secondary School Leaving Certificate (SSLC) students. Candidates who appeared for the SSLC examination can dial up 080-23310075, 080-23310076 number.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X