ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರಗಳು : ಕರ್ನಾಟಕದಲ್ಲಿ ಬಿಜೆಪಿಯ ತಿರಂಗ ಯಾತ್ರೆ

|
Google Oneindia Kannada News

ಬೆಂಗಳೂರು, ಆಗಸ್ಟ್ 17 : ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಬಿಜೆಪಿ ನಾಯಕರು ರಾಜ್ಯಾದ್ಯಂತ 'ತಿರಂಗ ಯಾತ್ರೆ' ಆರಂಭಿಸಿದ್ದಾರೆ. ಆಗಸ್ಟ್ 15 ರಿಂದ 22ರ ತನಕ ದೇಶಾದ್ಯಂತ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿಯೂ ತಿರಂಗ ಯಾತ್ರೆ ನಡೆಯಲಿದೆ.

ಬೆಂಗಳೂರು, ಶಿವಮೊಗ್ಗ, ಧಾರವಾಡ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬುಧವಾರ ತಿರಂಗ ಯಾತ್ರೆ ನಡೆಯಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದರಾದ ಪ್ರಹ್ಲಾದ್ ಜೋಶಿ, ಅನಂತ್ ಕುಮಾರ್, ಶೋಭಾ ಕರಂದ್ಲಾಜೆ ಮುಂತಾದವರು ವಿವಿಧ ಜಿಲ್ಲೆಗಳಲ್ಲಿ ಯಾತ್ರೆಯಲ್ಲಿ ಪಾಲ್ಗೊಂಡರು.[70ನೇ ಸ್ವಾತಂತ್ರ್ಯೋತ್ಸವ : ಮೋದಿ ಭಾಷಣದ ಮುಖ್ಯಾಂಶಗಳು]

ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿಗೆ 74 ವರ್ಷ ತುಂಬಿ 75ನೇ ವರ್ಷಕ್ಕೆ ಕಾಲಿಟ್ಟಿರುವ ಸಂದರ್ಭದಲ್ಲಿ ದೇಶದಾದ್ಯಂತ ಕಾರ್ಯಕ್ರಮ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಆಗಸ್ಟ್ 15ರಿಂದ 22ರ ತನಕ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಿರಂಗಯಾತ್ರೆ ನಡೆಯಲಿದೆ.....[ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು]

ಶಿವಮೊಗ್ಗದಲ್ಲಿ ತಿರಂಗ ಯಾತ್ರೆ

ಶಿವಮೊಗ್ಗದಲ್ಲಿ ತಿರಂಗ ಯಾತ್ರೆ

ಬುಧವಾರ ಶಿವಮೊಗ್ಗ ಜಿಲ್ಲೆಯ ಕೆಳದಿಯಲ್ಲಿ ವೀರ ರಾಣಿ ಕೆಳದಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಿರಂಗಾ ಯಾತ್ರೆಗೆ ಚಾಲನೆ ನೀಡಿದರು.

ಕಲಘಟಗಿಯಲ್ಲಿ ತಿರಂಗ ಯಾತ್ರೆ

ಕಲಘಟಗಿಯಲ್ಲಿ ತಿರಂಗ ಯಾತ್ರೆ

ಧಾರವಾಡ ಜಿಲ್ಲೆಯ ಕಲಘಟಗಿಯ 8 ಗ್ರಾಮ ಪಂಚಾಯತಿಗಳಲ್ಲಿ ತಿರಂಗಾ ಯಾತ್ರೆಗೆ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು.

ಚಿಕ್ಕಮಗಳೂರಿನಲ್ಲಿ ತಿರಂಗ ಯಾತ್ರೆ

ಚಿಕ್ಕಮಗಳೂರಿನಲ್ಲಿ ತಿರಂಗ ಯಾತ್ರೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ತಿರಂಗಾ ಯಾತ್ರೆಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ಚಾಲನೆ ನೀಡಿದರು.

ಬೆಂಗಳೂರಿನಲ್ಲಿ ತಿರಂಗ ಯಾತ್ರೆ

ಬೆಂಗಳೂರಿನಲ್ಲಿ ತಿರಂಗ ಯಾತ್ರೆ

ಬೆಂಗಳೂರಿನಲ್ಲಿ ನಡೆದ ತಿರಂಗ ಯಾತ್ರೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ್‌ ಕುಮಾರ್‌ ಪಾಲ್ಗೊಂಡಿದ್ದರು.

ಶಿಕಾರಿಪುರದಲ್ಲಿ ತಿರಂಗ ಯಾತ್ರೆ

ಶಿಕಾರಿಪುರದಲ್ಲಿ ತಿರಂಗ ಯಾತ್ರೆ

ಶಿಕಾರಿಪುರದಲ್ಲಿ ನಡೆದ ತಿರಂಗಯಾತ್ರೆಯಲ್ಲಿ ಶಾಸಕ ಬಿ.ವೈ.ರಾಘವೇಂದ್ರ ಪಾಲ್ಗೊಂಡಿದ್ದರು.

English summary
Prime Minister Narendra Modi flagged off the Tiranga Yatra to mark the launch of the 70th Freedom Year celebrations. Here are the pics of Tiranga Yatra in Karnataka on August 17, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X