ಮೂವರು ಎಂಎಲ್‌ಸಿ ಮನೆಗಳ ಮೇಲೆ ಐಟಿ ದಾಳಿ

Subscribe to Oneindia Kannada

ಬೆಂಗಳೂರು, ಮಾರ್ಚ್ 15 : ಕರ್ನಾಟಕದ ಮೂವರು ವಿಧಾನಪರಿಷತ್ ಸದಸ್ಯರ ಮನೆ ಮೇಲೆ ಏಕಕಾಲಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಈ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಬೆಂಗಳೂರಿನಲ್ಲಿರುವ ವಿಧಾನಪರಿಷತ್ ಸದಸ್ಯರಾದ ಸಿ.ಆರ್.ಮನೋಹರ್ (ಜೆಡಿಎಸ್), ಕೆ.ಗೋವಿಂದರಾಜು (ಕಾಂಗ್ರೆಸ್), ಡಿ.ಯು ಮಲ್ಲಿಕಾರ್ಜುನ (ಪಕ್ಷೇತರ) ಅವರ ನಿವಾಸದ ಮೇಲೆ ಮಂಗಳವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ. [ವಿಧಾನಪರಿಷತ್ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿಗೆ ಗೆಲುವು?]

income tax

ಸರ್ಜಾಪುರದಲ್ಲಿರುವ ಸಿ.ಆರ್.ಮನೋಹರ್ ಅವರ ನಿವಾಸ, ಇಂದಿರಾನಗರದಲ್ಲಿರುವ ಕೆ.ಗೋವಿಂದರಾಜು ಅವರ ನಿವಾಸ ಮತ್ತು ಡಾಲರ್ಸ್ ಕಾಲೋನಿಯಲ್ಲಿರುವ ಡಿ.ಯು.ಮಲ್ಲಿಕಾರ್ಜುನ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. [ಬಜೆಟ್ 2016: ಅರುಣ್ ಜೇಟ್ಲಿ ಹೇಳಿದ ತೆರಿಗೆ ಲೆಕ್ಕವೇನು?]

ಕೆ.ಗೋವಿಂದರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಸದೀಯ ಕಾರ್ಯದರ್ಶಿಗಳಾಗಿದ್ದಾರೆ. ಸಿ.ಆರ್.ಮನೋಹರ್ ಅವರು ಸುದೀಪ್ ಮತ್ತು ಶಿವರಾಜ್ ಕುಮಾರ್ ಒಟ್ಟಾಗಿ ನಟಿಸುತ್ತಿರುವ ಜೋಗಿ ಪ್ರೇಮ್ ನಿರ್ದೇಶನದ 'ಕಲಿ' ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

English summary
Income tax officials raids on the houses of 3 MLC's in Bengaluru, Karnataka on Tuesday, March 15, 2016. The legislators are, C.R.Manohar (JDS), D.U.Mallikarjuna (Independent) and K.Govindraj (Congress).
Please Wait while comments are loading...