ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಯಲಲಿತಾ ಕೇಸ್, ಸುಪ್ರೀಂ ಮೆಟ್ಟಿಲೇರಿದ ಸ್ವಾಮಿ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಜ. 6 : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಮೇಲ್ಮನವಿ ವಿಚಾರಣೆಯಲ್ಲಿ ತಮ್ಮನ್ನು ಪ್ರತಿವಾದಿಯನ್ನಾಗಿ ಸ್ವೀಕರಿಸಲು ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಬೇಕೆಂದು ಕೋರಿ ಸುಬ್ರಮಣ್ಯ ಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಅನ್ವಯ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರ ಏಕಸದಸ್ಯ ಪೀಠವನ್ನು ರಚನೆ ಮಾಡಿದ್ದು, ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪಿನ ಮೇಲ್ಮನವಿ ವಿಚಾರಣೆ ಸೋಮವಾರದಿಂದ ಆರಂಭವಾಗಿದೆ. [ಅಕ್ರಮ ಆಸ್ತಿಗಳಿಕೆ ಪ್ರಕರಣ : ಜಯ ಅರ್ಜಿ ವಿಚಾರಣೆ ಆರಂಭ]

Subramanya Swamy

ಪ್ರಕರಣದ ಮೂಲ ದೂರುದಾರರಾದ ಸುಬ್ರಮಣ್ಯ ಸ್ವಾಮಿ ಸೋಮವಾರ ವಿಚಾರಣೆಗೆ ಹಾಜರಾಗಿದ್ದರು ಮತ್ತು ತಮ್ಮನ್ನು ಪ್ರತಿವಾದಿಯನ್ನಾಗಿಸಲು ಅವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಮನವಿಯನ್ನು ಲಿಖಿತ ರೂಪದಲ್ಲಿ ಸಲ್ಲಿಸುವಂತೆ ನ್ಯಾಯಮೂರ್ತಿಗಳು ಸೂಚಿಸಿದ್ದರು. [ಜಯಲಲಿತಾ ಜಾಮೀನು ಅವಧಿ 4 ತಿಂಗಳು ವಿಸ್ತರಣೆ]

ಈ ಸಂಬಂಧ ಮಂಗಳವಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಸುಬ್ರಮಣ್ಯ ಸ್ವಾಮಿ ಅವರು, ಮೇಲ್ಮನವಿ ವಿಚಾರಣೆ ವೇಳೆ ತಮ್ಮನ್ನು ಪ್ರತಿವಾದಿಯನ್ನಾಗಿ ಪರಿಗಣಿಸಲು ವಿಶೇಷ ಕೋರ್ಟ್‌ಗೆ ಆದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮೊದಲು ವಿಚಾರಣಾ ನ್ಯಾಯಾಲಯದಿಂದ ಅಧಿಕೃತ ಆದೇಶವನ್ನು ಪಡೆದುಕೊಳ್ಳಿ, ನಂತರ ಅರ್ಜಿಯನ್ನು ಪರಿಶೀಲಿಸುವುದಾಗಿ ಹೇಳಿದೆ.

2014ರ ಸೆ. 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣ ತೀರ್ಪು ನೀಡಿದ್ದ ವಿಶೇಷ ನ್ಯಾಯಾಲ­ಯದ ನ್ಯಾಯಾಧೀಶ ಡಿ.ಕುನ್ಹ ಅವರು, ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ತಪ್ಪಿತಸ್ಥರು ಎಂದು ಆದೇಶ ನೀಡಿದ್ದರು.

ಜಯಲಲಿತಾ ಅವರಿಗೆ 100 ಕೋಟಿ ಹಾಗೂ ಇತರರಿಗೆ ತಲಾ 10 ಕೋಟಿ ದಂಡ ಮತ್ತು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಸುಪ್ರೀಂಕೋರ್ಟ್ ಎಲ್ಲರಿಗೂ ಜಾಮೀನು ನೀಡಿದೆ ಮತ್ತು ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ವಿಶೇಷ ಪೀಠದಲ್ಲಿ ನಡೆಯುತ್ತಿದೆ.

English summary
As the arguments in the J Jayalalithaa appeal before the Karnataka High Court is underway, the original complainant in the case, Subramanya Swamy has told the Supreme Court he could be deemed as a public prosecutor in the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X