ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿಯಲ್ಲಿ ನಿರ್ಮಾಣವಾಗಲಿದೆ ಜಯದೇವ ಆಸ್ಪತ್ರೆ

|
Google Oneindia Kannada News

ಕಲಬುರಗಿ, ಫೆ. 28 : ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಸಿಹಿ ಸುದ್ದಿ. ಪ್ರತಿಷ್ಠಿತ ಜಯದೇವ ಹೃದ್ರೋಗ ಸಂಸ್ಥೆ ಹೈದರಾಬಾದ್ ಕರ್ನಾಟಕದಲ್ಲಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಮುಂದಾಗಿದೆ. ಸರ್ಕಾರವೂ ಇದಕ್ಕೆ ಅನುಮೋದನೆ ನೀಡಿದೆ.

ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಅವರು ಈ ಕುರಿತು ಶುಕ್ರವಾರ ಮಾಹಿತಿ ನೀಡಿದ್ದಾರೆ. ಕಲಬುರಗಿಯಲ್ಲಿನ ವೈದ್ಯಕೀಯ ಕಾಲೇಜು ಆವರಣದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಶಾಖೆ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದರು.

Hospital

ಸುಮಾರು 40 ಸಾವಿರ ಚದರಡಿ ವಿಸ್ತೀರ್ಣದಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದ್ದು, ಈ ಶಾಖೆಗೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಹಾಗೂ ಹೈದರಾಬಾದ್‌ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ತಲಾ 6 ಕೋಟಿ ರೂ. ಆರ್ಥಿಕ ನೆರವು ದೊರೆಯಲಿದೆ ಎಂದು ಹೇಳಿದರು. [ಕಲಬುರಗಿ ಇಎಸ್ಐ ಆಸ್ಪತ್ರೆ ನೋಡಿ]

ಕರ್ನಾಟಕ ಸರ್ಕಾರವೂ ಜಯದೇವ ಆಸ್ಪತ್ರೆ ನಿರ್ಮಾಣ ಮಾಡಲು ಒಪ್ಪಿಗೆ ನೀಡಿದೆ. ಸುಮಾರು ಒಂದೂವರೆ ವರ್ಷದಲ್ಲಿ ಈ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ. 75 ಹಾಸಿಗೆಯ ಉದ್ದೇಶಿತ ಆಸ್ಪತ್ರೆಯಲ್ಲಿ 15 ಪುರುಷರು ಹಾಗೂ 10 ಮಹಿಳೆಯರು ಸೇರಿದಂತೆ 25 ತೀವ್ರ ನಿಗಾ ಘಟಕಗಳಿರುತ್ತವೆ.[ಬೆಂಗಳೂರು: ಹಂದಿ ಜ್ವರ ಔಷಧ ಲಭ್ಯವಿರುವ ಆಸ್ಪತ್ರೆ ಪಟ್ಟಿ]

ಆಸ್ಪತ್ರೆ ನಿರ್ಮಾಣದ ಕುರಿತು ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಜಯದೇವ ಹೃದ್ರೋಗ ಆಸ್ಪತ್ರೆಯ ಶಾಖೆ ಮಾತ್ರವಲ್ಲ, ಕ್ಯಾನ್ಸರ್‌ ಆಸ್ಪತ್ರೆಯನ್ನು ಕೂಡ ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು. [ಜಯದೇವ ಆಸ್ಪತ್ರೆ ವೆಬ್ ಸೈಟ್]

English summary
Sri Jayadeva Institute of Cardiovascular Sciences and Research (SJICSR) will start a 75-bed facility in Kalaburagi at a cost of Rs. 75 core said, Institute director C.N. Manjunath.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X