ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಸ್ತಿಗಳಿಕೆ ಪ್ರಕರಣ, ಜಯಾ ತೀರ್ಪು ಕಾಯ್ದಿರಿಸಿದ ಕೋರ್ಟ್

|
Google Oneindia Kannada News

ಬೆಂಗಳೂರು, ಮಾ.11 : ಕರ್ನಾಟಕ ಹೈಕೋರ್ಟ್‌ ವಿಶೇಷ ಪೀಠ ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪಿನ ಮೇಲ್ಮನವಿಯ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದೆ. ಆಸ್ತಿಗಳಿಕೆ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಜಯಲಲಿತಾ ಪ್ರಶ್ನಿಸಿದ್ದರು.

ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರ ಏಕಸದಸ್ಯ ಪೀಠ ಎರಡೂ ಕಡೆಯ ವಾದನ್ನು ಆಲಿಸಿ ಬುಧವಾರ ಅರ್ಜಿಯ ವಿಚಾರಣೆಯನ್ನು ಮಕ್ತಾಯಗೊಳಿಸಿದೆ. ಜ.2ರಿಂದ ರಜಾ ದಿನಗಳನ್ನು ಹೊರತುಪಡಿಸಿ ಪ್ರತಿನಿತ್ಯವೂ ಜಯಲಲಿತಾ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆದಿತ್ತು. [ಜಯಲಲಿತಾ ಮೇಲ್ಮನವಿ ವಿಚಾರಣೆ ಆರಂಭ]

Jayalalithaa

ಜೈಲು ಶಿಕ್ಷೆ ವಿಧಿಸಲಾಗಿತ್ತು : 2014ರ ಸೆ. 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪು ನೀಡಿದ್ದ ವಿಶೇಷ ನ್ಯಾಯಾಲ­ಯದ ನ್ಯಾಯಾಧೀಶ ಡಿ.ಕುನ್ಹ ಅವರು, ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ತಪ್ಪಿತಸ್ಥರು ಎಂದು ಆದೇಶಿದ್ದರು. [ಜಯಲಲಿತಾ ಜಾಮೀನು ಅವಧಿ 4 ತಿಂಗಳು ವಿಸ್ತರಣೆ]

ಜಯಲಲಿತಾ ಅವರಿಗೆ 100 ಕೋಟಿ ಹಾಗೂ ಇತರರಿಗೆ ತಲಾ 10 ಕೋಟಿ ದಂಡ ಮತ್ತು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಜಯಲಲಿತಾ ಮತ್ತು ಇತರ ಮೂವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ ವಿಶೇಷ ಈ ತೀರ್ಪನ್ನು ಪ್ರಶ್ನಿಸಿದ್ದರು.

ಸುಪ್ರೀಂಕೋರ್ಟ್ ಎಲ್ಲರಿಗೂ ಜಾಮೀನು ನೀಡಿತ್ತು ಮತ್ತು ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನಡೆಸಲು ವಿಶೇಷ ಪೀಠವನ್ನು ರಚನೆ ಮಾಡುವಂತೆ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿತ್ತು. ಆದರಂತೆ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರ ಏಕ ಸದಸ್ಯ ಪೀಠ ರಚನೆಯಾಗಿತ್ತು.

English summary
The Karnataka High Court has reserved it's verdict in the J Jayalalithaa appeals case. Justice Kumaraswamy who heard submissions made by both the appellant and the prosecution concluded hearing on Wednesday while reserving it's verdict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X