ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀಗಳ ಪ್ರಕರಣ, ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಎನ್.ಕುಮಾರ್

|
Google Oneindia Kannada News

ಬೆಂಗಳೂರು, ಜ.19 : ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆಯಿಂದ ಮತ್ತೊಬ್ಬರು ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದಾರೆ. ಕೆಲವು ದಿನಗಳ ಹಿಂದೆ ನ್ಯಾಯಮೂರ್ತಿ ರಾಮ­ಮೋಹನ ರೆಡ್ಡಿ ಮತ್ತು ಕೆ.ಎನ್.ಫಣೀಂದ್ರ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದರು.

ರಾಘವೇಶ್ವರ ಶ್ರೀಗಳು ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದು ಮಾಡು­ವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎನ್.ಕುಮಾರ್ ಮತ್ತು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಪೀಠದ ಮುಂದೆ ಬಂದಿತು. ಈ ಸಂದರ್ಭದಲ್ಲಿ ನ್ಯಾ.ಎನ್‌.ಕುಮಾರ್ ತಾವು ಅರ್ಜಿಯ ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿದರು. [ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್]

Ramachandrapura Mutt

ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದಿರುವುದರಿಂದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಅವರ ಪೀಠಕ್ಕೆ ಅರ್ಜಿ ವರ್ಗಾವಣೆಗೊಳ್ಳಲಿದೆ. ಅರ್ಜಿಯ ವಿಚಾರಣೆಯನ್ನು ಯಾವ ಪೀಠದಲ್ಲಿ ನಡೆಸಬೇಕು ಎಂಬ ಬಗ್ಗೆ ಅವರು ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಆದ್ದರಿಂದ ಶ್ರೀಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೆಲವು ದಿನಗಳ ಕಾಲ ವಿಳಂಬವಾಗುವ ಸಾಧ್ಯತೆ ಇದೆ. [ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಫಣೀಂದ್ರ]

ಇಬ್ಬರು ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದರು : ರಾಘವೇಶ್ವರ ಶ್ರೀಗಳ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆಯಿಂದ ಈ ಹಿಂದೆ ಇಬ್ಬರು ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದರು. ಎನ್.ಕುಮಾರ್ ಅವರು ವಿಚಾರಣೆಯಿಂದ ಹಿಂದೆ ಸರಿದ ಮೂರನೇ ನ್ಯಾಯಮೂರ್ತಿಗಳಾಗಿದ್ದಾರೆ.

ಜ.6ರಂದು ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಮತ್ತು ನ್ಯಾ.ರಾಮ­ಮೋಹನ ರೆಡ್ಡಿ ಅವರ ಪೀಠದ ಮುಂದೆ ಅರ್ಜಿಯ ವಿಚಾರಣೆ ನಡೆದಿತ್ತು. ಆಗ ನ್ಯಾ.ರಾಮಮೋಹನ ರೆಡ್ಡಿ ಅವರು ವಿಚಾರಣೆಯಿಂದ ಹಿಂದೆ ಸರಿದಿದ್ದರು. ಕೆಲವು ದಿನಗಳ ಹಿಂದೆ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರೂ ವಿಚಾರಣೆಯಿಂದ ಹಿಂದೆ ಸರಿದಿದ್ದರು.

English summary
The Karnataka High Court on Monday adjourned the hearing of the petition filed Raghaveshwara Bharathi Swamiji of Ramachandrapura Mutt after Justice N. Kumar recused himself from the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X