ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರ್ಗಿ ಹತ್ಯೆ ಕೇಸ್ : ಸಿಐಡಿ ವರದಿಯಲ್ಲೇನಿದೆ?

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಡಿಸೆಂಬರ್ 19 : ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಸಾಧ್ಯತೆ ಇದೆ. ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬಹುದು ಎಂದು ಸಿಐಡಿ ಸರ್ಕಾರದಕ್ಕೆ ವರದಿ ನೀಡಿದೆ.

2015ರ ಆಗಸ್ಟ್ 30ರಂದು ಧಾರವಾಡದಲ್ಲಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆದಿತ್ತು. ಸರ್ಕಾರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಅಧಿಕಾರಿಗಳು ಸರ್ಕಾರಕ್ಕೆ ರಹಸ್ಯ ವರದಿಯನ್ನು ನೀಡಿದ್ದು, ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬಹುದು ಎಂದು ಹೇಳಿದೆ. ['ಕಲಬುರ್ಗಿ ಹತ್ಯೆ ತನಿಖೆ ಸಿಬಿಐಗೆ ವಹಿಸಲು ಸಿದ್ಧ']

mm kalburgi

'ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಸಿದ್ಧ. ಪ್ರತಿಪಕ್ಷಗಳಿಗೆ ಸಿಐಡಿ ತನಿಖೆಯಲ್ಲಿ ವಿಶ್ವಾಸವಿಲ್ಲದಿದ್ದರೆ, ಸಿಬಿಐಗೆ ವಹಿಸಲು ಸರ್ಕಾರ ಮುಕ್ತ ಮನಸ್ಸು ಹೊಂದಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ದಿನಗಳ ಹಿಂದೆ ಹೇಳಿದ್ದಾರೆ. [ದಾಭೋಲ್ಕರ್, ಪನ್ಸಾರೆ, ಕಲಬುರ್ಗಿ ಹತ್ಯೆಯ ನಡುವೆ ಸಾಮ್ಯತೆ?]

ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ ಮತ್ತು ಎಂ.ಎಂ.ಕಲಬುರ್ಗಿ ಅವರ ಹತ್ಯೆಯ ನಡುವೆ ಸಾಮ್ಯತೆ ಇದೆ. ಮೂರು ಹತ್ಯೆಗಳನ್ನು ಒಂದು ಗುಂಪು ಮಾಡಿರಬಹುದು ಎಂದು ಸಿಐಡಿ ಶಂಕೆ ವ್ಯಕ್ತಪಡಿಸಿದ್ದು, ದಾಬೋಲ್ಕರ್, ಪನ್ಸಾರೆ ಹತ್ಯೆಯ ತನಿಖೆ ನಡೆಸುತ್ತಿರುವ ಸಿಬಿಐಗೆ ಕಲಬುರ್ಗಿ ಅವರ ಹತ್ಯೆಯ ತನಿಖೆಯನ್ನು ನೀಡಬಹುದು ಎಂದು ವರದಿಯಲ್ಲಿ ತಿಳಿಸಿದೆ. [ಕಲಬುರ್ಗಿ ಅವರ ಮೇಲೆ ದಾಳಿ ನಡೆದದ್ದು ಹೇಗೆ?]

ವರದಿಯಲ್ಲಿ ಏನಿದೆ? : ಸಿಐಡಿ ಸರ್ಕಾರಕ್ಕೆ ನೀಡಿರುವ ವರದಿಯಲ್ಲಿ ಮೂರು ಹತ್ಯೆಗಳ ನಡುವೆ ಇರುವ ಸಾಮ್ಯತೆ ಬಗ್ಗೆ ಹಲವು ಅಂಶಗಳನ್ನು ತಿಳಿಸಿದೆ. ಎಲ್ಲಾ ಹತ್ಯೆಗಳು ಮುಂಜಾನೆಯ ಸಮಯದಲ್ಲಿಯೇ ಆಗಿವೆ ಎಂಬುದು ಪ್ರಮುಖವಾದ ಅಂಶ. ಕಲಬುರ್ಗಿ ಅವರ ಮೇಲೆ ಗುಂಡಿನ ದಾಳಿ ನಡೆದಿದ್ದು ಸಹ ಬೆಳಗ್ಗೆ 8.40ರ ಸಮಯದಲ್ಲಿ. [ದಾಭೋಲ್ಕರ್ ಕೊಂದವರು ಯಾರು?]

ನರೇಂದ್ರ ದಾಭೋಲ್ಕರ್, ಗೋವಿಂದ ಪನ್ಸಾರೆ ಅವರ ಹತ್ಯೆಯಂತೆ ಎಂ.ಎಂ.ಕಲಬುರ್ಗಿ ಅವರನ್ನು ಹತ್ಯೆ ಮಾಡಲು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದಿದ್ದರು. 7.65 ಎಂಎಂ ಕಂಟ್ರಿ ಪಿಸ್ತೂಲ್‌ನಿಂದಲೇ ಹತ್ಯೆ ಮಾಡಲಾಗಿದೆ. ಮೂರು ಹತ್ಯೆಗಳಲ್ಲಿ ಇದೇ ವಿಧವಾದ ಬಂದೂಕು ಬಳಸಲಾಗಿದೆ ಎಂದು ಸಿಐಡಿ ವರದಿಯಲ್ಲಿ ಹೇಳಿದೆ.

ಲೋಕಸಭೆಯಲ್ಲಿಯೂ ಕಲಬುರ್ಗಿ ಅವರ ಹತ್ಯೆ ಬಗ್ಗೆ ಚರ್ಚೆ ನಡೆದಿದೆ. ಧಾರವಾಡದ ಸಂಸದ ಪ್ರಹ್ಲಾದ್ ಜೋಶಿ ಅವರು ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಸದನದಲ್ಲಿ ಹೇಳಿದ್ದರು. ರಾಜ್ಯ ಸರ್ಕಾರ ಒಪ್ಪಿದರೆ ಕೇಂದ್ರ ತನಿಖೆಯನ್ನು ಸಿಬಿಐಗೆ ಒಪ್ಪಿಸಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದರು.

ದಾಬೋಲ್ಕರ್, ಪನ್ಸಾರೆ ಯಾರು? : ಹಿರಿಯ ಸಿಪಿಐ ನಾಯಕ ಹಾಗೂ ಮಹಾರಾಷ್ಟ್ರ ವಿಚಾರವಾದಿ ಗೋವಿಂದ್ ಪನ್ಸಾರೆ ಮತ್ತು ಮೂಢನಂಬಿಕೆಗಳ ವಿರೋಧಿ ಹೋರಾಟಗಾರ ಡಾ. ನರೇಂದ್ರ ದಾಬೋಲ್ಕರ್ ಅವರನ್ನು ಎಂ.ಎಂ.ಕಲಬುರ್ಗಿ ಅವರಂತೆಯೇ ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

English summary
The Karnataka police is making out a case to hand over the investigation into the murder of Dr M.M.Kalburgi to the Central Bureau of Investigation. CID submitted confidential report to the Karnataka Government about murder case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X