ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳ : ಕನಕಗಿರಿ ಉತ್ಸವದ ಲಾಂಛನ ಬಿಡುಗಡೆ

|
Google Oneindia Kannada News

ಕೊಪ್ಪಳ, ಫೆ. 21 : ಎರಡು ದಿನಗಳ ಕಾಲ ನಡೆಯುವ ಕನಕಗಿರಿ ಉತ್ಸವದ ಲಾಂಛನವನ್ನು ಕನಕಗಿರಿಯಲ್ಲಿ ಶುಕ್ರವಾರ ಬಿಡುಗಡೆ ಮಾಡಲಾಗಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಲಾಂಛನ ಬಿಡುಗಡೆ ಮಾಡಿದ್ದಾರೆ.

2015ನೇ ಸಾಲಿನ ಕನಕಗಿರಿ ಉತ್ಸವ ಫೆ. 23 ಮತ್ತು 24 ರಂದು ಕನಕಗಿರಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಕನಕಗಿರಿ ಉತ್ಸವದ ಲಾಂಛನ ಕನಕಾಚಲಪತಿ ದೇವಸ್ಥಾನ, ಲಕ್ಷ್ಮೀ ನರಸಿಂಹ ಸ್ವಾಮಿ ದೇವರ ಮೂರ್ತಿಯನ್ನೊಳಗೊಂಡಿದೆ.

Kanakagiri Utsava

ಕೊಪ್ಪಳ ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಜಿಲ್ಲಾ ಪಂಚಾಯಿತಿ ಸದಸ್ಯ ಸದಸ್ಯ ವೀರೇಶ್ ಸಮಗಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಸೇರಿದಂತೆ ಹಲವು ಅಧಿಕಾರಿಗಳು ಲಾಂಛನ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಶನಿವಾರದಿಂದ ಕ್ರೀಡಾಕೂಟ : ಕನಕಗಿರಿ ಉತ್ಸವದ ಪ್ರಯುಕ್ತ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ಫೆ. 21 ರಿಂದ ಕ್ರೀಡಾಕೂಟಗಳು ಆರಂಭವಾಗಲಿವೆ. ಕನಕಗಿರಿಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಕ್ರೀಡಾಕೂಟ ನಡೆಯಲಿದೆ. [ಕೊಪ್ಪಳ : ವಿಷ ಸೇವಿಸಿದ ಸ್ವಾಮೀಜಿ ಸ್ಥಿತಿ ಚಿಂತಾಜನಕ]

Kanakagiri

ಇದೇ ಮೊದಲ ಬಾರಿಗೆ ಹೊನಲು ಬೆಳಕಿನಲ್ಲಿ ಫೆ. 21 ರಂದು ಸಂಜೆ 4 ಗಂಟೆಗೆ ವಾಲಿಬಾಲ್ ಮತ್ತು ಫೆ. 22 ರಂದು ಸಂಜೆ ಕಬಡ್ಡಿ ಪಂದ್ಯಾವಳಿಯನ್ನು ಪುರುಷರಿಗೆ ಮತ್ತು ಮಹಿಳೆಯರಿಗೆ ಆಯೋಜಿಸಲಾಗಿದೆ. ಪುರುಷರಿಗೆ ವಾಲಿಬಾಲ್, ಕಬಡ್ಡಿ, ಮಲ್ಲಕಂಬ ಹಾಗೂ ಕುಸ್ತಿ ಪಂದ್ಯಗಳನ್ನು ಆಯೋಜಿಸಲಾಗಿದ್ದು, ಮಹಿಳೆಯರಿಗೆ ವಾಲಿಬಾಲ್, ಕಬಡ್ಡಿ, ಮಲ್ಲಕಂಬ ಹಾಗೂ ರಂಗೋಲಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ರಂಗೋಲಿ ಸ್ಪರ್ಧೆ ಫೆ. 23 ರಂದು ಬೆಳಿಗ್ಗೆ 8-30 ಗಂಟೆಗೆ ಕನಕಗಿರಿ ಜೂನಿಯರ್ ಕಾಲೇಜಿನಲ್ಲಿ ಹಾಗೂ ಕುಸ್ತಿ ಪಂದ್ಯಗಳು ಫೆ. 24 ರಂದು ಬೆಳಿಗ್ಗೆ 9 ರಿಂದ ನಡೆಯಲಿದೆ. ಇತರ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

English summary
The logo for the Kanakagiri Utsava unveiled at Kanakagiri of Koppala district on Friday. Utsava will be held from February 23 to 24.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X