ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ಕಡ್ಡಾಯ ಕಲಿಕೆ ಕೈ ಹಿಡಿದ ರಾಜ್ಯ ಸರ್ಕಾರ

|
Google Oneindia Kannada News

ಬೆಂಗಳೂರು, ಮಾ. 27: ರಾಜ್ಯ ಸರ್ಕಾರ 1 ರಿಂದ 5 ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲೇ ಪ್ರಾಥಮಿಕ ಶಿಕ್ಷಣ ಜಾರಿಯಾಗಬೇಕು ಎಂಬ ವಿಧೇಯಕವನ್ನು ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ.

1ರಿಂದ 10ನೇ ತರಗತಿವರೆಗೆ ಎಲ್ಲ ಶಾಲೆಗಳಲ್ಲೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸಬೇಕು ಎಂಬ ವಿಧೇಯಕವನ್ನು ಸಹ ಮಂಡಿಸಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ "ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಲು ಮಕ್ಕಳ ಹಕ್ಕು ವಿಧೇಯಕ-2015' ಹಾಗೂ "ಕನ್ನಡ ಭಾಷಾ ಕಲಿಕೆ ವಿಧೇಯಕ-2015' ವನ್ನು ಮಂಡಿಸಿದ್ದಾರೆ.[ಕನ್ನಡ ಮಾಧ್ಯಮ ಮಸೂದೆಗೆ ರಾಜ್ಯ ಕ್ಯಾಬಿನೆಟ್ ಒಪ್ಪಿಗೆ]

kannada

ಸಂವಿಧಾನದ 350 ಎ ಪ್ರಕಾರ ಮಗುವಿಗೆ ಆತನ/ಆಕೆಯ ಮಾತೃಭಾಷೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಣ ಒದಗಿಸುವುದು ಸಂಬಂಧ ಪಟ್ಟ ರಾಜ್ಯಗಳ ಸಂವಿಧಾನಿಕ ಕರ್ತವ್ಯವಾಗಿದೆ. ಇದನ್ನು ಶಿಕ್ಷಣ ತಜ್ಞರು, ಬುದ್ಧಿ ಜೀವಿಗಳು ಮತ್ತು ಬರಹಗಾರರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗಿದೆ.

1 ರಿಂದ 5ನೇ ತರಗತಿವರೆಗೆ ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ಕಡ್ಡಾಯವಾಗಿ ನೀಡುವುದು, ಇನ್ನು ಮುಂತಾದ ವಿಚಾರಗಳನ್ನು ವಿಧೇಯಕದಲ್ಲಿ ಮಂಡಿಸಲಾಗಿದೆ.

ರಾಜ್ಯದಲ್ಲಿರುವ ಎಲ್ಲ ಶಾಲೆಗಳಲ್ಲೂ 1ರಿಂದ 10 ನೇ ತರಗತಿವರೆಗೆ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಲು ಸರ್ಕಾರ ನಿರ್ಧಾರ ಮಾಡಿದ್ದು, 2015-16ನೇ ಶೈಕ್ಷಣಿಕ ವರ್ಷದಿಂದಲೇ ಇದನ್ನು ಜಾರಿಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗುವುದು.[ಕಡ್ಡಾಯ ಕನ್ನಡ ಶಿಕ್ಷಣ ಹೋರಾಟಕ್ಕೆ ಮತ್ತೆ ಹಿನ್ನಡೆ]

ಕನ್ನಡ ಭಾಷಾ ಕಲಿಕೆ ವಿಧೇಯಕದಲ್ಲೇನಿದೆ?
ರಾಜ್ಯದಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸಲೇಬೇಕು ಎನ್ನುವುದು ವಿಧೇಯಕದ ಪ್ರಮುಖ ಅಂಶ. ಅಲ್ಪಸಂಖ್ಯಾತ, ಖಾಸಗಿ ಸೇರಿದಂತೆ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಶಿಕ್ಷಣ ಸಂಸ್ಥೆಗಳಲ್ಲೂ ಕನ್ನಡ ಭಾಷೆಯನ್ನು ಯಾರೂ ನಿರ್ಲಕ್ಷ್ಯ ಮಾಡುವಂತಿಲ್ಲ.

English summary
Karnataka government introduced bills to make Kannada language a mandatory subject in classes one to ten in schools affiliated to the state board and also a compulsory medium of instruction from classes one to five.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X