ಕವಿ, ಮೇಷ್ಟರು, ಸಜ್ಜನ, ಸಾಶಿ ಮರುಳಯ್ಯ ಕಣ್ಮರೆ
ಬೆಂಗಳೂರು, ಫೆಬ್ರವರಿ 05 : ಹಿರಿಯ ಸಾಹಿತಿ ಡಾ.ಸಾ.ಶಿ.ಮರುಳಯ್ಯ ಅವರು ವಿಧಿವಶರಾಗಿದ್ದಾರೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದು, ದೇಹವನ್ನು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ದಾನ ಮಾಡಲಾಗಿದೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳುತ್ತಿದ್ದ ಸಾ.ಶಿ.ಮರುಳಯ್ಯ (85) ಅವರನ್ನು ಜನವರಿ 22ರಂದು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 6 ಗಂಟೆಗೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. [ಸಾ.ಶಿ.ಮ. ಜೊತೆಗೊಂದು ಸುಮಧುರ ಸಂಜೆ]

'ತಮ್ಮ ದೇಹವನ್ನು ದಾನ ಮಾಡಬೇಕು ಎಂದು ಪತ್ರ ಬರೆದಿಟ್ಟಿದ್ದರು. ಅವರ ಇಚ್ಛೆಯಂತೆ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ದೇಹವನ್ನು ದಾನ ಮಾಡಲಾಗುತ್ತದೆ' ಎಂದು ಸಾ.ಶಿ.ಮರುಳಯ್ಯ ಪುತ್ರ ಸಾ.ಶಿ.ಶಿವಪ್ರಸಾದ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. [ಸಾ.ಶಿ.ಮರುಳಯ್ಯ ಬಗ್ಗೆ ಓದಿ]
1931ರ ಜನವರಿ 28ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸಾಸಲು ಗ್ರಾಮದಲ್ಲಿ ಜನಿಸಿದ್ದ, ಸಾ.ಶಿ.ಮರುಳಯ್ಯ ಅವರ ಪೂರ್ಣ ಹೆಸರು ಸಾಸಲು ಶಿವರುದ್ರಯ್ಯ ಮರುಳಯ್ಯ. ಮರುಳಯ್ಯ ಅವರು ಪ್ರಾಧ್ಯಾಪಕರಾಗಿ ಬೆಂಗಳೂರು, ಮೈಸೂರು, ಮಂಗಳೂರು ಸೇರಿದಂತೆ ವಿವಿಧ ಕಡೆ ಸುದೀರ್ಘ ಸೇವೆ ಸಲ್ಲಿಸಿದ್ದರು.
ಡಾ.ಸಾ.ಶಿ.ಮರುಳಯ್ಯ ಅವರು ಕಾವ್ಯ, ಪ್ರಹಸನ, ಕಾದಂಬರಿ, ಸಣ್ಣಕಥೆ, ನಾಟಕ, ವಿಮರ್ಶೆ ಸೇರಿದಂತೆ 60ಕ್ಕೂ ಅಧಿಕ ಕೃತಿಗಳನ್ನು ರಚನೆ ಮಾಡಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದಿಂದ 'ಕೆಳದಿಯ ಅರಸರು ಮತ್ತು ಕನ್ನಡ ಸಾಹಿತ್ಯ' ಕುರಿತ ಮಹಾ ಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪಡೆದಿದ್ದಾರೆ.
ಪ್ರಮುಖ ಕೃತಿಗಳು : ಶಿವತಾಂಡವ, ಕೆಂಗನಕಲ್ಲು, ರೂಪಸಿ ಮುಂತಾದ ಕವನ ಸಂಕಲನ, ನೆಲದ ಸೊಗಡು, ಹೇಮಕೂಟ ಕಥಾ ಸಂಕಲನ, ಮರೀಬೇಡಿ, ವಿಜಯವಾತಪಿ ನಾಟಕ, ಭಾರತ ರತ್ನ ನೆಹರು, ದೇವುಡು ಜೀವನ ಚರಿತ್ರೆ ಸಾ.ಶಿ.ಮರುಳಯ್ಯ ಅವರ ಪ್ರಮುಖ ಕೃತಿಗಳು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications