ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೃಹ ಸಚಿವ ಕೆಜೆ ಜಾರ್ಜ್ ಕಾಡಿದ 7 ವಿವಾದಗಳು

|
Google Oneindia Kannada News
ಮಂಗಳೂರು ಐಜಿ ಕಚೇರಿ ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು 'ನನಗೆ ಮುಂದೆ ಏನಾದರೂ ಆದರೆ ಅದಕ್ಕೆ ಲೋಕಾಯುಕ್ತ ಐಜಿಪಿ ಪ್ರಣಬ್‌ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರೇ ಕಾರಣ' ಎಂದು ಸುದ್ದಿವಾಹಿನಿಗೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈಗ ಜಾರ್ಜ್‌ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರು. ಆದರೆ, ಅವರು ಹಿಂದೆ ಗೃಹ ಸಚಿವರಾಗಿದ್ದಾಗ ಕಾಡಿದ ವಿವಾದಗಳ ವಿವರ ಇಲ್ಲಿದೆ.....[ಗಣಪತಿ ಅವರ ಕೊನೆಯ ಮಾತುಗಳನ್ನು ನೋಡಿ]

ಬೆಂಗಳೂರು, ನ.6 : 'ಅತ್ಯಾಚಾರದ ಸುದ್ದಿಗಳನ್ನು ಮಾಧ್ಯಮಗಳು ವೈಭವೀಕರಿಸುತ್ತಿವೆ. ಟಿಆರ್‌ಪಿಗಾಗಿ ಮಾಧ್ಯಮಗಳು ಈ ಸುದ್ದಿಯನ್ನು ಸೆನ್ಸೇಷನಲ್ ಮಾಡುತ್ತಿದೆ' ಎಂದು ಕರ್ನಾಟಕ ಗೃಹ ಸಚಿವ ಕೆಜೆ ಜಾರ್ಜ್ ಮಾಧ್ಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

'ದೆಹಲಿಯ ನಿರ್ಭಯಾ ಪ್ರಕರಣದಿಂದಾಗಿ ರಾಷ್ಟ್ರದಲ್ಲಿ ಜಾಗೃತಿಯಾಗಿದೆ. ಬೆಂಗಳೂರನ್ನು ರೇಪ್ ಸಿಟಿ ಎಂದು ಕರೆಯುವುದು, ರಾಜ್ಯದಲ್ಲಿರುವ ಜನರೆಲ್ಲರೂ ದೌರ್ಜನ್ಯ ಮಾಡುತ್ತಿದ್ದಾರೆ ಎಂಬುದಾಗಿ ತೋರಿಸುತ್ತಿದ್ದಾರೆ. ಇದರ ಬದಲಾಗಿ ತಪ್ಪಿತ್ತಸ್ಥರ ಬಗ್ಗೆ ಸುದ್ದಿ ಮಾಡಿ' ಎಂದು ಸಚಿವರು ಸಲಹೆ ನೀಡಿದ್ದರು.

ಮಾಧ್ಯಮಗಳ ಬಗ್ಗೆ ಹೇಳಿಕೆ ನೀಡಿ ವಿವಾದ ಹುಟ್ಟುಹಾಕಿದ್ದ ಜಾರ್ಜ್ ಹೇಳಿಕೆಗೆ ಖಂಡನೆ ವ್ಯಕ್ತವಾಗಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕೆ ಹೀಗೆ ಹೇಳಿದರೋ ತಿಳಿದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ವಿವಾದಕ್ಕೆ ಸಿಲುಕಿದ್ದು ಇದೇ ಮೊದಲಲ್ಲ.

ಮಾಧ್ಯಮಗಳ ಟಿಆರ್‌ಪಿ ಹೇಳಿಕೆ

ಮಾಧ್ಯಮಗಳ ಟಿಆರ್‌ಪಿ ಹೇಳಿಕೆ

ಅತ್ಯಾಚಾರದ ಸುದ್ದಿಗಳನ್ನು ಮಾಧ್ಯಮಗಳು ವೈಭವೀಕರಿಸುತ್ತಿವೆ. ಟಿಆರ್‌ಪಿಗಾಗಿ ಮಾಧ್ಯಮಗಳು ಈ ಸುದ್ದಿಯನ್ನು ಸೆನ್ಸೇಷನಲ್ ಮಾಡುತ್ತಿದೆ'. ಬೆಂಗಳೂರನ್ನು ರೇಪ್ ಸಿಟಿ ಎಂದು ಬಿಂಬಿಸುವ ಬದಲು ತಪ್ಪಿತಸ್ಥರ ಬಗ್ಗೆ ವರದಿ ಮಾಡಿ ಎಂದು ಬುಧವಾರ ಮಾಧ್ಯಮಗಳಿಗೆ ಜಾರ್ಜ್ ಸಲಹೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ.

ಭೂಗತ ಪಾತಕಿಗಳಿಂದ ಕರೆ

ಭೂಗತ ಪಾತಕಿಗಳಿಂದ ಕರೆ

ವಿಧಾನಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಮಂತರಿಗೆ ಭೂಗತ ಪಾತಿಕಿಗಳು ಕರೆ ಮಾಡುವುದನ್ನು ಪತ್ತೆ ಹಚ್ಚಲು ಮುಂದಾಗುತ್ತಿರುವ ನನಗೆ ಬೆದರಿಕೆ ಕರೆ ಬರುತ್ತಿದೆ ಎಂದು ಕೆ.ಜೆ.ಜಾರ್ಜ್ ಹೇಳಿದ್ದರು. ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, ಅನಾಮಧೇಯ ಭೂಗತ ಪಾತಕಿಗಳು ಕರೆ ಮಾಡಿ ಹಣ ವಸೂಲಿ ಮಾಡುತ್ತಿದ್ದಾರೆ. ಹಣ ಕೊಡಲು ನಿರಾಕರಿಸುವವರನ್ನು ಹತ್ಯೆ ಮಾಡುವ ಪ್ರಯತ್ನ ನಡೆಯುತ್ತಿದೆ. ಇದೊಂದು ದೊಡ್ಡ ದಂಧೆಯಾಗಿದ್ದು, ಇದನ್ನು ತಡೆಯಲು ಮುಂದಾದ ನನಗೂ ಕರೆ ಬರುತ್ತಿದೆ ಎಂದು ಹೇಳಿದ್ದರು.

ಮಲ್ಲಿಕಾರ್ಜುನ ಬಂಡೆ ಶೂಟೌಟ್ ವಿವಾದ

ಮಲ್ಲಿಕಾರ್ಜುನ ಬಂಡೆ ಶೂಟೌಟ್ ವಿವಾದ

ಕಲಬುರಗಿಯಲ್ಲಿ ಸುಫಾರಿ ಹಂತಕ ಮುನ್ನಾ ಜೊತೆಗಿನ ಗುಂಡಿನ ಕಾಳಗದಲ್ಲಿ ಗುಂಡೇಟು ತಿಂದು ಗಾಯಗೊಂಡಿದ್ದ ಪಿಎಸ್‌ಐ ಮಲ್ಲಿಕಾರ್ಜುನ ಬಂಡೆ ಅವರ ಸಾವಿನ ಪ್ರಕರಣದಲ್ಲಿಯೂ ಗೃಹ ಸಚಿವರ ಅಸಮರ್ಥತೆ ಇದೆ ಎಂಬ ಆರೋಪ ಕೇಳಿಬಂದಿತ್ತು. ಬಂಡೆ ಸಾವಿನ ಪ್ರಕರಣವನ್ನು ಕೊನೆಗೆ ಸಿಐಡಿಗೆ ವಹಿಸಿ ಸರ್ಕಾರ ಆದೇಶ ಹೊರಡಿಸಿತು.

ಪೊಲೀಸರ ಸಾಮೂಹಿಕ ವರ್ಗಾವಣೆ ವಿವಾದ

ಪೊಲೀಸರ ಸಾಮೂಹಿಕ ವರ್ಗಾವಣೆ ವಿವಾದ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಕೆಲವು ತಿಂಗಳುಗಳಲ್ಲಿಯೇ ಪೊಲೀಸರ ಸಾಮೂಹಿಕ ವರ್ಗಾವಣೆ ನಡೆದಿತ್ತು. ಆಗ ರಾಜ್ಯಪಾಲರಾಗಿದ್ದ ಎಚ್.ಆರ್.ಭಾರದ್ವಾಜ್ ಅವರು ಇದರ ವಿರುದ್ದ ಅತೃಪ್ತಿ ವ್ಯಕ್ತಪಡಿಸಿದ್ದರು. ಇತ್ತೀಚಿನ ದಿನಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗುತ್ತಿದೆ ಎಂದು ಆರೋಪಿಸಿದ್ದ ಅವರು ಕರ್ನಾಟಕದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ ಇದನ್ನು ತಡೆಯಲು ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಕಿವಿ ಹಿಂಡಿದ್ದರು.

ರೌಡಿ ಶೀಟರ್ ಚುನಾವಣಾ ಪ್ರಚಾರ ವಿವಾದ

ರೌಡಿ ಶೀಟರ್ ಚುನಾವಣಾ ಪ್ರಚಾರ ವಿವಾದ

ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅವರೊಂದಿಗೆ ರೌಡಿ ಶೀಟರ್ ಬ್ರಿಗೇಡ್ ಅಜಂ ಕಾಣಿಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಪ್ರಚಾರ ವಾಹನದಲ್ಲಿ ಸ್ವತಃ ಗೃಹ ಸಚಿವ ಕೆ.ಜೆ.ಜಾರ್ಜ್ ಇದ್ದರು. ಈ ಬಗ್ಗೆ ಹೇಳಿಕೆ ನೀಡಿದ್ದ ಅವರು, ಪ್ರಚಾರ ವಾಹನದಲ್ಲಿ ಯಾರಿದ್ದರು ಎಂಬುದನ್ನು ನಾವು ಸ್ಕ್ಯಾನ್ ಮಾಡಿ ನೋಡಲಾಗುವುದಿಲ್ಲ ಎಂದು ಹೇಳಿ ಮಾಧ್ಯಮಗಳ ಕೆಂಗಣ್ಣಿಗೆ ಗುರಿಯಾಗಿದ್ದರು.

ಕೆಂಪಯ್ಯ ನೇಮಕ ವಿವಾದ

ಕೆಂಪಯ್ಯ ನೇಮಕ ವಿವಾದ

ಗೃಹ ಸಚಿವರ ಸಲಹೆಗಾರರನ್ನಾಗಿ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರ ನೇಮಕ ಮಾಡಿದ್ದು, ದೊಡ್ಡ ಸುದ್ದಿಯಾಗಿತ್ತು. ಸಿಎಂ ಸಿದ್ದರಾಮಯ್ಯ ಅವರು ಕೆಂಪಯ್ಯ ನೇಮಕವನ್ನು ಸಮರ್ಥಿಸಿಕೊಂಡರು. ಆದರೆ, ಸಲಹೆಗಾರರನ್ನಾಗಿ ನೇಮಕ ಮಾಡುವ ಮೂಲಕ ಸಚಿವ ಕೆ.ಜೆ. ಜಾರ್ಜ್ ಅವರು ಅಸಮರ್ಥರೆಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಬೀತು ಪಡಿಸಿದ್ದಾರೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು.

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ

ಮಂಗಳೂರು ಐಜಿ ಕಚೇರಿ ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 'ನನಗೆ ಮುಂದೆ ಏನಾದರೂ ಆದರೆ ಅದಕ್ಕೆ ಲೋಕಾಯುಕ್ತ ಐಜಿಪಿ ಪ್ರಣಬ್‌ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರೇ ಕಾರಣ' ಎಂದು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

ಇತರ ಪ್ರಮುಖ ಪ್ರಕರಣಗಳು

ಇತರ ಪ್ರಮುಖ ಪ್ರಕರಣಗಳು

*ಬೆಂಗಳೂರು ಎಟಿಎಂನಲ್ಲಿನ ಹಲ್ಲೆ ಪ್ರಕರಣ
*ರಾಜ್ಯದಲ್ಲಿ ನಡೆದ ಸರಣಿ ಅತ್ಯಾಚಾರ ಪ್ರಕರಣ
*ಸೌಜನ್ಯ ಕೊಲೆ ಪ್ರಕರಣ ಮುಂತಾದವುಗಳನ್ನು ಪ್ರಸ್ತಾಪಿಸಿ ಪ್ರತಿಪಕ್ಷಗಳು ಜಾರ್ಜ್‌ ರಾಜೀನಾಮೆಗೆ ಒತ್ತಾಯಿಸಿದ್ದವು.

English summary
Karnataka Home Minister K.J.George blamed the media for highlighting rape news projecting Bengaluru as "a rape city" to increase TRP ratings. Here is top seven controversies of home minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X