ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ

|
Google Oneindia Kannada News

ಬೆಂಗಳೂರು, ಮೇ. 2: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನ್ನಭಾಗ್ಯ ಮತ್ತೊಂದು ಹೆಜ್ಜೆ ಮುಂದೆ ಸಾಗಿತದ್ದು ಬಿಪಿಎಲ್ ಕಾರ್ಡ್ ದಾರರು ಉಚಿತ ಪಡಿತರ ಪಡೆಯುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಕಡಿಮೆ ಬೆಲೆಗೆ ಅಕ್ಕಿ ಪಡೆಯುತ್ತಿದ್ದ ಬಿಪಿಎಲ್ ಪಡಿತರರು ಇನ್ನು ಮುಂದೆ ಉಚಿತವಾಗಿ ಅಕ್ಕಿ ಪಡೆಯಲಿದ್ದಾರೆ. ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಿಪಿಎಲ್, ಅಂತ್ಯೋದಯ ಫಲಾನುಭವಿಗಳಿಗೆ ಉಚಿತ ಅಕ್ಕಿ, ರಿಯಾಯಿತಿ ದರದಲ್ಲಿ ತಾಳೆಎಣ್ಣೆ ಮತ್ತು ಅಯೋಡಿನ್‌ ಉಪ್ಪು ವಿತರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಿದರು.[ಪಡಿತರದೊಂದಿಗೆ ಸಿಗಲಿದೆ ಬೇಳೆ, ತಾಳೆ ಎಣ್ಣೆ, ಉಪ್ಪು]

ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ರೋಷನ್‌ಬೇಗ್, ಶಾಸಕ ಮುನಿರತ್ನ, ಡಾ.ಅಶ್ವಥನಾರಾಯಣ, ಭೈರತಿ ಬಸವರಾಜ್, ಆರ್.ವಿ.ದೇವರಾಜ್, ವಿಧಾನಪರಿಷತ್ ಸದಸ್ಯರಾದ ಎಚ್.ಎಂ.ರೇವಣ್ಣ, ವಿ.ಎಸ್.ಉಗ್ರಪ್ಪ, ಎಂ.ಆರ್.ಸೀತಾರಾಂ, ಗಾಯಕ ಶಿವಮೊಗ್ಗ ಸುಬ್ಬಣ್ಣ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಅಕ್ಕಿ ಉಚಿತವಾಗಿ ಕೊಡುತ್ತಿರೋ ಬಗ್ಗೆ ನಿಮ್ಮ ಅಭಿಪ್ರಾಯವೇನು?ಇಲ್ಲಿ ದಾಖಲಿಸಿ

ಹಸಿವು ಮುಕ್ತ ರಾಜ್ಯದ ಗುರಿ

ಹಸಿವು ಮುಕ್ತ ರಾಜ್ಯದ ಗುರಿ

ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಬಡವರನ್ನು ಹೊಂದಿರುವ ರಾಜ್ಯ ಕರ್ನಾಟಕ. ಈ ರಾಜ್ಯವನ್ನು ಹಸಿವು ಮುಕ್ತ ಮಾಡುವುದೇ ನಮ್ಮ ಗುರಿ ಎಂದು ಹೇಳಿದರು. ಆಂಧ್ರಪ್ರದೇಶದಲ್ಲಿ ಶೇ.21, ತಮಿಳುನಾಡಿನಲ್ಲಿ ಶೇ.17, ಕೇರಳದಲ್ಲಿ ಶೇ.12, ಕರ್ನಾಟಕದಲ್ಲಿ ಶೇ.23.6ರಷ್ಟು ಬಡ ಜನರಿದ್ದಾರೆ. ಎಲ್ಲರಿಗೂ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಲಾಗುವುದು ಎಂದರು.

ಆನ್ ಲೈನ್ ಅರ್ಜಿ ಆಹ್ವಾನ

ಆನ್ ಲೈನ್ ಅರ್ಜಿ ಆಹ್ವಾನ

ಹೊಸದಾಗಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯಾರಾದರೂ ಅರ್ಹ ಫಲಾನಿಭವಿಗಳು ಪಟ್ಟಿಯಿಂದ ಹೊರಗುಳಿದಿದ್ದರೆ ಇದನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು ಎಂದು ಸಿಎಂ ತಿಳಿಸಿದರು.

ಎಪಿಎಲ್ ಕಾರ್ಡ್ ದಾರರಿಗೂ ಪಡಿತರ

ಎಪಿಎಲ್ ಕಾರ್ಡ್ ದಾರರಿಗೂ ಪಡಿತರ

ಜೂನ್ 1 ರಿಂದ ರಿಯಾಯಿತಿ ದರದಲ್ಲಿ ಎಪಿಎಲ್ ಪಡಿತರದಾರರಿಗೂ ಅಕ್ಕಿ, ಗೋಧಿ ಕೊಡಲಾಗುತ್ತದೆ. 15 ರೂ.ಗೆ ಕೆಜಿ ಅಕ್ಕಿ, 5ರೂ. ಗೆ ಕೆಜಿ ಗೋಧಿ ನೀಡಲಾಗುತ್ತದೆ. ಇದರಿಂದ ಭತ್ತ, ರಾಗಿ, ಗೋಧಿ ಬೆಳೆಯುವವರಿಗೂ ಅನುಕೂಲವಾಗಿಲಿದೆ ಎಂದು ಹೇಳಿದರು.

ಕಾಳಸಂತೆ ಮಾರಾಟಕ್ಕೆ ಕಡಿವಾಣ

ಕಾಳಸಂತೆ ಮಾರಾಟಕ್ಕೆ ಕಡಿವಾಣ

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್‌ಗುಂಡೂರಾವ್ ಮಾತನಾಡಿ, ಅಧಿಕಾರಕ್ಕೆ ಬಂದ ಮೇಲೆ 20 ಲಕ್ಷ ಪಡಿತರ ಚೀಟಿ ವಿತರಿಸಿದ್ದೇವೆ. 1.8 ಕೋಟಿ ಕುಟುಂಬಗಳಿಗೆ ಪಡಿತರ ನೀಡಲಾಗಿದೆ. ಕಾಳಸಂತೆಯಲ್ಲಿ ಪಡಿತರ ಮಾರಾಟವಾಗುತ್ತಿದ್ದುದನ್ನು ತಪ್ಪಿಸಲಾಗಿದೆ. 14.40 ಕ್ವಿಂಟಾಲ್ ರಾಗಿ ಖರೀದಿ ಮಾಡಲಾಗಿದೆ ಎಂದಿ ಮಾಹಿತಿ ನೀಡಿದರು.

English summary
Those who have not got the Below Poverty Line (BPL) ration cards or those who want Above Poverty Line (APL) ration cards can now apply online with the Food Department from Friday. Announcing this at a programme to launch the reformed Anna Bhagya scheme here on Friday, Chief Minister Siddaramaiah pointed out that the process of receiving online applications for the BPL and APL cards had been suspended for sometime.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X