ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಎಸ್ಆರ್‌ಟಿಸಿ ಬಸ್ಸುಗಳಿಗೆ ತಟ್ಟಿದ ಕಾವೇರಿ ಹೋರಾಟದ ಬಿಸಿ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 06 : ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಮಂಡ್ಯದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ರಾಜೀನಾಮೆಗೆ ಆಗ್ರಹಿಸಿದರು.

ಮಂಗಳವಾರ ಮಂಡ್ಯ ಬಂದ್ ನಡೆಸಲಾಗುತ್ತಿದೆ. ಕನ್ನಡಪರ ಸಂಘಟನೆಗಳು ಸೆಪ್ಟೆಂಬರ್ 9ರ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಮಂಡ್ಯದಲ್ಲಿ ರೈತರು ಕರ್ನಾಟಕ ಸರ್ಕಾರ ಮತ್ತು ಹಿರಿಯ ವಕೀಲ ಫಾಲಿ ಎಸ್.ನಾರಿಮನ್ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.[ಮಂಡ್ಯ ಬಂದ್ : ಕ್ಷಣ-ಕ್ಷಣದ ಮಾಹಿತಿ]

ksrtc

ಕಾವೇರಿ ಪ್ರತಿಭಟನೆ ಹಿನ್ನಲೆಯಲ್ಲಿ ತಮಿಳುನಾಡಿಗೆ ಸಂಚಾರ ನಡೆಸುವ 700 ಸರ್ಕಾರಿ ಬಸ್ಸುಗಳನ್ನು ಕರ್ನಾಟಕ ಸ್ಥಗಿತಗೊಳಿಸಿದೆ. ತಮಿಳುನಾಡಿನಿಂದ ಆಗಮಿಸಬೇಕಿದ್ದ 418 ಬಸ್ಸುಗಳ ಸಂಚಾರವೂ ಸ್ಥಗಿತಗೊಂಡಿದೆ. ಮಂಡ್ಯದಲ್ಲಿ ಪ್ರತಿಭಟನೆ ಜೋರಾಗಿದ್ದು ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.[ಕಾವೇರಿ ವಿವಾದ : ಹೊಸೂರು, ಮೈಸೂರು ರಸ್ತೆಗೆ ಕಾಲಿಡಬೇಡಿ!]

ತಜ್ಞರೊಂದಿಗೆ ಸಭೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ನೀರಾವರಿ ತಜ್ಞರೊಂದಿಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಕುರಿತು ಮಂಗಳವಾರ ಬೆಳಗ್ಗೆ ಸಭೆ ನಡೆಸಿದರು. ಸಂಜೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ.[ಬೆಂಗಳೂರಿಗರೇ ಎಚ್ಚರ!, ಕುಡಿಯೋಕೆ ಕಾವೇರಿ ನೀರು ಸಿಗಲ್ಲ!]

ಕರ್ನಾಟಕ ಕಾವೇರಿ ಮೇಲುಸ್ತುವಾರಿ ಸಮಿತಿಗೆ ತಕ್ಷಣ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸುವಂತೆ ಮನವಿ ಮಾಡುವ ಸಾಧ್ಯತೆ ಇದೆ. ಈ ಸಮಿತಿ ತಮಿಳುನಾಡಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸುವ ಸಾಧ್ಯತೆ ಇದೆ.

ಸೋಮವಾರ ಸುಪ್ರೀಂಕೋರ್ಟ್ 10 ದಿನಗಳ ಕಾಲ ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್‌ನಷ್ಟು ನೀರು ಹರಿಸಬೇಕು ಎಂದು ಆದೇಶ ನೀಡಿದೆ. ಸೆಪ್ಟೆಂಬರ್ 16ರಂದು ಸುಪ್ರೀಂಕೋರ್ಟ್‌ನಲ್ಲಿ ಪುನಃ ಅರ್ಜಿಯ ವಿಚಾರಣೆ ನಡೆಯಲಿದೆ.

English summary
Pro Kannada organisations have called for a Karnataka bandh on September 9 to protest against the verdict of the Supreme Court which ordered the release of Cauvery Water to Tamil Nadu. There have been a spate of protests in Karnataka today and at least 700 buses have been stopped from entering Tamil Nadu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X