ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆ.20ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಫೆ.20ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸಲು ತಿರ್ಮಾನಿಸಿದೆ.

By Ramesh
|
Google Oneindia Kannada News

ಬೆಂಗಳೂರು, ಫೆಬ್ರವರಿ. 14 : ಕರ್ನಾಟಕ ಸರ್ಕಾರದ ವಿರುದ್ಧ ಫೆಬ್ರವರಿ 20ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲು ಪ್ರತಿಪಕ್ಷ ಬಿಜೆಪಿ ನಿರ್ಧರಿಸಿದೆ. ಸೋಮವಾರ ಸಂಜೆ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿದೆ.

ಸಭೆಯ ಬಳಿಕ ಮಾತನಾಡಿದ ಕೋರ್ ಕಮಿಟಿ ವಕ್ತಾರ ಅರವಿಂದ ಲಿಂಬಾವಳಿ ಅವರು, 'ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಲಾಗುತ್ತದೆ. ಫೆ.20ರಂದು ಪ್ರತಿಭಟನೆ ನಡೆಸಲಾಗುತ್ತದೆ' ಎಂದು ಹೇಳಿದರು.

'ಬೆಳಗಾವಿಯಲ್ಲಿ ಅತೀ ಹೆಚ್ಚು ಕಾಂಗ್ರೆಸ್ ನಾಯಕರು ಭ್ರಷ್ಟಾಚಾರ ಮಾಡಿದ ಉದಾಹರಣೆ ಇದೆ. ಆದ್ದರಿಂದ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸಲಾಗುತ್ತದೆ. ಬೆಂಗಳೂರಿನಲ್ಲಿ ಆರ್.ಅಶೋಕ್ ನೇತೃತ್ವದಲ್ಲಿ ಹೋರಾಟ ನಡೆಯಲಿದೆ' ಎಂದರು.

Karnataka BJP protest statewide against corruption of state congress government

'ಪಕ್ಷದ ಸ್ಥಾಪನೆ ದಿನವಾದ ಏಪ್ರಿಲ್ 6ರಂದು ಬೂತ್ ಮಟ್ಟದ ಅಧ್ಯಕ್ಷರ ಮನೆ ಮೇಲೆ ಪಕ್ಷದ ಬಾವುಟ ಹಾರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಅಂಬೇಡ್ಕರ್ ಜಯಂತಿ ಪ್ರಯುಕ್ತ ಏಪ್ರಿಲ್ 14 ರಂದು ದಲಿತರೊಂದಿಗೆ ನಡೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ' ಎಂದು ಹೇಳಿದರು.

ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ.ಸದಾನಂದಗೌಡ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್, ಮಾಜಿ ಸಚಿವ ಸಿ.ಟಿ.ರವಿ ಸಭೆಯಲ್ಲಿ ಪಾಲ್ಗೊಂಡಿದ್ದರು.

English summary
Karnataka BJP protest statewide against corruption of Karnataka congress government. The state BJP decided to protest in it's core committee meeting held on Monday evening at Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X