ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲ್ಲುಬಂಡೆಯಂತೆ ಕುಳಿತಿರುವ ಎಂಎಂ ಕಲಬುರ್ಗಿ ಹತ್ಯೆ ತನಿಖೆ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಜೂನ್ 02 : ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರನ್ನು ಹತ್ಯೆ ಮಾಡಿದವರು ಯಾರು? ಎಂಬುದು ಇನ್ನೂ ನಿಗೂಢವಾಗಿದೆ. ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ತನಿಖೆ ವಿಳಂಬಕ್ಕೆ ಮಹಾರಾಷ್ಟ್ರ ಪೊಲೀಸರು ಕಾರಣ ಎಂದು ಅತ್ತ ಕೈ ತೋರಿಸುತ್ತಿದ್ದಾರೆ.

ಹಲವು ದೃಷ್ಟಿಕೋನಗಳಿಂದ ತನಿಖೆ ನಡೆಸಿದರೂ ಹತ್ಯೆ ಪ್ರಕರಣದ ತನಿಖೆ ಇನ್ನೂ ಒಂದು ಹಂತಕ್ಕೆ ಬಂದು ನಿಂತಿಲ್ಲ. ಮಹಾರಾಷ್ಟ್ರದ ಸಹಕಾರವಿಲ್ಲದಿದ್ದರೆ ತನಿಖೆ ಮುಂದುವರೆಸುವುದು ಕಷ್ಟ ಎಂದು ಕರ್ನಾಟಕದ ಸಿಐಡಿ ಅಧಿಕಾರಿಗಳು ಹೇಳಿದ್ದಾರೆ. [ಕಲಬುರ್ಗಿ ಹತ್ಯೆ ತನಿಖೆಗೆ ವಿಶೇಷ ತಂಡ ರಚನೆ]

mm kalburgi

ಎಂ.ಎಂ.ಕಲಬುರ್ಗಿ ಹತ್ಯೆ ಮತ್ತು ವಿಚಾರವಾದಿಗಳಾದ ನರೇಂದ್ರ ದಾಬೋಲ್ಕರ್, ಗೋವಿಂದ ಪನ್ಸಾರೆ ಅವರ ಹತ್ಯೆಯ ನಡುವೆ ಸಾಮ್ಯತೆ ಇದೆ ಎಂಬುದು ಸಿಐಡಿ ಪೊಲೀಸರ ವಾದ. ಈ ದೃಷ್ಟಿಕೋನದಲ್ಲಿ ತನಿಖೆಯನ್ನು ಮುಂದುವರೆಸಲು ಸಿಐಡಿ ಅಧಿಕಾರಿಗಳಿಗೆ ಸಹಕಾರ ಬೇಕಾಗಿದೆ. ['ಕಲಬುರ್ಗಿ ಹತ್ಯೆ ತನಿಖೆ ಸಿಬಿಐಗೆ ವಹಿಸಲು ಸಿದ್ಧ']

ಹತ್ಯೆ ಪ್ರಕರಣದ ತನಿಖೆಗೆ ಸಹಕಾರ ನೀಡಿ ಎಂದು ಸಿಐಡಿ ಅಧಿಕಾರಿಗಳು ಮಹಾರಾಷ್ಟ್ರ ಪೊಲೀಸರಿಗೆ ಈಗಾಗಲೇ ಮನವಿ ಮಾಡಿದ್ದಾರೆ. ಈ ಕುರಿತು ಹಲವು ಸಲ ಅವರಿಗೆ ನೆನಪನ್ನು ಮಾಡಿಕೊಟ್ಟಿದ್ದಾರೆ. ಆದರೆ, ಇದುವರೆಗೂ ಅವರು ಪ್ರತಿಕ್ರಿಯೆ ಕೊಟ್ಟಿಲ್ಲ. ಆದ್ದರಿಂದ ತನಿಖೆ ವಿಳಂಬವಾಗಿದೆ. [ಕಲಬುರ್ಗಿ ಹತ್ಯೆಯ ತನಿಖೆ ವಿಳಂಬಕ್ಕೆ ಯಾರು ಕಾರಣ?]

2015ರ ಆಗಸ್ಟ್ 30ರಂದು ಧಾರವಾಡದ ಕಲ್ಯಾಣ ನಗರದ ನಿವಾಸದಲ್ಲಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆದಿತ್ತು. ಮೊದಲು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದರು. ನಂತರ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು.

2016ರ ಮಾರ್ಚ್‌ನಲ್ಲಿ ತನಿಖೆಯ ಕುರಿತು ಪ್ರಗತಿ ಪರಿಶೀಲನೆ ನಡೆಸಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, 'ಹತ್ಯೆಯ ತನಿಖೆ ನಡೆಸಲು ಸಿಐಡಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ. ತನಿಖೆ ಮುಂದುವರೆದಿದೆ, ತಪ್ಪಿತಸ್ಥರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಹಂತಕರ ಬಗ್ಗೆ ಸುಳಿವು ಸಿಕ್ಕಿದೆ. ಅದರ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ' ಎಂದು ಹೇಳಿದ್ದರು.

English summary
The Karnataka Criminal Investigation Department has hit a road block in the probe into the murder of Dr.M.M.Kalaburgi. The probe has not moved an inch and despite probing various angles as claimed by the investigating agency, it would be safe to say that the murder continues to remain a mystery.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X