ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಜೆಟ್ 2017: 58,000 ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ

By Sachhidananda Acharya
|
Google Oneindia Kannada News

ಬೆಂಗಳೂರು, ಮಾರ್ಚ್ 15: 2017-18ರ ಬಜೆಟಿನಲ್ಲಿ ಇಂಧನ ಕ್ಷೇತ್ರಕ್ಕೂ ಹಲವು ಕೊಡುಗೆಗಳನ್ನು ಸಿದ್ದರಾಮಯ್ಯ ಘೋಷಿಸಿದ್ದಾರೆ.[21 ಜಿಲ್ಲೆಗಳಲ್ಲಿ 43 ಹೊಸ ತಾಲೂಕುಗಳ ರಚನೆ]

ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ 58,145 ಕೊಳವೆ ಬಾವಿಗಳಿಗೆ ಮುಂದಿನ ಒಂದು ವರ್ಷದಲ್ಲಿ ವಿದ್ಯುತ್ ಸಂಪರ್ಕ ನೀಡಲಾಗುವುದು. ಅಲ್ಲದೆ 37,251 ಕುಡಿಯುವ ನೀರಿನ ಘಟಕಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.[ಬಜೆಟ್ 2017: ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ 2000 ಪಿಂಚಣಿ]

Karnataka Budget 2017-18: Power connection for 58,000 bore-wells

ಈಗಾಗಲೆ ತುಮಕೂರಿನ ಪಾವಗಡದಲ್ಲಿ ಸೌರ ವಿದ್ಯುತ್ ಪಾರ್ಕ್ ನಿರ್ಮಾಣವಾಗುತ್ತಿದ್ದು ಇದಕ್ಕಾಗಿ 2,000 ಕೋಟಿಗಳನ್ನು ಬಜೆಟಿನಲ್ಲಿ ಎತ್ತಿಡಲಾಗಿದೆ. ಒಟ್ಟಾರೆ 2017-18ನೇ ವರ್ಷದಲ್ಲಿ 3,975 ಮೆಗಾ ವ್ಯಾಟ್ ಉತ್ಪಾದನೆಯ ಗುರಿಯನ್ನು ಕರ್ನಾಟಕ ಹಾಕಿಕೊಂಡಿದೆ.[ಬಜೆಟ್ 2017: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ. 100ರಷ್ಟು ಮೀಸಲಾತಿ]

ಭಾಗ್ಯಜ್ಯೋತಿ ಯೋಜನೆಯಡಿಯಲ್ಲಿ ಉಚಿತ ವಿದ್ಯುತ್ ಯೂನಿಟ್ ಗಳನ್ನು 18 ರಿಂದ 40 ಯೂನಿಟಿಗೆ ಹೆಚ್ಚಳ ಮಾಡಲಾಗಿದೆ. ಅಷ್ಟೇ ಅಲ್ಲದೆ ಗ್ರಾಮ ಪಂಚಾಯತ್ ಗಳ ವಿದ್ಯುತ್ ಬಿಲ್ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ.[LIVE: ಬಜೆಟ್ ಪ್ರತಿಯೊಂದಿಗೆ ವಿಧಾನಸಭೆಗೆ ಬಂದ ಸಿದ್ದರಾಮಯ್ಯ]

ಪ್ರಸಕ್ತ ಸಾಲಿನಲ್ಲಿ ಬಜೆಟಿನಲ್ಲಿ ಇಂಧನ ಇಲಾಖೆಗೆ ಒಟ್ಟು 14,094 ಕೋಟಿ ರೂಪಾಯಿಗಳನ್ನು ಎತ್ತಿಡಲಾಗಿದೆ.[ಬಜೆಟ್ 2017: ನಮ್ಮ ಬೆಂಗಳೂರಿಗೆ ಸಿಕ್ಕಿದ್ದೇನು?]

English summary
Karnataka Chief Minister and Finance Minister Siddaramaiah has tabled Karnataka Budget 2017-18 on Wednesday, March 15, 2017. Here are the highlights Power sector in the budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X