ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರ್ಗಿ ಹತ್ಯೆ ಕೇಸ್, ಸಿಬಿಐಗೆ ವಹಿಸಲು ನಿರ್ಧಾರ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಆ.31 : ರಾಜ್ಯಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ವಹಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಿಬಿಐ ತನಿಖೆಗೆ ಒಪ್ಪಿಕೊಳ್ಳುವ ತನಕ ಸಿಐಡಿ ತನಿಖೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. 'ಪ್ರಕರಣದ ತನಿಖೆ ನಡೆಸುವಂತೆ ಸರ್ಕಾರ ಸಿಬಿಐಗೆ ಪತ್ರ ಬರೆಯಲಿದೆ' ಎಂದು ಸಚಿವರು ತಿಳಿಸಿದರು. [ಕಲಬುರ್ಗಿ ಹತ್ಯೆ, ಟ್ವಿಟ್ ಮಾಡಿದ ಯುವಕನ ಬಂಧನ]

cbi

'ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರದ ಕುರಿತು ವಿವರವಾದ ಚರ್ಚೆ ನಡೆಸಲಾಗಿದ್ದು, ಅಂತಿಮವಾಗಿ ಎಲ್ಲಾ ಸಚಿವರ ಅಭಿಪ್ರಾಯ ಸಂಗ್ರಹಣೆ ಮಾಡಿದ ನಂತರ ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕರ್ನಾಟಕ ಸರ್ಕಾರ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ಸಿಬಿಐಗೆ ಪತ್ರ ಬರೆದು ಮನವಿ ಮಾಡಲಿದೆ' ಎಂದು ಜಯಚಂದ್ರ ವಿವರಣೆ ನೀಡಿದರು. [ಕಲಬುರ್ಗಿ ಹತ್ಯೆ, ಕಂಬನಿ ಮಿಡಿದ ಗಣ್ಯರು]

'ಸಿಬಿಐ ತನಿಖೆಗೆ ಒಪ್ಪಿಕೊಳ್ಳುವ ತನಕ, ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸಲಿದೆ. ಈಗಾಗಲೇ ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ' ಎಂದು ಜಯಚಂದ್ರ ಅವರು ಸ್ಪಷ್ಟಪಡಿಸಿದರು. ಆ.30ರ ಭಾನುವಾರ ಬೆಳಗ್ಗೆ ಧಾರವಾಡದಲ್ಲಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆದಿತ್ತು.

ವಿದ್ಯಾರ್ಥಿಗಳಂತೆ ಬಂದ ಇಬ್ಬರು ಯುವಕರು ಎಂ.ಎಂ.ಕಲಬುರ್ಗಿ ಅವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ಹಣೆ ಮತ್ತು ಎದೆಗೆ ಗುಂಡು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಲಬುರ್ಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದರು. ಸೋಮವಾರ ಧಾರವಾಡದಲ್ಲಿ ಅವರ ಅಂತ್ಯಕ್ರಿಯೆ ನಡೆದಿದೆ.

English summary
Karnataka Cabinet decides to hand over Prof M M Kalburgi murder case to CBI. Until CBI agrees to take over the case, CID shall investigate the case. Minister for Law and Parliamentary affairs TB Jayachandra told media persons in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X