ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾರಿಗೆ ಸಂಸ್ಥೆ ನೌಕರರಿಗೆ ಶೇ 8ರಷ್ಟು ವೇತನ ಹೆಚ್ಚಳ

|
Google Oneindia Kannada News

ಬೆಂಗಳೂರು, ಜೂನ್ 30 : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ನೌಕರರಿಗೆ ಶೇ 8ರಷ್ಟು ವೇತನ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. 2016ರ ಜನವರಿ 1ರಿಂದಲೇ ಅನ್ವಯವಾಗುವಂತೆ ವೇತನ ಹೆಚ್ಚಳವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ಸಂಜೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ವಿವರಗಳನ್ನು ನೀಡಿದರು. 'ಎಲ್ಲಾ ಸಾರಿಗೆ ನಿಗಮಗಳ ನೌಕರರಿಗೆ ವೇತನ ಹೆಚ್ಚಳ ಮಾಡಲು ಅನುಮತಿ ನೀಡಲಾಗಿದೆ. ನಿಗಮದ 1,15,694 ನೌಕರರಿಗೆ ಶೇ 8ರಷ್ಟು ವೇತನ ಹೆಚ್ಚಳ ವಾಗಲಿದೆ' ಎಂದರು. [ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದಿಂದ ಕೊಡುಗೆ]

tb jayachandra

ಬಿಎಂಟಿಸಿ, ಕೆಎಸ್ಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಎನ್‌ಇಕೆಆರ್‌ಟಿಸಿ ನೌಕರರಿಗೆ ಈ ವೇತನ ಹೆಚ್ಚಳವಾಗಲಿದೆ. 4 ವರ್ಷಗಳಿಂದ ನೌಕರರಿಗೆ ವೇತನ ಹೆಚ್ಚಳ ಮಾಡಿರಲಿಲ್ಲ. ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನೌಕರರು ಪ್ರತಿಭಟನೆಯನ್ನು ನಡೆಸಿದ್ದರು. [ವಿಶೇಷ ಚೇತನರು ಪಡೆದಿದ್ದ ಸಾಲ ಮನ್ನಾ]

ಸಂಪುಟ ಸಭೆಯ ಇತರ ನಿರ್ಣಯಗಳು [ಶಾಲಾ ಮಕ್ಕಳಿಗೆ 'ಶೂ ಭಾಗ್ಯ', ಸಂಪುಟದ ಒಪ್ಪಿಗೆ]

* ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗೆ 2257 ಚಾಲಕರನ್ನು ನೇಮಕ ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. 2 ವರ್ಷಗಳ ಹಿಂದೆ ಅರ್ಹತಾ ಪರೀಕ್ಷೆ ನಡೆಸಲಾಗಿತ್ತು. ಆದರೆ, ನೇಮಕಾತಿ ಆದೇಶ ನೀಡಿರಲಿಲ್ಲ. ಶೀಘ್ರದಲ್ಲೇ ಅರ್ಹರಿಗೆ ನೇಮಕಾತಿ ಆದೇಶ ನೀಡಲು ಸಭೆ ಒಪ್ಪಿಗೆ ನೀಡಿದೆ.

* ಬಿಎಂಟಿಸಿಗೆ 1 ಸಾವಿರ ನೂತನ ಬಸ್ಸುಗಳನ್ನು ಖರೀದಿ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮೆಟ್ರೋ ಸಂಪರ್ಕ ಸೇವೆ ಮತ್ತು ಇತರ ಮಾರ್ಗಗಳಲ್ಲಿ ಬಸ್ ಸಂಚಾರ ನಡೆಸಲು ಬಿಎಂಟಿಸಿ ಬಸ್ ಖರೀದಿ ಮಾಡುತ್ತಿದೆ.

* ಪದ್ಮಶ್ರೀ ಪ್ರಶಸ್ತಿಗೆ ಹೆಸರು ಶಿಫಾರಸು ಮಾಡಲು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲು ಸಭೆ ಒಪ್ಪಿಗೆ ನೀಡಿದೆ.

* ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ರಾಜ್ಯ ಕುರುಬರ ಸಂಘಕ್ಕೆ 6.25 ಎಕರೆ ಭೂಮಿ ನೀಡಲು ಒಪ್ಪಿಗೆ ಸಿಕ್ಕಿದೆ

* ಕೊಪ್ಪಳದ ಯಲಬುರ್ಗಾ ಬಳಿಯ ತಳಕಲ್‌ನಲ್ಲಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣಕ್ಕೆ ಹಣಕಾಸು ಇಲಾಖೆಯಿಂದ 50 ಕೋಟಿ ನೀಡಲು ಒಪ್ಪಿಗೆ ನೀಡಲಾಗಿದೆ.

English summary
In a cabinet meeting Karnataka government approved a proposal to give an 8 percent salary hike to employees of road transport corporations with effect from January 1, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X