ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 30ರಂದು ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ

2017ರ ಸಿಇಟಿ ಫಲಿತಾಂಶವನ್ನು ಮೇ30(ಮಂಗಳವಾರ) ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಅಧಿಕಾರಿಗಳು ಖಚಿತಪಡಿಸಿದ್ದಾರೆ.

By Mahesh
|
Google Oneindia Kannada News

ಬೆಂಗಳೂರು, ಮೇ 29: 2017ರ ಸಿಇಟಿ ಫಲಿತಾಂಶವು ಮಂಗಳವಾರ(ಮೇ 30) ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. ನಿಗದಿತ ವೇಳಾಪಟ್ಟಿಯಂತೆ ಜೂ.1ರಿಂದ ದಾಖಲೆಗಳ ಪರಿಶೀಲನೆ ಆರಂಭವಾಗಲಿದೆ.

ಮೇ 27ರಂದು ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಳಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿತ್ತು. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) ಹಾಗೂ ಇಂಡಿಯನ್ ಸ್ಕೂಲ್ ಸರ್ಟಿಫಿಕೆಟ್ ಎಕ್ಸಾಮಿನೇಷಟ್ (ಐಸಿಎಸ್‍ಇ)ಮಾನ್ಯತೆ ಹೊಂದಿರುವ ಕಾಲೇಜುಗಳಲ್ಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ತಡವಾಗಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವೂ ವಿಳಂಬವಾಗಲಿದೆ.[ಸಿಇಟಿ ಫಲಿತಾಂಶ ವಿಳಂಬ, ಕಾಮೆಡ್ ಕೆಗೆ ಲಾಭ]

Karnataka CET results 2017 on May 30

ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ 2017ನೇ ಸಾಲಿನ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಮೇ 2 ಹಾಗೂ 3ರಂದು ನಡೆಸಲಾಗಿತ್ತು. ಬೆಂಗಳೂರಿನ 82 ಸೇರಿ ರಾಜ್ಯಾದ್ಯಾಂತ 404 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 94,415 ವಿದ್ಯಾರ್ಥಿ ಹಾಗೂ 90,996 ವಿದ್ಯಾರ್ಥಿನಿಯರು ಸೇರಿದಂತೆ 1,85,411 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಸಿಇಟಿ ಫಲಿತಾಂಶ ಚೆಕ್ ಮಾಡುವುದು ಹೇಗೆ?:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ
"ಸಿಇಟಿ 2017" ಬಟನ್ ಮೇಲೆ ಕ್ಲಿಕ್ ಮಾಡಿ
ನಿಮ್ಮ ನೋಂದಣಿ ಸಂಖ್ಯೆ ನಮೂದಿಸಿ ರಿಸಲ್ಟ್ ಪಡೆಯಿರಿ

ಸರ್ಕಾರದಿಂದ ಉಚಿತ ಶಿಕ್ಷಣ : 'ಸಿಇಟಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಐದು ಜನರಿಗೆ ಅವರ ಕೋರ್ಸ್ ಮುಗಿಯುವವರೆಗೆ ಸರ್ಕಾರದಿಂದ ಉಚಿತ ಶಿಕ್ಷಣ ನೀಡಲಾಗುತ್ತದೆ' ಎಂದು ಕರ್ನಾಟಕ ಸರ್ಕಾರ 2016ರಲ್ಲೇ ಘೋಷಿಸಿದೆ.

English summary
Karnataka Examination Authority set to announce Karnataka CET results 2017 on May 30. As per KEA's schedule, document verification will begin from June 1.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X