ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿವರಾಗಿ ವಿಜಯನಗರದ ಶಾಸಕ ಎಂ ಕೃಷ್ಣಪ್ಪ ಪ್ರಮಾಣ

By Madhusoodhan
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್, 05: ನಿರೀಕ್ಷೆಯಂತೆ ಗಣೇಶ ಹಬ್ಬದ ದಿನದಂದು ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಬೆಂಗಳೂರಿನ ವಿಜಯನಗರ ಕ್ಷೇತ್ರದ ಶಾಸಕ ಎಂ ಕೃಷ್ಣಪ್ಪ ಅವರು ನೂತನ ಸಚಿವರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸೋಮವಾರ ಸಂಜೆ 4.30ಕ್ಕೆ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಕೃಷ್ಣಪ್ಪ ಪ್ರಮಾಣ ವಚನ ತೆಗೆದುಕೊಂಡರು. ಎಂ. ಕೃಷ್ಣಪ್ಪ ಅವರನ್ನು ಒಕ್ಕಲಿಗ ಕೋಟಾದಡಿ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದ್ದು ವಸತಿ ಖಾತೆಯ ಜವಾಬ್ದಾರಿ ವಹಿಸುವ ಸಾಧ್ಯತೆ ಹೆಚ್ಚಿದೆ.[ಎಂ ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದು ಹೇಗೆ?]

karnataka

ಹೊಸ ಜವಾಬ್ದಾರಿ ಸಂತಸ ತಂದಿದೆ. ಪಕ್ಷ ಮತ್ತು ಮುಖ್ಯಮಂತ್ರಿ ತಮಗೆ ನೀಡುರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ ಎಂದು ಎಂ ಕೃಷ್ಣಪ್ಪ ತಿಳಿಸಿದ್ದಾರೆ.[ಹೊಸ ಸಚಿವರಿಗೆ ಜವಾಬ್ದಾರಿ: ಯಾರಿಗೆ ಯಾವ ಖಾತೆ?]

ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ ಎಂದು ಜೂನ್ ತಿಂಗಳಲ್ಲಿ ಎಂ ಕೃಷ್ಣಪ್ಪ ಅವರ ಬೆಂಬಲಿಗರಿಂದ ಭಾರಿ ಪ್ರತಿಭಟನೆ ಕಂಡು ಬಂದಿತ್ತು. ಮೆಟ್ರೋ ನಿಲ್ದಾಣಕ್ಕೆ ನುಗ್ಗಿ ಗಲಾಟೆ ನಡೆಸಿದ್ದರು.. ರಸ್ತೆಗಳಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ, ಕೃಷ್ಣಪ್ಪ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿದ್ದರು.

English summary
As a gift to the second largest community of Karnataka - the Vokkaligas - on the occasion of Ganesh Chaturthi, Karnataka Chief Minister Siddaramaiah induct real Congress legislator M Krishnappa into the Karnataka Cabinet on 5th September 2016. He may land himself the housing portfolio which was held by actor-politician Ambareesh before he was dropped from the ministry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X