ಸಿಇಟಿ ಕಾಯ್ದೆ ಜಾರಿಗೆ ಬಂದರೆ, ಕಾಮೆಡ್-ಕೆ ರದ್ದು?
ಬೆಂಗಳೂರು. 20 : ಕರ್ನಾಟಕ ಸರ್ಕಾರ ವೃತ್ತಿ ಶಿಕ್ಷಣ ಸಂಸ್ಥೆಗಳ ಕಾಯ್ದೆಗೆ ಕೆಲವು ತಿದ್ದುಪಡಿಗಳನ್ನು ತಂದು 2015-16ನೇ ಸಾಲಿನಿಂದ ಜಾರಿಗೊಳಿಸಲು ಸಿದ್ಧತೆ ಆರಂಭಿಸಿದೆ. ಕರ್ನಾಟಕ ವೃತ್ತಿಪರ ಶಿಕ್ಷಣ ಕಾಯ್ದೆ 2006ನ್ನು ಜಾರಿಗೊಳಿಸಬೇಕಾದರೆ ಕಾಮೆಡ್-ಕೆ ಪರೀಕ್ಷೆಯನ್ನು ರದ್ದುಗೊಳಿಸಿ ಎಂದು ವಿದ್ಯಾರ್ಥಿ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿವೆ.
ಡಿ.9ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ವೃತ್ತಿಪರ ಶಿಕ್ಷಣ ಕಾಯ್ದೆ 2006ರ ತಿದ್ದುಪಡಿ ಕಾಯ್ದೆಯನ್ನು ಮಂಡಿಸಿ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. [ಸಿಇಟಿ ಕಾಯ್ದೆ ಯಾರಿಗೆ ಲಾಭ? ಯಾರಿಗೆ ನಷ್ಟ?]

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮತ್ತು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು, ವಿವಿಧ ಕಾಲೇಜು ವಿದ್ಯಾರ್ಥಿಗಳು, ಪೋಷಕರೊಂದಿಗೆ ಸಭೆ ನಡೆಸಿ ಈ ಬಗ್ಗೆ ಅವರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಿದ್ದಾರೆ. [ಸಿಇಟಿ ಗೊಂದಲಕ್ಕೆ ತೆರೆಎಳೆದ ಸಿಎಂ ಸಿದ್ದರಾಮಯ್ಯ]
ಕಳೆದ ವರ್ಷ ಕರ್ನಾಟಕ ವೃತ್ತಿಪರ ಶಿಕ್ಷಣ ಕಾಯ್ದೆ 2006ನ್ನು ಜಾರಿಗೆ ತರಲು ಸರ್ಕಾರ ಮುಂದಾಗಿತ್ತು. ಆಗ ವಿದ್ಯಾರ್ಥಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರಿಂದ ತನ್ನ ನಿರ್ಧಾರವನ್ನು ಸರ್ಕಾರ ವಾಪಸ್ ಪಡೆದಿತ್ತು. ಸದ್ಯ, ಕಾಯ್ದೆಗೆ ಕೆಲವೊಂದು ತಿದ್ದುಪಡಿ ತಂದು ಜಾರಿಗೊಳಿಸಲು ಮುಂದಾಗಿದೆ.
2006ರ ಕಾಯ್ದೆಯನ್ನು ಜಾರಿಗೆ ತರುವುದಾದದರೆ ಕರ್ನಾಟಕ ಖಾಸಗಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ)ಯನ್ನು ರದ್ದುಮಾಡಿ ಎಂದು ವಿದ್ಯಾರ್ಥಿ ಸಂಘಟನೆಗಳ ಪ್ರಮುಖರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಾಮೆಡ್ ಕೆ ಪರೀಕ್ಷೆ ಮೂಲಕ ಭರ್ತಿ ಮಾಡುವ ವೃತ್ತಿಪರ ಸೀಟುಗಳನ್ನೂ ಸಿಇಟಿ ಮೂಲಕವೇ ಭರ್ತಿ ಮಾಡಿ ಎಂದು ಹೇಳಿರುವ ವಿದ್ಯಾರ್ಥಿಗಳು ಕಾಯ್ದೆಗೆ ತಿದ್ದುಪಡಿ ತಂದರೂ ಖಾಸಗಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳು ಕಡಿಮೆಯಾಗಬಾರದು ಎಂದು ಒತ್ತಾಯಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು,ಈ ಬಗ್ಗೆ ಖಾಸಗಿ ಕಾಲೇಜುಗಳೊಂದಿಗೆ ಮಾತುಕತೆ ನಡೆಸಿ ನಂತರ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಕರ್ನಾಟಕ ವೃತ್ತಿಪರ ಶಿಕ್ಷಣ ಕಾಯ್ದೆ 2006ನ್ನು ಜಾರಿಗೆ ತರುವ ಪ್ರಯತ್ನವಂತೂ ನಡೆಯುತ್ತಿದೆ.
-
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications