ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆದಿಚುಂಚನಗಿರಿ ಏಳಿಗೆ ರೂವಾರಿಯೇ ಬಾಲಗಂಗಾಧರರು: ವಜುಭಾಯಿ

By Vanitha
|
Google Oneindia Kannada News

ಮಂಡ್ಯ,ಜನವರಿ,18: ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರು ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಅಧ್ಯಾತ್ಮಿಕವಾಗಿ ಸಮಾಜದ ಅಭಿವೃದ್ಧಿಗೆ ದುಡಿದು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು ಎಂದು ಇಂದು ನಡೆದ 71 ಜಯತ್ಯುಂತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಹೇಳಿದರು.

ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಡಾ. ಬಾಲಗಂಧರನಾಥ ಸ್ವಾಮೀಜಿ ಅವರ 71ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 'ಬಾಲಗಂಗಾಧರನಾಥ ಸ್ವಾಮೀಜಿ ಅವರು ಶೈಕ್ಷಣಿಕ ಕ್ಷೇತ್ರದಲ್ಲೂ ಅಪಾರ ಸಾಧನೆ ಮಾಡಿ. ಆದಿಚುಂಚನಗಿರಿ ಸಂಸ್ಥೆಯನ್ನು ಉತ್ತುಂಗಕ್ಕೆ ಕೊಂಡೊಯ್ದು ಇತರರಿಗೆ ದಾರಿ ದೀಪವಾಗಿದ್ದಾರೆ' ಎಂದು ಶ್ಲಾಘನೆ ಮಾತನಾಡಿದರು.[ಕೆಆರ್.ಪೇಟೆ ಸರ್ಕಾರಿ ಶಾಲಾ ಮಕ್ಕಳಿಗೆ ಆಕಾಶವೇ ಸೂರು!]

Mandya

ಸಾಕಷ್ಟು ಬಡಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ನೀಡಿದ್ದು, 25 ಸಾವಿರ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿದ್ದಾರೆ. ಎಲ್ಲರ ಬಳಿ ಬೇಕಾದಷ್ಟು ಹಣವಿರಬಹುದು. ಆದರೆ ಸಾಂಸ್ಕೃತಿಕ ಮನಸ್ಸು ಇಲ್ಲದಿದ್ದರೆ ಅವೆಲ್ಲವೂ ನಿರರ್ಥಕ. ಬಾಲಗಂಗಾಧರನಾಥ ಸ್ವಾಮೀಜಿ ಅವರು ಸ್ವಾಮಿ ವಿವೇಕಾನಂದ ಹಾಗೂ ರಾಮಕೃಷ್ಣ ಪರಮಹಂಸರಂತೆ ಸಾಮಾಜಿಕವಾಗಿ ಕಾರ್ಯಶೀಲರಾಗಿದ್ದರು ಎಂದರು.[ಶಾಲಾ ಮಕ್ಕಳಿಗೆ 'ಶೂ ಭಾಗ್ಯ', ಸಂಪುಟದ ಒಪ್ಪಿಗೆ]

ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯವಹಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್,ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಆದಿಚುಂಚನಗಿರಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಉಪಸ್ಥಿತರಿದ್ದರು.

English summary
Karnataka governor Vajubhai Rudabhai Vala inagurated by Balagangadharanatha programme on Monday, Nagamangal Taluk,in Mandya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X