17 ಸ್ಥಾನ ಪಡೆದಿರುವ ಜೆಡಿಎಸ್ ಹೇಗೆ ಅಧಿಕಾರಕ್ಕೆ ಬರುತ್ತಾರೆ: ಸಿ.ಎಂ ಸಿದ್ದರಾಮಯ್ಯ
17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ 140 ಸ್ಥಾನ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ನಮ್ಮಲ್ಲಿ ಕೌಶಲ್ಯವಿರುವ ಮಾನವ ಸಂಪನ್ಮೂಲದ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ ಪಡೆವರಿಗೆ ನೂರರಷ್ಟು ಕೆಲಸ ದೊರೆಯುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ತಿಳಿಸಿದ್ದಾರೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ಕೊಟ್ಟಿರುವ ಭಾಷಣವನ್ನು ಅವರು ಓದಲೇಬೇಕು. ನಾವು ಬರೆದುಕೊಟ್ಟಿರುವುದನ್ನು ಅವರು ಬದಲಾಯಿಸುವ ಸಾಧ್ಯತೆ ಇರುತ್ತದೆ.

ಗಣರಾಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಪತ್ರ ವ್ಯವಹಾರವೆಲ್ಲಾ ಆಗಿದ್ದರೂ, ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ ಎನ್ನುವುದು ದುರದೃಷ್ಟಕರ. ಕಾನೂನಿನ ಪ್ರಕಾರ ಪ್ರಜ್ವಲ್ ರೇವಣ್ಣ ಅವರ ಬಂಧನವಾಗಿದ್ದು, ಸರ್ಕಾರ ಅದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಇದೊಂದೇ ಪ್ರಕರಣವಲ್ಲ. ಯಾವುದೇ ಪ್ರಕರಣದಲ್ಲಿಯೂ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಅಧಿಕಾರಿಗಳಿಗೆ ಸರ್ಕಾರ ಬಹುಮಾನ ಕೊಟ್ಟಿಲ್ಲ. ಅದೆಲ್ಲಾ ಸುಳ್ಳು.
ನಮಗೂ ಸಮಯ ಬರುತ್ತದೆ ಎಂಬ ಹೆಚ್. ಡಿ.ದೇವೇಗೌಡರ ಮಾತಿನ ಅರ್ಥ ನಮಗೆ ಗೊತ್ತಿಲ್ಲ. 17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ 140 ಸ್ಥಾನ ಗಳಿಸಿದೆ. 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು ಎನ್ನುವ ಭರವಸೆ ನಮಗಿದೆ. ಜೆಡಿಎಸ್ ಮತ್ತು ಬಿಜೆಪಿಯವರು ಮೈತ್ರಿ ಮಾಡಿಕೊಂಡರು ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದೇನು
ದಾವೋಸ್‌ನ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಚರ್ಚೆಯಾದ ಹೂಡಿಕೆ, ವ್ಯವಹಾರ, ಆಡಳಿತ ನೀತಿ ಸೇರಿದಂತೆ ಹಲವು ವಿಷಯಗಳ ಕುರಿತು, ಬಿಡಿಎ ಅಧ್ಯಕ್ಷರಾದ ಎನ್.ಎ. ಹ್ಯಾರಿಸ್ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.
ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಭಾಗವಹಿಸಿದ್ದು ನನಗೆ ಹೊಸ ಹಾಗೂ ಮಹತ್ವದ ಅನುಭವವಾಗಿತ್ತು. ದೇಶ-ರಾಜ್ಯಗಳನ್ನು ಪ್ರತಿನಿಧಿಸುವ ಈ ವೇದಿಕೆಯಲ್ಲಿ ಕರ್ನಾಟಕಕ್ಕೂ ಸ್ಥಾನ ದೊರೆತಿತ್ತು. ಭಾರತದಿಂದ 10 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 65ಕ್ಕೂ ಹೆಚ್ಚು ದೇಶಗಳ ಮುಖ್ಯಸ್ಥರು, ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಸೇರಿದಂತೆ ಅನೇಕ ಉದ್ಯಮಿಗಳು ಭಾಗವಹಿಸಿದ್ದರು.
ಸಮ್ಮೇಳನದಲ್ಲಿ 100ಕ್ಕೂ ಹೆಚ್ಚು ಸಭೆಗಳು, ಚರ್ಚೆಗಳು ನಡೆದಿದ್ದು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ನಾಯಕರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿತು. ಭಾರತವನ್ನು, ವಿಶೇಷವಾಗಿ ಬೆಂಗಳೂರು ಮುಖಾಂತರ, ಜಗತ್ತು ನೋಡುತ್ತಿರುವುದು ಸ್ಪಷ್ಟವಾಯಿತು. ನಗರೀಕರಣ, ಸಂಚಾರ ವ್ಯವಸ್ಥೆ, 2 ಮತ್ತು 3 ಟೈರ್ ನಗರಗಳ ಅಭಿವೃದ್ಧಿ ಕುರಿತು ಸಲಹೆಗಳು ಬಂದವು. ಮುಂದಿನ 25 ವರ್ಷಗಳಿಗೆ ತಕ್ಕಂತೆ ರಿಂಗ್ ರೋಡ್, ಬಿಸಿನೆಸ್ ಕಾರಿಡಾರ್ ಯೋಜನೆಗಳನ್ನು ಈಗಿನಿಂದಲೇ ರೂಪಿಸುವ ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಸುಮಾರು 11 ಲಕ್ಷ ಕೋಟಿ ರೂ. ಹೂಡಿಕೆಗೆ ಹೂಡಿಕೆದಾರರು ಸಿದ್ಧರಾಗಿದ್ದಾರೆ. ಈ ಎಲ್ಲಾ ಪ್ರಯತ್ನಗಳ ಮೂಲಕ ರಾಜ್ಯಕ್ಕೆ ಹೊಸ ರೂಪ ನೀಡುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
-
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications