ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಾಯುಕ್ತದ ಭ್ರಷ್ಟಾಚಾರದಲ್ಲಿ ಅಕ್ರಮ ಹಣ ವರ್ಗಾವಣೆ?

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಅಕ್ಟೋಬರ್ 03 : ಕರ್ನಾಟಕ ಲೋಕಾಯುಕ್ತದಲ್ಲಿನ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ಜಾರಿ ನಿರ್ದೇಶನಾಲಯ ಕೈ ಜೋಡಿಸಿದೆ. ಈ ಹಗರಣದಲ್ಲಿ ಹವಾಲಾ ಹಣ ಸಾಗಣೆ ಬಗ್ಗೆ ಅದು ತನಿಖೆ ಕೈಗೊಳ್ಳಲಿದೆ.

ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸುತ್ತಿರುವ ಎಸ್‌ಐಟಿ ಲೋಕಾಯುಕ್ತ ನ್ಯಾ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಸುಮಾರು 1 ಕೋಟಿ ರೂ. ಮೊತ್ತದ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿದೆ. ಇದು ಹವಾಲಾ ಹಣವೇ? ಎಂದು ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿದೆ. [ಲೋಕಾಯುಕ್ತದ ಭ್ರಷ್ಟಾಚಾರ, ಐವರ ವಿರುದ್ಧ ಚಾರ್ಜ್ ಶೀಟ್]

money

ಪ್ರಾಥಮಿಕವಾದ ಮಾಹಿತಿಗಳ ಅನ್ವಯ ಲೋಕಾಯುಕ್ತದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಜಾರಿ ನಿರ್ದೇಶನಾಲಯ ತೀರ್ಮಾನಿದೆ. ಆದ್ದರಿಂದ, 'ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ-2002'ರ ಅನ್ವಯ ಈ ಕುರಿತು ತನಿಖೆ ನಡೆಯಲಿದೆ. [ಲೋಕಾಯುಕ್ತದ ಭ್ರಷ್ಟಾಚಾರ 4 ಪ್ರಮುಖ ಬೆಳವಣಿಗೆಗಳು]

2014 ರಿಂದ 2015ರ ತನಕ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಅವರ ಪುತ್ರ ಅಶ್ವಿನ್ ರಾವ್ ಅವರು 1 ಕೋಟಿ ರೂ.ಗಳ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜಾರಿ ನಿರ್ದೇಶನಾಲಯ ಅಶ್ವಿನ್ ರಾವ್ ಅವರಿಗೆ ಹಣವನ್ನು ನೀಡಿದ ಡಾ.ವಿಲ್ಸನ್ ಅವರನ್ನು ವಿಚಾರಣೆ ನಡೆಸಲು ತೀರ್ಮಾನಿಸಿದೆ.

ಅಶ್ವಿನ್ ರಾವ್ ತನ್ನ ಸಹಚರರಿಗೆ ಹಣವನ್ನು ವರ್ಗಾವಣೆ ಮಾಡಿದ್ದು, ಈ ಕುರಿತು ಜಾರಿ ನಿರ್ದೇಶನಾಲಯದ ತನಿಖೆ ನಡೆಯಲಿದೆ. ಲೋಕಾಯುಕ್ತದಲ್ಲಿನ ಭ್ರಷ್ಟಾಚಾರದ ತನಿಖೆ ನಡೆಸುತ್ತಿರುವ ಎಸ್‌ಐಟಿ ಈಗಾಗಲೇ 5 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ.

English summary
The Enforcement Directorate will probe to find out if there were any instances of money laundering in the Karnataka Lokayukta case. The probe which is being handled by the SIT had found that money had allegedly been laundered and hence the help of the ED was sought.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X