ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಾಯುಕ್ತ ಪದಚ್ಯುತಿಗೆ ಸೆಪ್ಟೆಂಬರ್‌ನಲ್ಲಿ ವಿಶೇಷ ಅಧಿವೇಶನ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಆಗಸ್ಟ್ 18 : ಕರ್ನಾಟಕದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ -2015ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಸೆಪ್ಟೆಂಬರ್‌ನಲ್ಲಿ ವಿಶೇಷ ವಿಧಾನ ಮಂಡಲ ಅಧಿವೇಶನ ನಡೆಸಿ, ಲೋಕಾಯುಕ್ತರನ್ನು ಪದಚ್ಯತಿಗೊಳಿಸುವ ನಿರ್ಣಯವನ್ನು ಮಂಡಿಸುವ ಸಾಧ್ಯತೆ ಇದೆ.

ಲೋಕಾಯಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದ ನಂತರ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರರಾವ್ ಅವರ ರಾಜೀನಾಮೆಗೆ ಒತ್ತಾಯ ಕೇಳಿಬರುತ್ತಿದೆ. ಪ್ರತಿಪಕ್ಷಗಳು ಲೋಕಾಯುಕ್ತರು ರಾಜೀನಾಮೆ ನೀಡಬೇಕು ಎಂದು ಪಟ್ಟುಹಿಡಿದಿವೆ. [ಲೋಕಾಯುಕ್ತರ ಪದಚ್ಯುತಿ ಹೇಗೆ?]

lokayukta

ರಾಜ್ಯ ಸರ್ಕಾರ ಲೋಕಾಯುಕ್ತ ಪದಚ್ಯುತಿಗೆ ಅನುಕೂಲವಾಗುವಂತೆ ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ) ವಿಧೇಯಕ -2015ವನ್ನು ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಮಂಡಿಸಿತ್ತು. ಉಭಯ ಸದನಗಳಲ್ಲಿ ಅಂಗೀಕಾರವಾದ ಈ ನಿರ್ಣಯಕ್ಕೆ ಸೋಮವಾರ ರಾಜ್ಯಪಾಲ ವಜುಭಾಯಿ ವಾಲಾ ಅಂಕಿತ ಹಾಕಿದ್ದಾರೆ. [ಲೋಕಾಯುಕ್ತರ ಪದಚ್ಯುತಿ, ಕಾನೂನು ಇಲಾಖೆ ಹೇಳುವುದೇನು?]

ಚುನಾವಣೆ ನಂತರ ವಿಶೇಷ ಅಧಿವೇಶನ : ಆ.22ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ಆ.25ರ ಮಂಗಳವಾರ ಫಲಿತಾಂಶ ಪ್ರಕಟಗೊಳ್ಳಲಿದೆ. ಸೆಪ್ಟೆಂಬರ್‌ ಮೊದಲ ವಾರದಲ್ಲಿ ವಿಶೇಷ ವಿಧಾನಸಭೆ ಅಧಿವೇಶನ ನಡೆಸಿ ಲೋಕಾಯುಕ್ತರನ್ನು ಪದ್ಯುತಿಗೊಳಿಸುವ ನಿರ್ಣಯವನ್ನು ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ವಿಧೇಯಕದ ಅನ್ವಯ ವಿಧಾನಮಂಡಲದ ಉಭಯ ಸದನಗಳ ಮೂರನೇ ಎರಡರಷ್ಟು ಸದಸ್ಯರ ಅನುಮೋದನೆಯೊಂದಿಗೆ ಲೋಕಾಯುಕ್ತರನ್ನು ಪದಚ್ಯುತಿಗೊಳಿಸಬಹುದಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಲೋಕಾಯುಕ್ತರ ಪದಚ್ಯುತಿಗೆ ಒತ್ತಾಯಿಸುತ್ತಿದ್ದು, ನಿರ್ಣಯ ಮಂಡಿಸಿದರೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ.

English summary
There is more trouble ahead for Justice Y Bhaskar Rao, the Lokayukta of Karnataka. The assent given by the Governor of Karnataka, Vajubhai Vala to the Karnataka Lokayukta (Amendment) Bill of 2015 now empowers the Legislature of the state to remove the Lokayukta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X