ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸಕರಿಗೆ ಬಂಪರ್ ಕೊಡುಗೆ, ಅನುದಾನ 3 ಕೋಟಿಗೆ ಏರಿಕೆ

|
Google Oneindia Kannada News

ಬೆಂಗಳೂರು, ಮಾ.5 : ಎಲ್ಲಾ ಪಕ್ಷದ ಶಾಸಕರ ಬಹುದಿನ ಬೇಡಿಕೆಯನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನವನ್ನು 3 ಕೋಟಿ ರೂ.ಗಳಿಗೆ ಹೆಚ್ಚಿಸುವ ಕುರಿತು ಬಜೆಟ್‌ನಲ್ಲಿ ಘೋಷಣೆ ಮಾಡಲಿದ್ದಾರೆ.

ಶಾಸಕರಿಗೆ ಪ್ರತಿ ವರ್ಷ 2 ಕೋಟಿ ರೂ.ಗಳ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನವನ್ನು ಸದ್ಯ ನೀಡಲಾಗುತ್ತಿದೆ. ಇದನ್ನು 5 ಕೋಟಿ ರೂ.ಗಳಿಗೆ ಹೆಚ್ಚಳ ಮಾಡಬೇಕು ಎಂದು ಶಾಸಕರು ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದರು. [ಕರ್ನಾಟಕದ ಶಾಸಕರ ಸಂಬಳ ಎಷ್ಟು ಗೊತ್ತಾ?]

Siddaramaiah

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರು ಬೇಡಿಕೆಯನ್ನು ಈಡೇರಿಸಲು ನಿರ್ಧರಿಸಿದ್ದು, ಅನುದಾನವನ್ನು 1 ಕೋಟಿ ರೂ.ಗಳಿಗೆ ಹೆಚ್ಚಿಸಲು ನಿರ್ಧರಿಸಿದ್ದಾರೆ. ಮಾರ್ಚ್ 13ರಂದು ಮಂಡನೆಯಾಗುವ ಬಜೆಟ್‌ನಲ್ಲಿ ಅನುದಾನವನ್ನು 2 ರಿಂದ 3 ಕೋಟಿಗೆ ಹೆಚ್ಚಳ ಮಾಡುವ ಕುರಿತು ಅಧಿಕೃತ ಘೋಷಣೆಯಾಗಲಿದೆ.

ಮೂಲಸೌಕರ್ಯಕ್ಕೆ ಆದ್ಯತೆ : ಶಾಸಕರಿಗೆ ನೀಡುವ ವಾರ್ಷಿಕ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ರಸ್ತೆ, ಕುಡಿಯುವ ನೀರು, ಚರಂಡಿ, ಬೀದಿ ದೀಪ, ಗ್ರಾಮ ಪಂಚಾಯಿತಿಗಳಿಗೆ ಕಂಪ್ಯೂಟರ್ ಒದಗಿಸುವುದು, ಶಾಲೆಗಳಲ್ಲಿ ಕೊಠಡಿ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದಾಗಿದೆ.

1 ಕೋಟಿ ಹೆಚ್ಚು ಮಾಡಿದ್ದರು : 2013ರ ತನಕ ಶಾಸಕರಿಗೆ 1 ಕೋಟಿ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬರುತ್ತಿತ್ತು. ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡು ಮಂಡಿಸಿದ ಮೊದಲ ಬಜೆಟ್‌ನಲ್ಲಿಯೇ ಇದನ್ನು ಸಿದ್ದರಾಮಯ್ಯ ಅವರು 2 ಕೋಟಿಗೆ ಹೆಚ್ಚಿಸಿದ್ದರು. ಸದ್ಯ ಮತ್ತೊಂದು ಕೋಟಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ.

English summary
Karnataka Chief Minister Siddaramaiah decided to fulfill much-debated demand for an increase in MLAs' Local Area Development (LAD) fund. The annual Rs 2 core LAD fund likely to be raised to 3 core.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X