ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಗುರುವಾರದದ ತುಣುಕು ಸುದ್ದಿ

|
Google Oneindia Kannada News

ಬೆಂಗಳೂರು, ನ. 20 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

ಸಮಯ 3 ಗಂಟೆ : ಇಂಧನ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಗರಣಗಳ ಬಗ್ಗೆ ದಾಖಲಾತಿಗಳನ್ನು ನಾನು ಬಿಡುಗಡೆ ಮಾಡಿದರೆ ಇಬ್ಬರು ಸಚಿವರು ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಸಮಯ 2 ಗಂಟೆ : ನಿಗಮ ಮಂಡಳಿಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಸ್ಪಷ್ಟ ಸೂಚನೆ ನೀಡಿದ್ದಾರೆ. ಡಿಸೆಂಬರ್‌ನಲ್ಲಿ ನಡೆಯಲಿರುವ ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಮಾಡಬೇಕು ಎಂದು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಮಯ 12.40 : ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗುಂಡಿ-ಲೊಂಡಾ ರೈಲ್ವೆ ಮಾರ್ಗದಲ್ಲಿನ ಹಳಿಗೆ ಬಾಂಬ್ ಇಟ್ಟಿರುವ ಕರೆ ಬಂದಿದ್ದು. ಸ್ಥಳಕ್ಕೆ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಆಗಮಿಸಿದ್ದಾರೆ. ಹಳಿ ಮೇಲೆ ಎರಡು ಜೀವಂತ ಬಾಂಬ್ ಪತ್ತೆಯಾಗಿದ್ದು, ಒಂದು ಬಾಂಬ್ ನಿಷ್ಕ್ರಿಯಗೊಳಿಸಲಾಗಿದೆ.

ಸಮಯ 12 ಗಂಟೆ : ಗುರುವಾರ ತೆರೆ ಕಂಡಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಅಂಬರೀಶ ಚಿತ್ರದ ವೀಕ್ಷಣೆಗೆಂದು ಚಿತ್ರಮಂದಿರಕ್ಕೆ ಬಂದಿದ್ದ ದರ್ಶನ್‌ ಸಹೋದರ ದಿನಕರ್‌ ತೂಗುದೀಪ ಅವರ ಪರ್ಸ್‌ ಕದಿಯಲು ಯತ್ನಿಸಿದ ಘಟನೆ ನಡೆದಿದೆ. ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಘಟನೆ ನಡೆಸಿದ್ದು, ಕಳ್ಳನಿಗೆ ದಿನಕರ್ ಥಳಿಸಿದ್ದಾರೆ.

ಸಮಯ 11 ಗಂಟೆ : ಸಚಿವರಾದ ಕೆ.ಜೆ. ಜಾರ್ಜ್‌, ದಿನೇಶ್ ಗುಂಡೂರಾವ್‌, ಎಚ್‌.ಎಸ್‌. ಮಹಾ­ದೇವ ಪ್ರಸಾದ್‌ ಮತ್ತು ಖಮರುಲ್‌ ಇಸ್ಲಾಂ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು. ನಾಲ್ವರು ಸಚಿವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸುತ್ತಿದೆ.

ಸಮಯ 10 ಗಂಟೆ : ಜಾಲಹಳ್ಳಿ ಬಳಿ ಇರುವ ಆರ್ಕಿಡ್ಸ್ ಇಂಟರ್‌ನ್ಯಾಶನಲ್ ಶಾಲೆಯ ಪ್ರಿ ನರ್ಸರಿ, 6 ಹಾಗೂ 7ನೇ ತರಗತಿಗಳಿಗೆ ರಜೆ ನೀಡಲಾಗಿದೆ. ಈ ಕುರಿತು ಶಾಲೆಯ ಆಡಳಿತ ಮಂಡಳಿ ಪೋಷಕರಿಗೆ ಎಸ್‌ಎಂಎಸ್ ಕಳುಹಿಸಿದೆ.

ಸಮಯ 9 ಗಂಟೆ : ಅನೂಪ್‌ ಉಪಾಧ್ಯಾಯ ಇನ್ಫೋಸಿಸ್ ಹೊಸ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ನೇಮಕಗೊಂಡಿದ್ದಾರೆ. ನವೆಂಬರ್‌ 30 ರಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಅನೂಪ್‌ ಅವರು ಕಳೆದ ಎರಡು ದಶಕಗಳಿಂದ ಇನ್ಫೋಸಿಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಕಂಪೆನಿಯ ಹಣಕಾಸು ಸೇವೆಗಳ ಜಾಗತಿಕ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸಮಯ 8 ಗಂಟೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪುತ್ರ ಮತ್ತು ಸಚಿವ ಶಾಮನೂರು ಶಿವಶಂಕರಪ್ಪ ಮೊಮ್ಮಗಳ ನಿಶ್ಚಿತಾರ್ಥ ನ.24ರಂದು ದಾವಣಗೆರೆಯಲ್ಲಿ ನಡೆಯಲಿದೆ. ಕೆಲವು ದಿನಗಳಿಂದ ಎರಡೂ ಕುಟುಂಬಗಳ ನಡುವೆ ಮದುವೆ ಮಾತುಕತೆ ನಡೆಯುತ್ತಿತ್ತು. [ಶಾಮನೂರು - ಶೆಟ್ಟರ್ ಕುಟುಂಬದಲ್ಲಿ ಲಗ್ನದ ಸುದ್ದಿ]

karnataka

ಸಮಯ 7.30 : 'ಭ್ರಷ್ಟ ಸಚಿವರನ್ನು ತೊಲ­ಗಿಸಿ, ಕರ್ನಾಟಕ ಉಳಿಸಿ' ಎಂಬ ಘೋಷವಾಕ್ಯದೊಂದಿಗೆ ಬಿಜೆಪಿ ಇಂದು ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಿದೆ. ಸಚಿವರಾದ ಕೆ.ಜೆ. ಜಾರ್ಜ್‌, ದಿನೇಶ್ ಗುಂಡೂರಾವ್‌, ಎಚ್‌.ಎಸ್‌. ಮಹಾ­ದೇವ ಪ್ರಸಾದ್‌ ಮತ್ತು ಖಮರುಲ್‌ ಇಸ್ಲಾಂ ವಿರುದ್ಧ ಪ್ರತಿಭಟನೆ ನಡೆಸಲಿದ್ದು, ನಂತರ ರಾಜ­ಭವನಕ್ಕೆ ತೆರಳಿ, ಇವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಮನವಿ ಸಲ್ಲಿಸಲಿದ್ದಾರೆ.

English summary
Karnataka top news in brief for the day : Karnataka Congress Govt has failed BJP organized a protest march against state govt on various issues on November 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X