ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಸೋಮವಾರದ ತುಣುಕು ಸುದ್ದಿಗಳು

|
Google Oneindia Kannada News

ಬೆಂಗಳೂರು, ಅ. 17 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

ಸಮಯ 12 ಗಂಟೆ : ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾದ ಗಾಯಕಿ ಪ್ರೇಮಲತಾ ದಿವಾಕರ್ ಮತ್ತು ರಾಘವೇಶ್ವರ ಶ್ರೀಗಳು. ಎರಡು ಗಂಟೆ ವಿಚಾರಣೆ ಬಳಿಕ ಪ್ರೇಮಲತಾ ದಿವಾಕರ್ ವಾಪಸ್ ಹೋಗಿದ್ದಾರೆ. ಶ್ರೀಗಳ ವಿಚಾರಣೆ ನಡೆಯುತ್ತಿದ್ದು, ಇಂದು ವೈದ್ಯಕೀಯ ಪರೀಕ್ಷೆ ನಡೆಸುವ ಸಾಧ್ಯತೆ

ಸಮಯ 11 ಗಂಟೆ : ಯುವರಾಜ್ ನಾಯಕ್ (55) ಎಂಬ ಎಫ್‌ಡಿಎ ತಾಲೂಕು ಪಂಚಾಯತ್ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಸೊರಬದಲ್ಲಿ ನಡೆದಿದೆ.

ಸಮಯ 10 ಗಂಟೆ : ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಪಾಟೀಲ್, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಲಿಸಿದ್ದರು. ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಬಿಜೆಪಿ ಸೇರುತ್ತಿರುವುದಾಗಿ ಅವರು ಹೇಳಿದ್ದಾರೆ.

ಸಮಯ 9.15 : ಕೆಂಗೇರಿ ಬಿಎಂಟಿಸಿ ಡಿಪೋದಲ್ಲಿ ಲಕ್ಷಾಂತರ ರೂ ಕಳ್ಳತನ, ಸ್ಥಳಕ್ಕೆ ಧಾವಿಸಿದ ಕೆಂಗೇರಿ ಪೊಲೀಸರು

ಸಮಯ 9 ಗಂಟೆ : ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮಿಗಳು ಇಂದು ಸಹ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಮಂಗಳವಾರ, ಶುಕ್ರವಾರ ಮತ್ತು ಶನಿವಾರ ಶ್ರೀಗಳ ವಿಚಾರಣೆ ನಡೆದಿದ್ದು, ಇಂದು ವಿಚಾರಣೆಗೆ ಬರುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

Karnataka

ಸಮಯ 8 ಗಂಟೆ : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಾಧಾರಣ ಮಳೆ­ಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಲಕ್ಷದ್ವೀಪದಲ್ಲಿನ ಸುಳಿಗಾಳಿಯಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದ್ದು, ಸಾಧಾರಣ ಮಳೆಯಾ­ಗುತ್ತಿದೆ. ಇದು ಇನ್ನೂ ಎರಡು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಬಿ.ಪುಟ್ಟಣ್ಣ ಹೇಳಿದ್ದಾರೆ.

English summary
Karnataka top news in brief for the day: Rain would occur at a few places over Coastal Karnataka and South Interior parts of state for next two days said, India Meteorological Department Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X