ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಮಂಗಳವಾರದ ತುಣುಕು ಸುದ್ದಿಗಳು

|
Google Oneindia Kannada News

ಬೆಂಗಳೂರು, ಅ. 21 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

ಸಮಯ 5 ಗಂಟೆ : ಕರ್ನಾಟಕ ವಿವಿಯಲ್ಲಿನ ಹಗರಣದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಬಂಧಿಸಿರುವ ವಿವಿ ಕುಲಪತಿ ಎಚ್.ಬಿ.ವಾಲೀಕಾರ ಅವರಿಗೆ ಎರಡು ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ವಾಲೀಕಾರ ಅವರು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. [ಧಾರವಾಡ ವಿವಿಯಲ್ಲಿ ಏನಿದು ಹಗರಣ]

ಸಮಯ 4 ಗಂಟೆ : ದೀಪಾವಳಿ ಬಳಿಕ ನಿಗಮ-ಮಂಡಳಿ ನೇಮಕಾತಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸಂಪುಟ ವಿಸ್ತರಣೆ ವಿಳಂಬವಾಗಲು ನಾನು ಕಾರಣವಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

Karnataka

ಸಮಯ 3 ಗಂಟೆ : ಆಳಂದ ಕ್ಷೇತ್ರದ ಮಾಜಿ ಶಾಸಕ ಹಾಗೂ ಜೆಡಿಎಸ್ ನಾಯಕ ಸುಭಾಷ್ ಗುತ್ತೇದಾರ್ ಬಿಜೆಪಿ ಸೇರಲು ನಿರ್ಧರಿದ್ದಾರೆ. ಮಂಗಳವಾರ ಬೆಳಗ್ಗೆ ಧಾರವಾಡದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿದ್ದ ಗುತ್ತೇದಾರ್ ಸಂಜೆ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.

ಸಮಯ 2 ಗಂಟೆ : ಬೆಂಗಳೂರಿನಲ್ಲಿ ಫುಟ್‌ಪಾತ್ ತೆರವು ವಿಚಾರ, ಕ್ರಮ ಕೈಗೊಳ್ಳದ ಅಧಿಕಾರಿಗಳ ವಿವರ ನೀಡಲು ಹೈಕೋರ್ಟ್ ಸೂಚನೆ. ನ.5ರಂದು ಬಿಬಿಎಂಪಿ ಆಯುಕ್ತರ ಖುದ್ದು ಹಾಜರಾತಿಗೆ ಕೋರ್ಟ್ ಸೂಚನೆ. ಮೂರು ತಿಂಗಳಲ್ಲಿ ಫುಟ್‌ಪಾತ್ ತೆರವುಗೊಳಿಸಲು ಕೋರ್ಟ್ ಆದೇಶ ನೀಡಿತ್ತು. [ಬಿಬಿಎಂಪಿ ಮೇಯರ್ ಸಂದರ್ಶನ ಓದಿ]

ಸಮಯ 1 ಗಂಟೆ : ಯಡಿಯೂರಪ್ಪ, ಈಶ್ವರಪ್ಪ, ಬಿ.ವೈ.ರಾಘವೇಂದ್ರ, ಅರುಣಾದೇವಿ ಅವರ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸಲು ಒಪ್ಪಿಗೆ ನೀಡಿದ ಹೈಕೋರ್ಟ್

ಸಮಯ 12 ಗಂಟೆ : ಧಾರವಾಡ ವಿವಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌಲ್ಯಮಾಪನ ಕುಲಸಚಿವ ಡಾ.ಎಚ್.ಟಿ.ಪೋತೆ, ಕುಲಪತಿಗಳ ಆಪ್ತ ಸಹಾಯಕ ಎಸ್.ಎಲ್.ಬೀಳಗಿ ಅವರನ್ನು ಪೊಲೀಸರು ಲೋಕಾಯುಕ್ತ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಸಮಯ 11 ಗಂಟೆ : ಕರ್ನಾಟಕದ ಪೊಲೀಸರಿಗೆ ದೀಪಾವಳಿ ಗಿಫ್ಟ್‌ ಕೊಟ್ಟ ಸಿಎಂ ಸಿದ್ದರಾಮಯ್ಯ ಗುಂಪು ವಿಮೆ, ಪರಿಹಾರ ಧನಗಳಲ್ಲಿ ಹೆಚ್ಚಳ ಘೋಷಣೆ.

ಸಮಯ 10 ಗಂಟೆ : ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್‌ ತಾಲೂಕಿನ ಬನಹಳ್ಳಿಯಲ್ಲಿ ನಡೆದಿದೆ. ಮಕ್ಕಳಿಗೆ ಊಟದಲ್ಲಿ ವಿಷಹಾಕಿ ಕೊಟ್ಟ ದಂಪತಿಗಳು ನಂತರ ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಮಯ 9 ಗಂಟೆ : ಅಕ್ರಮ ಆಸ್ತಿಗಳಿಗೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರಿಗೆ ಜಾಮೀನು ಸಿಕ್ಕ ಹಿನ್ನಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಎಐಎಡಿಎಂಕೆ ಪಕ್ಷದ ಕರ್ನಾಟಕದ ಕಾರ್ಯದರ್ಶಿ ಪುಗಳೇಂದಿ ಅವರು ಈ ಪೂಜೆಯನ್ನು ಹಮ್ಮಿಕೊಂಡಿದ್ದು, ಅಮ್ಮ ಆರೋಪ ಮುಕ್ತರಾಗಬೇಕು ಎಂದು ಬೇಡಿಕೊಂಡಿದ್ದಾರೆ.

English summary
Karnataka top news in brief for the day: Four members allegedly committed suicide at their residence at Banahalli of Anekal taluk. Hebbagodi police registered the case and investigating.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X