ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಮಂಗಳವಾರದ ತುಣುಕು ಸುದ್ದಿ

|
Google Oneindia Kannada News

ಬೆಂಗಳೂರು, ಅ. 28 : ಕರ್ನಾಟಕದಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ರಾಜ್ಯದ ಒಟ್ಟಾರೆ ಸುದ್ದಿಗಳ ಸಂಗ್ರಹ ನಿಮಗೆ ನೀಡುವ ಪ್ರಯತ್ನ ಇದಾಗಿದೆ.

ಸಮಯ 12 ಗಂಟೆ : ರಸ್ತೆ ಬದಿ ನಿಲ್ಲಿಸಿದ್ದ 5 ಬೈಕ್‌ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಉತ್ತರ ಕರ್ನಾಟಕದ ಕಾರವಾರದ ಕುಟಿನ ರಸ್ತೆಯಲ್ಲಿ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗವಿಸಿ ಬೆಂಕಿ ನಂದಿಸಿದ್ದಾರೆ. ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಯ 11.40 : ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆ ಹಿನ್ನಲೆಯಲ್ಲಿ ವೈದ್ಯರೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಬೇಕಾಗಿದ್ದ ಸಭೆ ರದ್ದಾಗಿದೆ. ಬುಧವಾರ ಮಧ್ಯಾಹ್ನ 3.30ಕ್ಕೆ ಸಭೆ ನಡೆಯಲಿದೆ.

ಸಮಯ 11 ಗಂಟೆ : ರಾಜೀನಾಮೆ ನೀಡಿರುವ ವೈದ್ಯರ ಜೊತೆ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.

ಸಮಯ 10 ಗಂಟೆ : ಆರೋಗ್ಯ ಸಚಿವ ಯು.ಟಿ.ಖಾದರ್ ನಿವಾಸದಲ್ಲಿ ನಡೆದ ವೈದ್ಯರ ಸಭೆ ಅಂತ್ಯ.

ಸಮಯ 9 ಗಂಟೆ : ಮಂಗಳವಾರ ಬೆಳಗ್ಗೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಹಾಲು ತರಲು ತೆರಳಿದ್ದ ಮುತ್ತುಲಕ್ಷ್ಮೀ (50) ಅವರ ಮೃತದೇಹ ರಸ್ತೆಯಲ್ಲಿ ಪತ್ತೆಯಾಗಿದೆ. ತಲೆಗೆ ರಾಡ್‌ನಿಂದ ಹೊಡೆದು ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಮಯ 8.10 : ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಬೀದರ್, ಗುಲ್ಬರ್ಗ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಧ್ಯಯನ ನಡೆಸಲು ಕೇಂದ್ರದ ತಂಡ ಆಗಮಿಸಿದೆ. ಇಂದು ಮತ್ತು ಬುಧವಾರ ತಂಡ ವಿವಿಧ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಲಿದೆ.

Karnataka

ಸಮಯ 7.30 : ಲೋಕಾಯುಕ್ತರಿಂದ ಬಂಧನಕ್ಕೊಳಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಚ್.ಬಿ.ವಾಲೀಕಾರ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಿಮ್ಸ್ ಆಸ್ಪತ್ರೆ ವೈದ್ಯರ ಸಲಹೆಯಂತೆ ವಾಲೀಕಾರ ಅವರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ. [ಕರ್ನಾಟಕ ವಿವಿ ಕುಲಪತಿ ಎಚ್.ಬಿ.ವಾಲೀಕಾರ ಬಂಧನ]

English summary
Karnataka top news in brief for the day : The former Vice-Chancellor of Karnataka University, Dharwad, H.B. Walikar, admitted to Sri Jayadeva Institute of Cardiovascular Sciences and Research in Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X