ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆಗೆ ರಾಷ್ಟ್ರ ಪ್ರಶಸ್ತಿ ಹ್ಯಾಟ್ರಿಕ್

ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶಸ್ತಿ ವಿಚಾರ ಪ್ರಕಟಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್.

|
Google Oneindia Kannada News

ಬೆಂಗಳೂರು, ಏಪ್ರಿಲ್ 22: ಸತತ ಮೂರು ವರ್ಷಗಳಿಂದ ಕರ್ನಾಟಕದ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಪಂಚಾಯತ್ ರಾಜ್ ವಲಯದಲ್ಲಿ ಸಾಧನೆಗಾಗಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನವಾಗಿದೆ.

ಮೈಸೂರಿನ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಈ ವಿಷಯ ತಿಳಿಸಿದರು.

Karnataka Panchayat Raj department bags central government award for hatrick

ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಪ್ರಸ್ತುತ ಸರ್ಕಾರದ ಅವಧಿಯಲ್ಲಿ ಮೂರನೇ ಬಾರಿ ಪ್ರಶಸ್ತಿ ದೊರಕಿರುವುದರಿಂದ ಪ್ರಶಸ್ತಿ ಪಡೆಯುವಲ್ಲಿ ಹ್ಯಾಟ್ರಿಕ್ ಸಾಧಿಸಿದೆ ಎಂದು ಅವರು ತಿಳಿಸಿದರು.

ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನದ ಮೂಲಕ ಪಂಚಾಯಿತಿಗಳ ಕಾರ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ಹೊಣೆಗಾರಿಕೆಗಳನ್ನು ಸಾಧಿಸುವಲ್ಲಿ ಮಾಡಿರುವ ಉನ್ನತ ಪ್ರಯತ್ನಗಳನ್ನು ಗುರುತಿಸಿ, ವಾರ್ಷಿಕ ಇ-ಪುರಸ್ಕಾರ್ ನೀಡುವ ಕೇಂದ್ರ ಸರ್ಕಾರದ ಪ್ರಶಸ್ತಿಗೆ ಕರ್ನಾಟಕ ಮೊದಲ ಬಹುಮಾನ ಪಡೆದಿದೆ ಎಂದು ಅವರು ಹೇಳಿದರು.

ಈ ಬಹುಮಾನವನ್ನು ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್ ಎಂದು ಆಚರಿಸಲಾಗುವ ಏಪ್ರಿಲ್ 24 ರಂದು ಉತ್ತರ ಪ್ರದೇಶದ ರಾಜಧಾನಿ ಲಖನೌದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಎಚ್.ಕೆ. ಪಾಟೀಲರವರಿಗೆ ಪ್ರಧಾನ ಮಾಡುವರು ಎಂದು ಸಚಿವರು ವಿವರಿಸಿದರು.

English summary
Karnataka Rural Development and Panchayat Raj Department has bagged the central government award for third consecutive time. Karnataka Panchayat Raj minister H.K. Patil told in a press meet in Mysore on April 22, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X