ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೊಲೀಸ್‌ ನೇಮಕಾತಿಗೆ ಅರ್ಜಿ ಸಲ್ಲಿಸುವ ವಯೋಮಿತಿ ಹೆಚ್ಚಳ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 10 : ಪೊಲೀಸ್‌ ನೇಮಕಾತಿಗೆ ಅರ್ಜಿ ಸಲ್ಲಿಸುವ ಎಲ್ಲಾ ಸಮುದಾಯದವರ ಅರ್ಹತಾ ವಯೋಮಿತಿಯನ್ನು 2 ಎರಡು ವರ್ಷ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದರಿಂದಾಗಿ ಹೆಚ್ಚಿನ ಜನರಿಗೆ ಪೊಲೀಸ್ ಇಲಾಖೆ ಸೇರಲು ಅವಕಾಶ ಸಿಗಲಿದೆ.

ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ಕೈಗೊಳ್ಳಾಗಿದೆ. ಗುರುವಾರ ನಡೆದ ಸಚಿವ ಸಂಪುಟದ ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.[ಬಂದ್, ಬಕ್ರೀದ್, ಗಣೇಶ ಚತುರ್ಥಿ...ಪೊಲೀಸರಿಗೆ ಬಿಡುವಿಲ್ಲ]

police

ಸಾಮಾನ್ಯ ಮತ್ತು ಹಿಂದುಳಿದ ವರ್ಗದವರು 26 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು 28 ವರ್ಷ ತುಂಬುವವರೆಗೆ ಮಾತ್ರ ಪೊಲೀಸ್ ನೇಮಕಾತಿಗೆ ಅರ್ಜಿ ಸಲ್ಲಿಸಬೇಕಿತ್ತು. ಅದನ್ನು 2 ವರ್ಷ ಏರಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಇದರಿಂದಾಗಿ ಹೆಚ್ಚಿನ ಜನ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿದೆ.[ಗ್ರಾಮ ಪ೦ಚಾಯಿತಿ ಕಾರ್ಯದರ್ಶಿ, ಪಿಡಿಒ ನೇಮಕಾತಿ ವಿವರ]

ಹೊಸ ನಿಯಮಾವಳಿ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 30 ವರ್ಷ, ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 28 ವರ್ಷ ಪೂರ್ಣಗೊಳ್ಳುವವರೆಗೆ ಪೊಲೀಸ್‌ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.[1,130 ಅತಿಥಿ ಉಪನ್ಯಾಸಕರ ನೇಮಕಕ್ಕೆ ಒಪ್ಪಿಗೆ]

English summary
Age limit for police recruitment increased in Karnataka. Now 28 age limit to general and 30 years for reserved categories.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X