ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿರಿಯ ಪತ್ರಕರ್ತರಿಗೆ, ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ

By Prasad
|
Google Oneindia Kannada News

ಬೆಂಗಳೂರು, ಮೇ 21 : ಕರ್ನಾಟಕ ವೃತಿನಿರತ ಪತ್ರಕರ್ತರ ಸಂಘದ ವತಿಯಿಂದ ಮೇ 23, ಶನಿವಾರದಂದು ಬೆಂಗಳೂರಿನ ಕಬ್ಬನ್ ಆವರಣದಲ್ಲಿರುವ ಎನ್.ಜಿ.ಒ. ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸಂಘದ ಸ್ಮರಣ ಸಂಚಿಕೆ ಬಿಡುಗಡೆ, ಹಿರಿಯ ಪತ್ರಕರ್ತರಿಗೆ ಹಾಗೂ ಪ್ರತಿಭಾವಂತ ಪತ್ರಕರ್ತರ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮೂಲಭೂತ ಸೌಕರ್ಯ ಹಾಗೂ ಹಜ್ ಸಚಿವರಾದ ಆರ್. ರೋಶನ್ ಬೇಗ್ ಮಾಡಲಿದ್ದಾರೆ. ಸ್ಮರಣ ಸಂಚಿಕೆಯನ್ನು ಬೆಂಗಳೂರು ಉಸ್ತುವಾರಿಯನ್ನು ಹೊತ್ತಿರುವ ಸಾರಿಗೆ ಸಚಿವರಾದ ಆರ್. ರಾಮಲಿಂಗಾರೆಡ್ಡಿ ಮಾಡಲಿದ್ದಾರೆ. [ಪಿಯುಸಿ ಸಾಧನೆ ನಕ್ಷತ್ರ ಶಾಲಿನಿಗೆ ನಿದ್ದೆಯ ಗೊಡವೆಯಿಲ್ಲ]

Karnataka Professional Journalists Association to honor talented children

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ಹಿರಿಯ ಸ್ವಾತಂತ್ರ ಹೋರಾಟಗಾರರಾದ ಎಚ್.ಎಸ್. ದೊರೆಸ್ವಾಮಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಎಚ್.ಸಿ. ಶಿವರಾಮ್ ರವರು ಮುಖ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಇದೇ ಸಂದರ್ಭದಲ್ಲಿ 2015ನೇ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ಪತ್ರಕರ್ತರ ಮಕ್ಕಳಿಗೆ ಸನ್ಮಾನ ಹಾಗೂ ಬಡಮಕ್ಕಳಿಗೆ ಆರ್ಥಿಕ ಸಹಾಯ ನೀಡುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. [ಪಿಯು ಫಲಿತಾಂಶ : ವಿದ್ಯಾರ್ಥಿಗಳ ಯಶಸ್ಸಿನ ಕಥೆ]

ರಾಜ್ಯದಲ್ಲಿರುವ ಪತ್ರಕರ್ತರು ತಮ್ಮ ಮಕ್ಕಳು ಎಸ್.ಎಸ್.ಎಲ್.ಸಿ/ಪಿ.ಯು.ಸಿ. ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿ ತೇರ್ಗಡೆಯಾಗಿದ್ದಲ್ಲಿ ಅಂತಹ ಪತ್ರಕರ್ತರು ಕೂಡಲೇ ಸಂಘದ ಪದಾಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಆಯೋಜಕರು ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಘದ ಅಧ್ಯಕ್ಷ ಅಥವಾ ಪ್ರಧಾನ ಕಾರ್ಯದರ್ಶಿಯನ್ನು ಸಂಪರ್ಕಿಸಬಹುದು.

ಎಸ್. ಮುನಿರಾಜು - ಮೋ. : 99028 63802
ಬಿ.ಎಸ್. ಅಲಗು... - ಮೋ. : 89701 59998

English summary
Karnataka Professional Journalists Association will be honoring senior journalists and talented children of journalists, who have scored more than 90 percent marks in SSLC and 2nd PUC examination. The event will be held on 23rd May, Saturday at NGO auditorium, Press Club Bangalore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X